ಲೋಕಾಯುಕ್ತ ದಾಳಿ: ಕೆಆರ್​ ಪುರ ತಹಶೀಲ್ದಾರ್ ಆಯ್ತು ಈಗ ಸರ್ವೆ ಸೂಪರ್​​ವೈಸರ್ ಅರೆಸ್ಟ್

ಅದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಕೆಆರ್​ ಪುರ ಸರ್ವೆ ಸೂಪರ್​ವೈಸರ್​ ಕೆ.ಟಿ ಶ್ರೀನಿವಾಸ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಲೋಕಾಯುಕ್ತ ದಾಳಿ ವೇಳೆ ಶ್ರೀನಿವಾಸ್ ಮನೆತಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ರಗಳು ಸಿಕ್ಕಿವೆ. ಹೀಗಾಗಿ ಅವರನ್ನು ಬಂಧಿಸಿದ್ದು, ಆಸ್ತಿ ಬಗ್ಗೆ ತನಿಖೆ ನಡೆಸಿದ್ದಾರೆ.

ಲೋಕಾಯುಕ್ತ ದಾಳಿ: ಕೆಆರ್​ ಪುರ ತಹಶೀಲ್ದಾರ್ ಆಯ್ತು ಈಗ ಸರ್ವೆ ಸೂಪರ್​​ವೈಸರ್ ಅರೆಸ್ಟ್
ಲೋಕಾಯುಕ್ತ(ಸಂಗ್ರಹ ಚಿತ್ರ)
Follow us
Jagadisha B
| Updated By: ರಮೇಶ್ ಬಿ. ಜವಳಗೇರಾ

Updated on: Aug 23, 2023 | 10:42 AM

ಬೆಂಗಳೂರು, (ಆಗಸ್ಟ್ 23): ಬೆಂಗಳೂರಿನ ಕೆ.ಆರ್.ಪುರ ತಾಲೂಕು ಕಚೇರಿ ಸರ್ವೆ ಸೂಪರ್​​ವೈಸರ್ ಕೆ.ಟಿ.ಶ್ರೀನಿವಾಸಮೂರ್ತಿ ಅವರನ್ನು ಲೋಕಾಯುಕ್ತ(lokayukta) ಬಂಧಿಸಿದೆ. ಅಕ್ರಮ ಆಸ್ತಿಗಳಿಕೆ ಆರೋಪ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ನಿನ್ನೆ (ಆಗಸ್ಟ್ 23) ಶ್ರೀನಿವಾಸಮೂರ್ತಿ ಅವರ ನಿವಾಸ, ಕಚೇರಿ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ರಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಶ್ರೀನಿವಾಸಮೂರ್ತಿ ಅವರನ್ನು ಲೋಕಾತಯುಕ್ತ ಬಂಧಿಸಿ ವಿಚಾರಣೆಗೊಳಪಡಿಸಿದೆ.

ಬೆಂಗಳೂರಿನ ಕಲ್ಕೆರೆ ನಿವಾಸದ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ ಶ್ರಿನಿವಾಸ್ ಸೋದರಿ ಹಾಗೂ ಸೋದರನ ಮನೆ ಸೇರಿದಂತೆ 14 ಕಡೆ ದಾಳಿ ಮಾಡಿದ್ದರು. ರಿಯಲ್ ಎಸ್ಟೇಟ್​ನಲ್ಲೂ ಹೂಡಿಕೆ ಮಾಡಿರುವ ಬಗ್ಗೆ ದಾಖಲೆ ಲಭ್ಯವಾಗಿವೆ. ಹೀಗಾಗಿ ಶ್ರೀನಿವಾಸ್ ಅವರನ್ನು ಬಂಧಿಸಿದ್ದು, ಆಸ್ತಿ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಇನ್ನು ಶ್ರೀನಿವಾಸ್ ಅವರನ್ನು ಇಂದು (ಆಗಸ್ಟ್ 23) ಸಂಜೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದು, ಆ ವೇಳೆ ತಮ್ಮ ವಶಕ್ಕೆ ಕೇಳಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Lokayukta Raids: ಬೆಂಗಳೂರು ಸೇರಿದಂತೆ ಕರ್ನಾಟಕದ 14 ಕಡೆ ಲೋಕಾಯುಕ್ತ ದಾಳಿ

ಕಳೆದ ಜೂನ್​ ತಿಮಗಳಲ್ಲಿ ಇದೇ ಕೆಆರ್ ಪುರಂ ತಹಶೀಲ್ದಾರ್ ಆಗಿದ್ದ ಅಜಿತ್​ ರೈ ಅವರ ಮೇಲೂ ಸಹ ಲೋಕಾಯುಕ್ತ ದಾಳಿಯಾಗಿತ್ತು. ಆ ವೇಳೆ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅಜಿತ್ ರೈ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಅಜಿತ್ ರೈ ಜಾಮೀನಿನ ಮೇಲೆ ಆಚೆ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.

ಇನ್ನಷ್ಟು ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ