Madal Virupakshappa: ಇಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಶಾಸಕ ಮಾಡಾಳ್​ ವಿರೂಪಾಕ್ಷಪ್ಪಗೆ ಲೋಕಾಯುಕ್ತ ನೋಟಿಸ್​

|

Updated on: Mar 10, 2023 | 9:23 AM

ಕೆಎಸ್​ಡಿಎಲ್​ನ ಮಾಜಿ ಅಧ್ಯಕ್ಷ, ಬಿಜೆಪಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು, ಇಂದು (ಮಾ.10) ಮತ್ತೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

Madal Virupakshappa: ಇಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಶಾಸಕ ಮಾಡಾಳ್​ ವಿರೂಪಾಕ್ಷಪ್ಪಗೆ ಲೋಕಾಯುಕ್ತ ನೋಟಿಸ್​
ಶಾಸಕ ಮಾಡಾಳ್​ ವಿರೂಪಾಕ್ಷಪ್ಪ
Follow us on

ಬೆಂಗಳೂರು: ಕೆಎಸ್​ಡಿಎಲ್​ನ (KSDL) ಮಾಜಿ ಅಧ್ಯಕ್ಷ, ಬಿಜೆಪಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ (Madal Virupakshappa) ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು, ಇಂದು (ಮಾ.10) ಮತ್ತೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು (Lokayukta Officers) ನೋಟಿಸ್ ನೀಡಿದ್ದಾರೆ. ನಿನ್ನೆ (ಮಾ.10) ಸತತ 5 ಗಂಟೆಗಳ ಕಾಲ ರಾತ್ರಿ 9:30 ತನಕ ಮಾಡಾಳ್​​ ವಿರೂಪಾಕ್ಷಪ್ಪ ವಿಚಾರಣೆ ಎದುರಿಸಿದ್ದರು.

ನನ್ನನ್ನು ಸಿಲುಕಿಸಲಾಗಿದೆ ಮಾಡಾಳ್​ ವಿರೂಪಾಕ್ಷಪ್ಪ

ನಿನ್ನೆ (ಮಾ.10) ಮಾಡಾಳ್​ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ತನಿಖಾಧಿಕಾರಿ ಆಂಥೋನಿ ಜಾನ್​ ಲೋಕಾಯುಕ್ತ ಕಚೇರಿಯ 3ನೇ ಮಹಡಿಯಲ್ಲಿ ವಿಚಾರಣೆಗೆ ಒಳಪಡಿಸಿದ್ದರು. ರಾತ್ರಿ 9.30ರ ತನಕ ನಡೆದ ವಿಚಾರಣೆಯಲ್ಲಿ ಮಾಡಾಳ್,​ ಉದ್ದೇಶಪೂರ್ವಕವಾಗಿ ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲಾಗಿದೆ. ಟೆಂಡರ್ ಪ್ರಕ್ರಿಯೆ ಪರಾದರ್ಶಕವಾಗಿದೆ ನಡೆದಿದೆ. ಯಾವ ಸಿಬ್ಬಂದಿಗೂ ಹಣಕ್ಕೆ ಬೇಡಿಕೆ ಇಟ್ಟಿಲ್ಲ. ಲೋಕಾಯುಕ್ತ ಪೊಲೀಸರಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ತನಿಖಾ ಹಂತದಲ್ಲಿ ಯಾವುದನ್ನು ಪ್ರಸ್ತಾಪಿಸಲ್ಲ. ಸದ್ಯ ಲೋಕಾಯುಕ್ತ ಪೊಲೀಸರು ಮತ್ತೆ ಬರಲು ಹೇಳಿಲ್ಲ. ಮತ್ತೆ ಕರೆದಾಗ ವಿಚಾರಣೆ ಹಾಜರಾಗುತ್ತೇನೆ. ಮಾಧ್ಯಮಗಳು ಪ್ರಶ್ನಿಸಿದ್ದರಿಂದ ಒತ್ತಡದಲ್ಲಿ ಮಾತನಾಡಿದ್ದೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ 800 ಕೋಟಿ ಅವ್ಯವಹಾರ ಆರೋಪ

ಮಾಡಾಳ್​ ವಿರೂಪಾಕ್ಷಪ್ಪ ವಿರದ್ಧ ಲಂಚ ಪ್ರಕರಣದ ಆರೋಪ

ರಾಜ್ಯ ಸಾಬೂನು ಮತ್ತು ಮಾರ್ಜಕಗಳ ನಿಗಮದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಕಳೆದ ವಾರ ಬೆಂಗಳೂರು ಜಲ ಮಂಡಳಿ ಮತ್ತು ಒಳಚರಂಡಿ (BWSSB) ಮುಖ್ಯ ಲೆಕ್ಕಾಧಿಕಾರಿಯಾಗಿರುವ ಮಾಡಾಳ್ ವಿರೂಪಾಕ್ಷಪ್ಪ ಪುತ್ರ, ಮಾಡಾಳ್​ ಪ್ರಶಾಂತ್‌ ಅವರ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಅವರು 40 ಲಕ್ಷ ರೂ.ಗೂ ಹೆಚ್ಚು ಮೊತ್ತದ ಲಂಚ ಪಡೆಯುತ್ತಿರುವುದು ಬಯಲಾಗಿತ್ತು. ನಂತರದಲ್ಲಿ ಶಾಸಕರ ಮನೆ ಮೇಲೂ ದಾಳಿ ನಡೆದಿದ್ದು, ಕೋಟ್ಯಂತರ ರೂ. ನಗದು, ಚಿನ್ನಾಭರಣ ದೊರೆತಿತ್ತು.

ಈ ಮಧ್ಯೆ ಮಾಡಾಳ್ ಬಂಧನ ಭೀತಿಯಿಂದ ನಾಪತ್ತೆಯಾಗಿದ್ದರು. ಬಳಿಕ ವಕೀಲರ ಮೂಲಕ ಮಧ್ಯಂತರ ಜಾಮೀನು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಜತೆಗೆ, ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್​ಐಆರ್ ರದ್ದು ಮಾಡಬೇಕು ಎಂದೂ ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಮಾಡಾಳ್ ವಿರೂಪಾಕ್ಷಪ್ಪ ಪರ ಹಿರಿಯ ವಕೀಲ ಕೆ.ಸುಮನ್ ವಾದ ಮಂಡಿಸಿದ್ದು, ಜಾಮೀನು ನೀಡುವಂತೆ ಕೋರಿದ್ದರು. ಅವರ ವಾದವನ್ನು ಆಲಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಮಧ್ಯಂತರ ಜಾಮೀನು ನೀಡಿತ್ತು. 5 ಲಕ್ಷ ರೂ. ಮೌಲ್ಯದ ಬಾಂಡ್​, ಇಬ್ಬರು ಶ್ಯೂರಿಟಿ ನೀಡುವಂತೆ ಸೂಚಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:05 am, Fri, 10 March 23