ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ.

ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಲೋಕಾಯುಕ್ತ ಕಚೇರಿ
Edited By: ವಿವೇಕ ಬಿರಾದಾರ

Updated on: Sep 12, 2022 | 10:41 PM

ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ (BBMP) ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ (Lokayukta) ದಾಳಿ ಮಾಡಿದೆ. ಲೋಕಾಯುಕ್ತ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್ ಕಚೇರಿ ಮೇಲೆ ಡಿವೈಎಸ್​ಪಿಗಳಾದ ಮಂಜಯ್ಯ, ಶಂಕರ್‌ ನಾರಾಯಣ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿತ್ತು.

ಲೋಕಾಯುಕ್ತ ಪೊಲೀಸರು ಬಿಬಿಎಂಪಿ ಜಂಟಿ ಆಯುಕ್ತ ಶ್ರೀನಿವಾಸ್ ಮತ್ತು ಅವರ  ಪಿಎಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗಿತ್ತು. ದೂರುದಾರ ಮಂಜುನಾಥ್ ಸಮ್ಮುಖದಲ್ಲೇ ವಿಚಾರಣೆ ನಡೆಸಿದ್ದರು. ಬಂಧಿತರನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಿದ್ದಾರೆ.

ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಕೆ ಕುರಿತಂತೆ ದಾಖಲೆ ಪರಿಶೀಲನೆ ಮಾಡಲಾಗಿದೆ. ಜಂಟಿ ಆಯುಕ್ತ ಆರು ದಿನಗಳ ಹಿಂದೆಯೇ ಕಡತಕ್ಕೆ ಸಹಿ ಹಾಕಿದ್ದರು ಎನ್ನಲಾಗುತ್ತಿದೆ. ಸಹಿ ಮಾಡಿದ್ದರೂ ಕಡತವನ್ನು ಎಫ್‌ಡಿಎ ವಿಲೇವಾರಿ ಮಾಡಿರಲಿಲ್ಲ. ಈ ಬಗ್ಗೆ ಲೋಕಾಯುಕ್ತ ಪೊಲೀಸರು ಎಫ್‌ಡಿಎ ಉಮೇಶ್‌ಗೆ ಪ್ರಶ್ನಿಸಿದ್ದರು.

ಪ್ರಶ್ನೆಗಳಿಗೆ ಎಫ್‌ಡಿಎ ಉಮೇಶ್‌ ಉತ್ತರ ನೀಡಲು ತಡಬಡಾಯಿಸಿದ್ದನು. ಲಂಚದ ಬಗ್ಗೆ ಯಾವುದೇ ಮಾಹಿತಿ ಇಲ್ಲವೆಂದು ಜಂಟಿ ಆಯುಕ್ತ ಶ್ರೀನಿವಾಸ್ ಉತ್ತರ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:46 pm, Mon, 12 September 22

Loading...
Unable to load recommendations.
Follow Us