AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆದರಿಕೆ ಆರೋಪ ಮಾಡಿ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್

ತನ್ನ ಹಾಗೂ ತನ್ನ ಕುಟುಂಬದ ವಿರುದ್ಧ ದುರುದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ದೂರು ದಾಖಲಿಸಿದ್ದಾರೆ.

ಬೆದರಿಕೆ ಆರೋಪ ಮಾಡಿ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್
ಎಡಿಜಿಪಿ ಚಂದ್ರಶೇಖರ್, ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: |

Updated on: Oct 12, 2024 | 7:18 AM

Share

ಬೆಂಗಳೂರು, ಅ.12: ಎಡಿಜಿಪಿ ಚಂದ್ರಶೇಖರ್ (ADGP Chandrashekar) ಅವರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ವಿರುದ್ದ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೆಚ್​ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸುರೇಶ್ ಬಾಬು ವಿರುದ್ದ ಬೆದರಿಕೆ ಆರೋಪದಡಿ ದೂರು ದಾಖಲಾಗಿದೆ. ಎಡಿಜಿಪಿ ಚಂದ್ರಶೇಖರ್ ದೂರು ಆಧರಿಸಿ ಎನ್​ಸಿಆರ್ ದಾಖಲಾಗಿದೆ.

ಸೆ.28 ಹಾಗೂ ಸೆ.29ರಂದು ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ನನ್ನ ವಿರುದ್ಧ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿ, ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ದೂರಿದ್ದಾರೆ. ತನ್ನ ವಿರುದ್ಧ ಸುಳ್ಳು ಆರೋಗ್ಯ ಪ್ರಮಾಣ ಪಡೆದ ಆರೋಪ ಮಾಡಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಸುಳ್ಳು ಆರೋಪದ ಅಡಿ ದೂರು ದಾಖಲಿಸಲಾಗಿದೆ. ಕರ್ನಾಟಕ ರಾಜ್ಯ ಕೆಡರ್ ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವುದಾಗಿ ಮೌಖಿಕ ಬೆದರಿಕೆ ಹಾಕಿದ್ದಾರೆ. ಸುಳ್ಳು ದಾಖಲೆ ಪಡೆದು ಕರ್ನಾಟಕ ಕೆಡರ್ ನಲ್ಲಿ ಇದ್ದೇನೆ ಅಂತ ಸುಳ್ಳು ಆರೋಪ ಮಾಡಿದ್ದಾರೆ. ಲಂಚ ತೆಗೆದುಕೊಂಡಿರುವುದಾಗಿ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆಂದು ಎಡಿಜಿಪಿ ಚಂದ್ರಶೇಖರ್ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಕೂಡ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಜೊತೆಗೆ ಕುಮಾರಸ್ವಾಮಿ ಆಪ್ತ ರಮೇಶ್ ಬಾಬು ಮೇಲೆ ಕೂಡ ಚಂದ್ರಶೇಖರ್ ಆರೋಪ ಮಾಡಿದ್ದಾರೆ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಕ್ರಮಕೈಗೊಳ್ಳುವಂತೆ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಜೊತೆಗೆ ಆ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ದೂರು ದಾಖಲಿಸಿದ್ದಾರೆ. ಚಂದ್ರಶೇಖರ್ ದೂರಿನ ಆಧಾರದಲ್ಲಿ ಸಂಜಯ್ ನಗರದಲ್ಲಿ ಎನ್​ಸಿಆರ್ ದಾಖಲಾಗಿದೆ.

ಇದನ್ನೂ ಓದಿ: ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು ನೀಡಿದ್ದು ಹೀಗೆ

ಚಂದ್ರಶೇಖರ್ ನೀಡಿರುವ ದೂರನ್ನು ಸ್ವೀಕರಿಸಿರುವ ಸಂಜಯ ನಗರ ಪೊಲೀಸರು, ಎಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ವಿರುದ್ಧ ಬಿ.ಎನ್.ಎಸ್.ಎಸ್.ಕಲಂ 174(1)ರ ಮೇರೆಗೆ ಠಾಣಾ ಎನ್.ಸಿ.ಆರ್. ಸಂಖ್ಯೆ 207/2024 ರಲ್ಲಿ ದೂರು ದಾಖಲಿಸಿಕೊಂಡಿದ್ದಾರೆ.

ಸಂಡೂರು ಗಣಿ ಹಗರಣದಲ್ಲಿ ಲೋಕಾಯುಕ್ತದೆದುರು ಹಾಜರಾಗಿ ವಿಚಾರಣೆ ಎದುರಿಸಿದ ಬೆನ್ನಿಗೇ ಕುಮಾರಸ್ವಾಮಿ ಅವರು ಪತ್ರಿಕಾಗೋಷ್ಠಿ ಮಾಡಿ ಲೋಕಾಯುಕ್ತ ಎಸ್​ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು. ಅವರು ಭ್ರಷ್ಟ, ಬ್ಲ್ಯಾಕ್ ಮೇಲರ್ ಇತ್ಯಾದಿ ಆರೋಪ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಚಂದ್ರಶೇಖರ್ ನಾವು ಇದರಿಂದ ವಿಚಲಿತರಾಗುವುದಿಲ್ಲ, ಆರೋಪಿ ಯಾವುದೇ ಸ್ಥಾನದಲ್ಲಿದ್ದರೂ ಆತ ಆರೋಪಿಯೇ ಎಂದು ಹೇಳಿದ್ದರು. ಅದಕ್ಕೆ ಮತ್ತೆ ತಿರುಗೇಟು ನೀಡಿದ್ದ ಕುಮಾರಸ್ವಾಮಿ ಆತ ಕ್ರಿಮಿನಲ್ ಎಂದೇ ಚಂದ್ರಶೇಖರ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ