ಬೆಂಗಳೂರು ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳ ಮೇಲೆ ಪದೇ ಪದೇ ಬಂದ ದೂರು ಆಧಾರಿಸಿ ಉಪ ಲೋಕಾಯುಕ್ತ (Lokayukta)ನ್ಯಾ.ಬಿ‌.ವೀರಪ್ಪ ನೇತೃತ್ವದಲ್ಲಿ ಅಧಿಕಾರಿಗಳು ಇಂದು(ಆ.08) ದಾಳಿ ಮಾಡಿದ್ದು, ಇ-ಖಾತಾ. ಟ್ಯಾಕ್ಸ್ ಕಲೆಕ್ಷನ್ ಲೆಡ್ಜರ್ ಸೇರಿದಂತೆ ಹಲವು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳ ಮೇಲೆ ಲೋಕಾಯುಕ್ತ ದಾಳಿ
Follow us
ನವೀನ್ ಕುಮಾರ್ ಟಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 08, 2024 | 4:05 PM

ಬೆಂಗಳೂರು, ಆ.08: ಅಕ್ರಮ ಖಾತೆ ಸೇರಿದಂತೆ ಪದೇ ಪದೇ ಗ್ರಾಮ ಪಂಚಾಯತಿಗಳ ಮೇಲೆ ದೂರುಗಳು ಬಂದ ಹಿನ್ನೆಲೆ ಇಂದು (ಗುರುವಾರ) ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳ ಮೇಲೆ ಉಪ ಲೋಕಾಯುಕ್ತ (Lokayukta)ನ್ಯಾ.ಬಿ‌.ವೀರಪ್ಪ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂ.ಗ್ರಾಮಾಂತರ ಜಿಲ್ಲೆಯ ಅಣ್ಣೇಶ್ವರ, ಜಾಲಿಗೆ, ದೊಡ್ಡತುಮಕೂರು, ಮಜರಾ ಹೊಸಹಳ್ಳಿ, ಬೂದಿಹಾಳ, ಸೋಂಪುರ, ನಂದಗುಡಿ, ಸೂಲಿಬೆಲೆ ಪಂಚಾಯತಿಗಳ ಮೇಲೆ ಲೋಕಾ ದಾಳಿ ನಡೆಸಿ, ಇ-ಖಾತಾ. ಟ್ಯಾಕ್ಸ್ ಕಲೆಕ್ಷನ್ ಲೆಡ್ಜರ್ ಸೇರಿದಂತೆ ಹಲವು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಇನ್ನು ಬೆಂಗಳೂರು ನಗರ ಜಿಲ್ಲೆಯ ಕಸಘಟ್ಟಪುರ, ರಾಜಾನುಕುಂಟೆ, ಬನ್ನೇರುಘಟ್ಟ, ಕಲ್ಲುಬಾಳು, ಕಣ್ಣೂರು, ಮಂಡೂರು, ಕುಂಬಳಗೋಡು, ಆಗರ, ದಾಸನಪುರ ಮತ್ತು ಅಡಕಮಾರನಹಳ್ಳಿ ಗ್ರಾ.ಪಂ. ಕಚೇರಿ ಮೇಲೆ ದಾಳಿ ನಡೆಸಿ ಅಧಿಕಾರಿಗಳಿಂದ ಪಂಚಾಯತಿಗಳಲ್ಲಿನ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ವಿಕ್ಟೋರಿಯಾ ಆಸ್ಪತ್ರೆಗೆ ಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅವ್ಯವಸ್ಥೆ ಅನಾವರಣ

20ಕ್ಕೂ ಹೆಚ್ಚು ಲೋಕಾಯುಕ್ತ ಅಧೀಕಾರಿಗಳಿಂದ ಪರಿಶೀಲನೆ

ಇತ್ತ ದೂರು ಆಧಾರಿಸಿ ಬೆಂಗಳೂರು ಉತ್ತರ ತಾಲೂಕಿನ ಪಂಚಾಯತಿ ಕಾರ್ಯಾಲಯಗಳ ಮೇಲೆ ಬೆಂಗಳೂರು ಲೋಕಾಯುಕ್ತ ಜಡ್ಜ್ ಶುಭವೀರ್ ಜೈನ್, ಡಿವೈಎಸ್ಪಿ ಸತೀಶ್ ಸೇರಿದಂತೆ 20ಕ್ಕೂ ಹೆಚ್ಚು ಲೋಕಾಯುಕ್ತ ಅಧೀಕಾರಿಗಳು ದಾಳಿ ನಡೆಸಿದ್ದು, ಅಡಕಮಾರನಹಳ್ಳಿ ಹಾಗೂ ದಾಸನಪುರ ಪಂಚಾಯತಿ ಸಿಬ್ಬಂದಿ ಹಾಗೂ ಕಡತ ಪರಿಶೀಲನೆ ಮಾಡುತ್ತಿದ್ದಾರೆ.  ಪ್ರತಿಯೊಬ್ಬ ಸಿಬ್ಬಂದಿಯನ್ನೂ ಬಿಡದೆ ವಿಚಾರಣೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್