‘ವೋಟ್ ಮಾಡಿ, ಊಟ ಮಾಡಿ’: ಬೆಂಗಳೂರು ಹೋಟೆಲ್​ಗಳಲ್ಲಿ ಸಿಗಲಿದೆ ಉಚಿತ ದೋಸೆ, ಸಿಹಿ ತಿಂಡಿ!

ಮತದಾನ ಮಾಡಿದವರಿಗೆ ಉಚಿತ ಆಹಾರ ನೀಡುವ ಹೋಟೆಲ್​ಗಳ ಅಭಿಯಾನಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶದ ಮೂಲಕ ಮಂಗಳವಾರ ಅನುಮತಿ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ನಗರದ ಕೆಲವು ಹೋಟೆಲ್​ಗಳು ಉಚಿತ, ರಿಯಾಯಿತಿ ದರದ ಆಫರ್ ನೀಡಿವೆ. ಈ ಮಧ್ಯೆ, ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ಮತದಾನಕ್ಕೆ ಉಚಿತ ಆಟೊ, ಟ್ಯಾಕ್ಸಿ ಸೇವೆಯನ್ನೂ ಘೋಷಿಸಲಾಗಿದೆ. ವಿವರ ಇಲ್ಲಿದೆ.

‘ವೋಟ್ ಮಾಡಿ, ಊಟ ಮಾಡಿ’: ಬೆಂಗಳೂರು ಹೋಟೆಲ್​ಗಳಲ್ಲಿ ಸಿಗಲಿದೆ ಉಚಿತ ದೋಸೆ, ಸಿಹಿ ತಿಂಡಿ!
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Apr 25, 2024 | 7:47 AM

ಬೆಂಗಳೂರು, ಏಪ್ರಿಲ್ 25: ಮತದಾನದ ಬಗ್ಗೆ ಜಾಗೃತಿ (Voting Awareness) ಮೂಡಿಸುವುದಕ್ಕಾಗಿ ಮತ್ತು ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಬೆಂಗಳೂರಿನ ಕೆಲವು ಹೋಟೆಲ್​​ಗಳು (Bengaluru Hotels) ವಿಶಿಷ್ಟ ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿವೆ. ಕಳೆದ ವರ್ಷ ವಿಧಾನಸಭೆ ಚುನಾವಣೆಯಲ್ಲಿ ಮಾಡಿದ್ದಂತೆಯೇ ಈ ಬಾರಿಯೂ ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಮತ ಚಲಾಯಿಸಿ ಬಂದವರಿಗೆ ಉಚಿತ ಆಹಾರ, ರಿಯಾಯಿತಿ ದರದಲ್ಲಿ ತಿಂಡಿ ನೀಡುವ ಬಗ್ಗೆ ಘೋಷಣೆ ಮಾಡಿವೆ.

‘ವೋಟ್ ಮಾಡಿ, ಊಟ ಮಾಡಿ’

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರ್ಯಾಂಡ್ ಹೋಟೆಲ್ ‘ವೋಟ್ ಮಾಡಿ, ಊಟ ಮಾಡಿ’ ಅಭಿಯಾನದಡಿ ಮತದಾನದ ದಿನದಂದು ಮತದಾನ ಮಾಡಿದ ಗುರುತು ತೋರಿಸಿದವರಿಗೆ ಬೆಣ್ಣೆ ದೋಸೆ, ಲಡ್ಡು ಮತ್ತು ಜ್ಯೂಸ್ ನೀಡುವುದಾಗಿ ಘೋಷಿಸಿದೆ. 2018 ರ ವಿಧಾನಸಭಾ ಚುನಾವಣೆ ವೇಳೆಯೂ ಹೋಟೆಲ್ ಇಂತಹ ಕೊಡುಗೆ ನೀಡಿತ್ತು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನಲ್ಲಿ ಕೇವಲ ಶೇ 54 ರಷ್ಟು ಮತದಾನವಾಗಿತ್ತು ಎಂಬುದು ಬೇಸರದ ಸಂಗತಿಯಾಗಿದೆ. ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ನಮ್ಮ ಹಕ್ಕು. ಈ ಕುರಿತು ಜಾಗೃತಿ ಮೂಡಿಸುವ ನಮ್ಮ ನಿರಂತರ ಪ್ರಯತ್ನದ ಭಾಗವಾಗಿ ಕೆಲವು ಹೋಟೆಲ್​​ಗಳು ಕೆಲವು ತಿನಿಸುಗಳನ್ನು ರಿಯಾಯಿತಿ ದರದಲ್ಲಿ ಅಥವಾ ಉಚಿತವಾಗಿ ಮತದಾನದ ದಿನದಂದು ನೀಡುತ್ತವೆ. ಸಿಹಿತಿಂಡಿಗಳು ಮತ್ತು ಕೇಕ್‌ಗಳಂತಹ ಕೆಲವು ಆಹಾರ ಪದಾರ್ಥಗಳನ್ನು ಉಚಿತವಾಗಿ ನೀಡುತ್ತಿವೆ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್ ತಿಳಿಸಿದ್ದಾರೆ.

ಮತದಾನ ಮಾಡಿದವರಿಗೆ ಉಚಿತ ಆಹಾರ ನೀಡುವ ಹೋಟೆಲ್​ಗಳ ಅಭಿಯಾನಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶದ ಮೂಲಕ ಮಂಗಳವಾರ ಅನುಮತಿ ನೀಡಿತ್ತು.

ಇದನ್ನೂ ಓದಿ: ಮತದಾನ ಮಾಡಿದವರಿಗೆ ಉಚಿತ ಆಹಾರದ ಕೊಡುಗೆ ನೀಡಲು ಹೋಟೆಲ್​​ಗಳಿಗೆ ಹೈಕೋರ್ಟ್ ಅನುಮತಿ

ಹಿರಿಯ ನಾಗರಿಕರು, ಅಂಗವಿಕಲರಿಗೆ ಉಚಿತ ಪ್ರಯಾಣ

ಹಿರಿಯ ನಾಗರಿಕರು ಮತ್ತು ಅಂಗವಿಕಲ ಮತದಾರರಿಗೆ ಮತಗಟ್ಟೆಗೆ ಹೋಗಿ ಬರಲು Rapido ಉಚಿತ ಸೇವೆ ಘೋಷಣೆ ಮಾಡಿದೆ. ಭಾರತೀಯ ಚುನಾವಣಾ ಆಯೋಗ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯೊಂದಿಗೆ ಸೇರಿಕೊಂಡು Rapido ಈ ಕ್ರಮಕ್ಕೆ ಮುಂದಾಗಿದೆ. SawaariZimmedariKi ಅಭಿಯಾನದಡಿ ಶುಕ್ರವಾರ ಹಿರಿಯ ನಾಗರಿಕರು ಮತ್ತು ವಿಕಲಚೇತನ ಮತದಾರರಿಗೆ ಉಚಿತ ಆಟೋರಿಕ್ಷಾ ಮತ್ತು ಕ್ಯಾಬ್ ಸೇವೆ ದೊರೆಯಲಿದೆ.

ಈ ವಿಶೇಷ ಸೇವೆಯನ್ನು ಪಡೆಯಲು ಮತದಾರರು ‘VOTENOW’ ಕೋಡ್ ಅನ್ನು ಬಳಸಬಹುದು ಎಂದು Rapido ತಿಳಿಸಿದೆ.

ಬಿಡದಿ ಬಳಿಯ ಜನಪ್ರಿಯ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್ಲಾ, ಮತದಾನದ ಗುರುತು ಪ್ರದರ್ಶಿಸುವವರಿಗೆ ಏಪ್ರಿಲ್ 26, 27 ಮತ್ತು 28 ರಂದು ಟಿಕೆಟ್‌ ಮೇಲೆ ಶೇಕಡಾ 15 ರಷ್ಟು ರಿಯಾಯಿತಿಯನ್ನು ಘೋಷಿಸಿದೆ.

ಲೋಕಸಭೆ ಚುನಾವಣೆ ಕುರಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ