AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lokayukta Raid: BBMP ಎಡಿಟಿಪಿ ಗಂಗಾಧರಯ್ಯ ಮನೆಯಲ್ಲಿ ಕೋಟಿ ಕೋಟಿ ಹಣ, ಚಿನ್ನಾಭರಣ ಪತ್ತೆ!

ರಾಜ್ಯದಲ್ಲಿಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು, ಲೋಕಾಯುಕ್ತ ಅಧಿಕಾರಿಗಳು ಹಲವರ ಮನೆ ಬಾಗಿಲು ತಟ್ಟಿದ್ದಾರೆ. ಈ ಪೈಕಿ ಬಿಬಿಎಂಪಿ ADTP ಗಂಗಾಧರಯ್ಯ ಮನೆಯೂ ಒಂದು. ಇವರ ಮನೆಯಲ್ಲಿ ಅಪಾರ ಪ್ರಮಾಣದಲ್ಲಿ ನಗದು, ಚಿನ್ನಾಭರಣಗಳು ಪತ್ತೆಯಾಗಿವೆ.

Lokayukta Raid: BBMP ಎಡಿಟಿಪಿ ಗಂಗಾಧರಯ್ಯ ಮನೆಯಲ್ಲಿ ಕೋಟಿ ಕೋಟಿ ಹಣ, ಚಿನ್ನಾಭರಣ ಪತ್ತೆ!
BBMP ಎಡಿಟಿಪಿ ಗಂಗಾಧರಯ್ಯ ಮನೆಯಲ್ಲಿ ಪತ್ತೆಯಾದ ಹಣ, ಚಿನ್ನಾಭರಣ ಇತ್ಯಾದಿ ಸ್ವತ್ತುಗಳು
Rakesh Nayak Manchi
Rakesh Nayak Manchi|

Updated on:Apr 24, 2023 | 10:16 PM

Share

ಬೆಂಗಳೂರು: ರಾಜ್ಯದಲ್ಲಿಂದು ಬೆಳ್ಳಂಬೆಳಗ್ಗೆ ಐಟಿ (IT Raid) ಅಧಿಕಾರಿಗಳು, ಲೋಕಾಯುಕ್ತ (Lokayukta Raid) ಅಧಿಕಾರಿಗಳು ಹಲವರ ಮನೆ ಬಾಗಿಲು ತಟ್ಟಿದ್ದಾರೆ. ಈ ಪೈಕಿ ಬಿಬಿಎಂಪಿ (BBMP) ಎಡಿಟಿಪಿ ಗಂಗಾಧರಯ್ಯ ಮನೆಯೂ ಒಂದು. ಇವರ ಮನೆಯಲ್ಲಿ ತಲಾಷ್ ನಡೆಸಿದಾಗ ಕೋಟ್ಯಾಂತರ ರೂಪಾಯಿ ನಗದು, ಚಿನ್ನಾಭರಣ, ಆಸ್ತಿಗಳು ಪತ್ತೆಯಾಗಿವೆ. ಇಂದು ಬೆಳಗ್ಗೆ ಗಂಗಧಾರಯ್ಯಗೆ ಸಂಬಂಧಿಸಿದ ಒಟ್ಟು 7 ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಏನೆಲ್ಲಾ ಪತ್ತೆಯಾಯ್ತು? ಚಿನ್ನಾಭರಣ ಎಷ್ಟು ಸಿಕ್ಕಿತು? ಎಷ್ಟು ಕೋಟಿ ರೂಪಾಯಿ ವಶಕ್ಕೆ ಪಡೆಯಲಾಗಿದೆ? ಇತ್ಯಾದಿ ಮಾಹಿತಿ ಇಲ್ಲಿದೆ.

ದಾಳಿ ವೇಳೆ ಗಂಗಾಧರಯ್ಯ ಅವರು ಯಲಹಂಕ, ಜೆಸಿ ನಗರ, ನಾಗವಾರ ಮತ್ತು ಹೆಬ್ಬಾಳದಲ್ಲಿ 14 ಫ್ಲಾಟ್‌ಗಳು, ಮನೆಗಳನ್ನು ಹೊಂದಿರುವುದು ಪತ್ತೆಯಾಗಿದೆ. ಇದಲ್ಲದೆ, ನೆಲಮಂಗಲದಲ್ಲಿ 1.5 ಕೋಟಿ ಮೌಲ್ಯದ 5 ಎಕರೆ ಕೃಷಿ ಭೂಮಿ, ಮಲ್ಲೇಶ್ವರದಲ್ಲಿ 3.65 ಕೋಟಿ ಮೌಲ್ಯದ ನಿವೇಶನ ಇರುವುದು ತಿಳಿದುಬಂದಿದೆ. ಇದರಲ್ಲದೆ, ಎರಡು ಬ್ಯಾಂಗ್​ಗಳಲ್ಲಿ 2 ಲಾಕರ್​ಗಳನ್ನು ಹೊಂದಿದ್ದಾರೆ.

ದಾಳಿ ವೇಳೆ ಗಂಗಾಧರಯ್ಯ ನಿವಾಸದಲ್ಲಿ 1.431 ಕೆಜಿ ಚಿನ್ನ, 8.7 ಕೆಜಿ ಬೆಳ್ಳಿ, ಮತ್ತು 73 ಲಕ್ಷ ಮೌಲ್ಯದ ಡೈಮಂಡ್ ಪತ್ತೆಯಾಗಿದೆ. ಅಲ್ಲದೆ, 1,47,16,000 ರೂ. (ಒಂದು ಕೋಟಿ ನಲವತ್ತೇಳು ಲಕ್ಷ ಹದಿನಾರು ಸಾವಿರ) ಪತ್ತೆಯಾಗಿದೆ. ಮಾತ್ರವಲ್ಲದೆ, ವಿದೇಶಿ ಕರೆನ್ಸಿಗಳು ಕೂಡ ಪತ್ತೆಯಾಗಿವೆ. USD 10,298, ಧೀರಮ್ ದುಬೈ 1180, ಈಜಿಪ್ಟ್ ಪೌಂಡ್ 35 ಪತ್ತೆಯಾಗಿವೆ. ಗಂಗಾಧರಯ್ಯ ಕಚೇರಿ, ಕುಟುಂಬಸ್ಥರು, ಅಳಿಯದಿಂರ ನಿವಾಸಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶಾಕ್ ಕೊಟ್ಟಿದ್ದಾರೆ. ಕುಟುಂಬಸ್ಥರ ಮನೆಗಳಲ್ಲಿ ಮಹತ್ವದ ದಾಖಲೆಗಳು ಪತ್ತೆಯಾಗಿದ್ದು, ಅಧಿಕಾರಿಗಳು ದಾಳಿ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ರೌಡಿಶೀಟರ್​ಗಳ ಮನೆಗಳ ಮೇಲೆ ಪೊಲೀಸರ ದಾಳಿ; 105 KG ಗಾಂಜಾ, ಮಾರಕಾಸ್ತ್ರ ವಶ

ಅಂಕಿತಾ ಬಿಲ್ಡರ್ಸ್​ ಕಚೇರಿ ಮೇಲೆ ಐಟಿ ದಾಳಿ

ಹುಬ್ಬಳ್ಳಿ: ಅಂಕಿತಾ ಬಿಲ್ಡರ್ಸ್​ ಕಚೇರಿ ಹಾಗೂ ಮನೆ ಮೇಲೆ ಮೇಲೆ ಐಟಿ ದಾಳಿ ನಡೆದಿದೆ. ನಿಲೀಜನ ರಸ್ತೆಯ ಕಚೇರಿ, ಮಂಜುನಾಥನಗರದಲ್ಲಿರುವ ಅಂಕಿತಾ ಡೆವಲಪರ್ಸ್​ ಮಾಲೀಕ ನಾರಾಯಣ ಬಿ.ಆಚಾರ್ಯ ಮನೆ ಹಾಗೂ ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಪತ್ತೆಯಾದ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ರಾಜ್ಯದಲ್ಲಿಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು, ಲೋಕಾಯುಕ್ತ ಅಧಿಕಾರಿಗಳು ಹಲವರ ಮನೆ ಬಾಗಿಲು ತಟ್ಟಿದ್ದಾರೆ. ಬೆಂಗಳೂರು, ದಾವಣಗೆರೆ, ಕೋಲಾರ, ಬೀದರ್, ಚಿತ್ರದುರ್ಗ ಸೇರಿದಂತೆ ಅನೇಕ ಕಡೆ ದಾಳಿ ನಡೆದಿದ್ದು ಹಲವು ಅಧಿಕಾರಿಗಳ ಮನೆಯಲ್ಲಿ ಚಿನ್ನ, ನಗದು, ಕಡತ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ಐಟಿ ದಾಳಿ ನಡೆದಿದ್ದು ಬೆಳ್ತಂಗಡಿಯ ಮಾಜಿ ಸಚಿವ, ಕಾಂಗ್ರೆಸ್ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆ ಬಳಿಯಿರುವ ಗಂಗಾಧರ ಗೌಡ ಮನೆ, ಪ್ರಸನ್ನ ಇನ್ಸ್ಟಿಟ್ಯೂಷನ್​​, ಇಂದುಬೆಟ್ಟುವಿನ ಮನೆಯಲ್ಲಿ 20ಕ್ಕೂ ಅಧಿಕ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:16 pm, Mon, 24 April 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​