ಸರ್ಕಾರಿ ಆಸ್ಪತ್ರೆಗಳಿಗೆ ಬಿಸಿ ಮುಟ್ಟಿಸಲು ಮುಂದಾದ ಲೋಕಾಯುಕ್ತರು: ಲೇಡಿಕರ್ಜನ್ ಬೌರಿಂಗ್ ಆಸ್ಪತ್ರೆಗೆ ಭೇಟಿ
ನಗರದ 10 ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ಸರ್ಕಾರಿ ಆಸ್ಪತ್ರೆಗಳಿಗೆ ಬಿಸಿ ಮುಟ್ಟಿಸಲು ಲೋಕಾಯುಕ್ತರು ಮುಂದಾಗಿದ್ದಾರೆ. ಹೀಗಾಗಿ ಲೋಕಾಯುಕ್ತರ ನೇತೃತ್ವದ ತಂಡ ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದೆ.
ಬೆಂಗಳೂರು: ಇಂದು ಸರ್ಕಾರಿ, ಬಿಬಿಎಂಪಿ ಆಸ್ಪತ್ರೆಗಳಿಗೆ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಭೇಟಿ ನೀಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಈ ಪೈಕಿ ಬೆಂಗಳೂರಿನ ಶಿವಾಜಿನಗರದಲ್ಲಿರುವ ಲೇಡಿಕರ್ಜನ್ ಬೌರಿಂಗ್ ಆಸ್ಪತ್ರೆಗೆ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಭೇಟಿ ನೀಡಿದ್ದಾರೆ.
ನಗರದ 10 ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ಸರ್ಕಾರಿ ಆಸ್ಪತ್ರೆಗಳಿಗೆ ಬಿಸಿ ಮುಟ್ಟಿಸಲು ಲೋಕಾಯುಕ್ತರು ಮುಂದಾಗಿದ್ದಾರೆ. ಹೀಗಾಗಿ ಲೋಕಾಯುಕ್ತರ ನೇತೃತ್ವದ ತಂಡ ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದೆ. ವಿಕ್ಟೋರಿಯಾ ಆಸ್ಪತ್ರೆ, ಬೌರಿಂಗ್, ಕೆ.ಸಿ.ಜನರಲ್, ಮಿಂಟೋ ಕಣ್ಣಿನ ಆಸ್ಪತ್ರೆ, ವಾಣಿ ವಿಲಾಸ, ಡಾ. ಬಾಬು ಜಗಜೀವರ್ ರಾಮ್ ಆಸ್ಪತ್ರೆ, ಹಲಸೂರು ರೆಫೆರಲ್ ಆಸ್ಪತ್ರೆ, ಸಿದ್ದಯ್ಯ ರೋಡ್ ರೆಫೆರಲ್ ಆಸ್ಪತ್ರೆ, ಪ್ಯಾಲೇಸ್ ಗುಟ್ಟಹಳ್ಳಿ ಮೆಟರ್ನಿಟಿ ಆಸ್ಪತ್ರೆ, ಮಾಗಡಿ ರಸ್ತೆ ಪಶು ಚಿಕಿತ್ಸಾಲಯ ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಿಗೆ ಲೋಕಾಯುಕ್ತ ಪೊಲೀಸರ ತಂಡ ಭೇಡಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಆಸ್ಪತ್ರೆಗಳ ಮೆಡಿಸಿನ್ಸ್ ಲೆಡ್ಜರ್, ದಾಖಲೆಗಳು, ಕಡತಗಳ ಪರಿಶೀಲನೆ, ಹೊರ ಮತ್ತು ಒಳರೋಗಿಗಳ ದಾಖಲಾತಿ ಪರಿಶೀಲನೆ ಮಾಡಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳ ಸಿಬ್ಬಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು ಹಿನ್ನಲೆ ಸಿಬ್ಬಂದಿ ಹಾಜರಾತಿ ಬಗ್ಗೆಯೂ ಲೋಕಾಯುಕ್ತ ಪೊಲೀಸರ ತಂಡ ಪರಿಶೀಲನೆ ನಡೆಸ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 4:17 pm, Wed, 24 August 22