Lokayukta Raid: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಆರೋಗ್ಯಾಧಿಕಾರಿ

50 ಸಾವಿರ ರೂ. ಲಂಚ ಪಡೆಯುವಾಗ ಬಿಬಿಎಂಪಿ ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಸಿ.ವಿ.ರಾಮನ್​ನಗರದ ಬಿಬಿಎಂಪಿ ಆರೋಗ್ಯಾಧಿಕಾರಿ ವಿ.ಶಿವೇಗೌಡ.

Lokayukta Raid: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಆರೋಗ್ಯಾಧಿಕಾರಿ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 27, 2023 | 8:02 PM

ಬೆಂಗಳೂರು: 50 ಸಾವಿರ ರೂ. ಲಂಚ (Bribery) ಪಡೆಯುವಾಗ ಬಿಬಿಎಂಪಿ ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ (Lokayukta Raid) ಬಿದಿದ್ದಾರೆ. ಸಿ.ವಿ.ರಾಮನ್​ನಗರದ ಬಿಬಿಎಂಪಿ ಆರೋಗ್ಯಾಧಿಕಾರಿ ವಿ.ಶಿವೇಗೌಡ. ಸೊಳ್ಳೆ ನಿಯಂತ್ರಣಕ್ಕಾಗಿ ಶ್ರೀನಿವಾಸ್ ಎಂಬುವರು ಗುತ್ತಿಗೆ ಪಡೆದಿದ್ದರು. ಇದಕ್ಕಾಗಿ ಶಿವೇಗೌಡ 80 ಸಾವಿರ ಲಂಚ ಕೇಳಿದ್ದರು. ಮುಂಗಡವಾಗಿ ಈಗಾಗಲೇ 30 ಸಾವಿರ ಲಂಚ ಪಡೆದಿದ್ದು, ಇನ್ನುಳಿದ 50 ಸಾವಿರ ರೂ. ಪಡೆಯುವ ವೇಳೆ ಹಲಸೂರು ಕಚೇರಿಯಲ್ಲಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದಿದ್ದಾರೆ. ಇತ್ತೀಚೆಗೆ ಲಂಚ ಸ್ವೀಕರಿಸುವಾಗ ಬೆಸ್ಕಾಂ ಸಹಾಯಕ ಇಂಜಿನಿಯರ್​ ಲೋಕಾಯುಕ್ತ ಬಲೆಗೆ ಬಿದಿದ್ದರು. ರಾಜೇಶ್ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೊತ್ತನೂರು ಬೆಸ್ಕಾಂ ಸಹಾಯಕ ಇಂಜಿನಿಯರ್​. ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ರಾಜೇಶ್ ವಿರುದ್ಧ ಎಫ್​ಐಆರ್​ ಕೂಡ ದಾಖಲು ಮಾಡಲಾಗಿತ್ತು.

ಖಾಸಗಿ ಶಾಲೆಯಲ್ಲಿ ಹಣ ಸಂಗ್ರಹಿಸಿಟ್ಟಿರುವ ಬಗ್ಗೆ ದೂರು: ಐಟಿ ಅಧಿಕಾರಿಗಳಿಂದ ಪರಿಶೀಲನೆ  

ಚಿಕ್ಕಬಳ್ಳಾಫುರ: ಖಾಸಗಿ ಶಾಲೆಯಲ್ಲಿ ಹಣ ಸಂಗ್ರಹಿಸಿಟ್ಟಿರುವ ಬಗ್ಗೆ ದೂರು ಹಿನ್ನಲೆ ಐಟಿ ಅಧಿಕಾರಿಗಳು, ಸ್ಥಳೀಯ ಚುನಾವಣಾಧಿಕಾರಿಗಳಿಂದ ಚಿಕ್ಕಬಳ್ಳಾಪುರ ತಾಲೂಕಿನ ಚೊಕ್ಕಹಳ್ಳಿಯ ಖಾಸಗಿ ಶಾಲೆಯ ಮಾಲೀಕರ ಮನೆ, ಶಾಲಾ ಕಟ್ಟಡಗಳ ಮೇಲೆ ದಾಳಿ ಮಾಡಲಾಗಿದೆ. ಬಿಜೆಪಿಯ ಕಾನೂನು ಪ್ರಕೋಷ್ಠದಲ್ಲಿ ರಾಜ್ಯ ಕಾರ್ಯನಿರ್ವಾಹಕ ಸದಸ್ಯ ಬಿ.ವಿ.ಶ್ರೀನಿವಾಸ್​ಗೆ ಸೇರಿರುವ ಸಾಯಿರಾಮ್​ ಇಂಟರ್​ ನ್ಯಾಷನಲ್ ಶಾಲೆಯಲ್ಲಿ ಪರಿಶೀಲನೆ ಮಾಡಲಾಗಿದೆ. ಖಾಸಗಿ ಶಾಲೆಯ 2 ಕಟ್ಟಡ, ಮನೆಯಲ್ಲಿ ದಾಖಲೆಗಳನ್ನು ಐಟಿ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಸಹಾಯಕ ಇಂಜಿನಿಯರ್: FIR ದಾಖಲು

ಬೀದರ್ ಜಿಲ್ಲೆಯ 6 ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಇತ್ತೀಚೆಗೆ ಬೀದರ್ ಜಿಲ್ಲೆಯ 6 ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿತ್ತು. ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಲಾಗಿತ್ತು. ಬಸವಕಲ್ಯಾಣ ತಾಲೂಕಿನ ಮುಡಬಿಯ ಉಪ ತಹಶೀಲ್ದಾರ್​ ವಿಜಯಕುಮಾರ್​ ಸ್ವಾಮಿ ಮನೆಗಳ ಮೇಲೆ ದಾಳಿ ನಡೆದಿತ್ತು. ಬೀದರ್​​ನ ಆನಂದ್ ನಗರ ಮನೆ, ಬಸವಕಲ್ಯಾಣದ ಮನೆ, ಕಚೇರಿ, ನಗರದ ಗ್ಯಾರೆಜ್ ಮೇಲೂ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ಮಾಡಿದ್ದರು. ಜೊತೆಗೆ ಸಣ್ಣ ನೀರಾವರಿ ಇಲಾಖೆ ಇಇ ಸುರೇಶ್ ಮೇದಾ​ ಅವರ ಬೀದರ್​ನ ಗುರುನಗರದ ಮನೆ, ನೌಬಾದ್​​ನ ಕಚೇರಿಯಲ್ಲಿ ಪರಿಶೀಲನೆ ಮಾಡಲಾಗಿತ್ತು.

ಇದನ್ನೂ ಓದಿ: ಬೆಂಗಳೂರು ಸೇರಿದಂತೆ ಕೆಲ ಕಡೆ ಲೋಕಾಯುಕ್ತ ದಾಳಿ: ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಮನೆ ಮೇಲೆ ರೇಡ್, ದಾಖಲೆ ಪರಿಶೀಲನೆ

ಬೆಳ್ತಂಗಡಿಯಲ್ಲಿರುವ ಗಂಗಾಧರಗೌಡ ಮನೆ ಮೇಲೆ ಐಟಿ ದಾಳಿ

ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಳ್ತಂಗಡಿಯಲ್ಲಿರುವ ಮಾಜಿ ಸಚಿವ, ಕಾಂಗ್ರೆಸ್ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡಮನೆ ಮೇಲೆ ಐಟಿ ದಾಳಿ ನಡೆದಿದೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆ ಬಳಿಯಿರುವ ಗಂಗಾಧರ ಗೌಡ ಮನೆ, ಪ್ರಸನ್ನ ಇನ್ಸ್ಟಿಟ್ಯೂಷನ್​​, ಬೆಟ್ಟುವಿನ ಮನೆಯಲ್ಲಿ 20ಕ್ಕೂ ಅಧಿಕ ಐಟಿ ಅಧಿಕಾರಿಗಳ ತಂಡದಿಂದ ದಾಳಿ ನಡೆಸಿ ಪರಿಶೀಲನೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:02 pm, Thu, 27 April 23