AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lokayukta Raid: KSDL ನಿಗಮ ಮಂಡಳಿ ಅಧ್ಯಕ್ಷರ ಮನೆ ಮೇಲೆ ಲೋಕಾಯುಕ್ತ ದಾಳಿ ಬೆನ್ನಲ್ಲೇ​ ಎಂಡಿ ನಿವಾಸದ ಮೇಲೂ ರೇಡ್

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ನಿಗಮದ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಮನೆ ಮೇಲೆ ಲೋಕಾಯುಕ್ತರು ದಾಳಿ ಮಾಡಿದ್ದಾರೆ.

Lokayukta Raid: KSDL ನಿಗಮ ಮಂಡಳಿ ಅಧ್ಯಕ್ಷರ ಮನೆ ಮೇಲೆ ಲೋಕಾಯುಕ್ತ ದಾಳಿ ಬೆನ್ನಲ್ಲೇ​ ಎಂಡಿ ನಿವಾಸದ  ಮೇಲೂ ರೇಡ್
ಲೋಕಾಯುಕ್ತ ಕಚೇರಿImage Credit source: prajavani.net
ವಿವೇಕ ಬಿರಾದಾರ
|

Updated on:Mar 03, 2023 | 8:58 AM

Share

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ನಿಗಮದ (KSDL) ಅಧ್ಯಕ್ಷ ಮತ್ತು ಪುತ್ರನ ಮನೆ ಮೇಲೆ ದಾಳಿ ಬೆನ್ನಲ್ಲೆ ನಿಗಮದ ವ್ಯವಸ್ಥಾಪಕ ನಿರ್ದೇಶಕ (MD) ಡಾ.ಮಹೇಶ್ (Dr. Mahesh) ಮನೆ ಮೇಲೆ ಇಂದು (ಮಾರ್ಚ್​​.3) ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದ ಬಸವನಗುಡಿಯಲ್ಲಿರುವ ನಿವಾಸದ ಮೇಲೆ ತಡರಾತ್ರಿ ದಾಳಿ ಮಾಡಿದ್ದಾರೆ. ಇನ್ನು ಶಾಸಕ‌ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪುತ್ರನ ಚನ್ನಗಿರಿ ತಾಲೂಕಿನ ಚನ್ನೇಶಪುರ ಗ್ರಾಮದ ಶಾಸಕರ ಮನೆ ಮೇಲು ಲೋಕಾಯುಕ್ತ ಅಧಿಕಾರಿಗಳು ದಾಳಿಯಾಗುವ ಸಾದ್ಯತೆ ಇದೆ.

ಕೆಎಸ್​ಡಿಎಲ್​ ಅಧ್ಯಕ್ಷ ಮತ್ತು ಪುತ್ರನ ಮನೆ ಮೇಲೆ ದಾಳಿ: 7.62 ಕೋಟಿ ಹಣ ಪತ್ತೆ

ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ, ಕೆಎಸ್​ಡಿಎಲ್​ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪುತ್ರ, BWSSB ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್‌ ಕಚೇರಿ ಮತ್ತು ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಾಡಿದ್ದಾರೆ. ಈ ವೇಳೆ ಬರೊಬ್ಬರಿ ಒಟ್ಟು 7 ಕೋಟಿ 62 ಲಕ್ಷ ರೂ. ಹಣ ಪತ್ತೆಯಾಗಿದೆ. ಹಾಗೇ ಪ್ರಶಾಂತ್ ಮಾಡಾಳ್​​​ ಸೇರಿ ಐವರನ್ನು ಬಂಧಿಸಲಾಗಿದೆ.

BWSSB ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್‌ ನಿನ್ನೆ(ಮಾ.02) ಸಂಜೆ 6.30ಕ್ಕೆ  ಬೆಂಗಳೂರಿನ ಕ್ರೆಸೆಂಟ್​ ರಸ್ತೆಯಲ್ಲಿರುವ ಕಚೇರಿಯಲ್ಲಿ ಪ್ರಶಾಂತ್ 40 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಮಾಡಿದ್ದರು. ಬಳಿಕ ಅಧಿಕಾರಿಗಳು ಕಚೇರಿಯಲ್ಲಿ ಶೋಧ ಕಾರ್ಯ ಆರಂಭಿಸಿ  ಇಂದು (ಮಾ.03) ಬೆಳಗ್ಗೆ 4 ಗಂಟೆಗೆ ಅಂತ್ಯ ಮಾಡಿದ್ದಾರೆ. ಒಟ್ಟು 9 ಗಂಟೆ 30 ನಿಮಿಷಗಳ ಕಾಲ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದು, ಈ ವೇಳೆ ಕಚೇರಿಯಲ್ಲಿದ್ದ ಹಲವು ದಾಖಲೆ ಹಾಗೂ 1: 75 ಕೋಟಿ ರೂ ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ ಪ್ರಶಾಂತ್ ಮಾಡಾಳ್​​​ ಸೇರಿ ಐವರನ್ನು ಬಂಧಿಸಲಾಗಿದೆ.

ಪ್ರಶಾಂತ್ ಮಾಡಾಳ್, ಸಂಬಂಧಿ ಸಿದ್ದೇಶ್, ಅಕೌಂಟೆಂಟ್ ಸುರೇಂದ್ರ, ಹಣ ನೀಡಲು ಬಂದಿದ್ದ ನಿಕೋಲಸ್, ಗಂಗಾಧರ್ ಎನ್ನುವವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿ ಕರೆದೊಯ್ದಿದ್ದು, ಇಂದು (ಶುಕ್ರವಾರ) ಲೋಕಾಯುಕ್ತ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಹಾಜರುಪಡಿಸಲಿದ್ದಾರೆ. ಇನ್ನಷ್ಟು ವಿಚಾರಣೆಗಾಗಿ ಐವರನ್ನು ತಮ್ಮ ವಶಕ್ಕೆ ನೀಡುವಂತೆ ಲೋಕಾಯುಕ್ತ ಪೊಲೀಸರು ನ್ಯಾಯಾಲಕ್ಕೆ ಮನವಿ ಮಾಡುವ ಸಾಧ್ಯತೆಗಳಿವೆ.

ಮುಂದುವರೆದ ಮಾಡಾಳ್ ವಿರೂಪಾಕ್ಷಪ್ಪ ಮನೆಯಲ್ಲಿ ಶೋಧ

ಇನ್ನು ಪ್ರಶಾಂತ್ ಅವರ ತಂದೆ, ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ಮುಂದುವರೆದಿದೆ. ಬೆಂಗಳೂರಿನ ಸಂಜಯನಗರ ಬಳಿ ಇರುವ ಶಾಸಕ‌ ಮಾಡಾಳ್ ವಿರೂಪಾಕ್ಷಪ್ಪ ಒಡೆತನದ ಕೆ.ಎಂ.ವಿ ಮಾನ್ಷಿಯನ್ ನಿವಾಸದಲ್ಲಿ ಡಿವೈ ಎಸ್ಪಿ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ.

ಟೆಂಡರ್ ಕೊಡಿಸಲು ಗುತ್ತಿಗೆದಾರನಿಂದ 80 ಲಕ್ಷ ಡಿಮ್ಯಾಂಡ್

ಟೆಂಡರ್ ಕೊಡಿಸುವ ವಿಚಾರದಲ್ಲಿ ಗುತ್ತಿಗೆದಾರನಿಂದ 80 ಲಕ್ಷಕ್ಕೂ ಹೆಚ್ಚು ಹಣಕ್ಕೆ ಡಿಮ್ಯಾಂಡ್ ಮಾಡಿದ್ದು, ಮುಂಗಡವಾಗಿ 40 ಲಕ್ಷಕ್ಕೂ ಹೆಚ್ಚು ಹಣ ಪಡೆದುಕೊಳ್ಳುವ ಸಂದರ್ಭದಲ್ಲಿ ಲೋಕಾಯುಕ್ತ ದಾಳಿ ನಡೆಸಿತ್ತು. ಶಾಸಕರ ಪುತ್ರ ಪ್ರಶಾಂತ್‌ BWSSB ಮುಖ್ಯ ಲೆಕ್ಕಾಧಿಕಾರಿಯಾಗಿದ್ದಾರೆ. KSDL ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಯಿಟ್ಟಿದ್ದರು ಎನ್ನಲಾಗುತ್ತಿದೆ. ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ವಿರೂಪಾಕ್ಷಪ್ಪ ಕಚೇರಿಯಲ್ಲಿ 3 ಬ್ಯಾಗ್​ಗಳಲ್ಲಿ 2 ಸಾವಿರ ರೂ. ಮತ್ತು 500 ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆ ಆಗಿವೆ. ಮಾಡಾಳ್ ಪ್ರಶಾಂತ್ ಕಚೇರಿ ಕಲೆಕ್ಷನ್​ ಸೆಂಟರ್​ ಆಗಿರುವ ಶಂಕೆ ವ್ಯಕ್ತವಾಗಿದೆ.

ಹಣದ ಬ್ಯಾಗ್​ಗಳು ಪತ್ತೆ

2008ರಲ್ಲಿ ತಂದೆ ಆದಾಯ ಕೇವಲ 1.2 ಲಕ್ಷ ರೂಪಾಯಿ ತೋರಿಸಿ 3ಬಿ ಮೀಸಲಾತಿ ಗಿಟ್ಟಿಸಿ ಕೆಎಎಸ್‌ನಲ್ಲಿ ತೇರ್ಗಡೆ ಆಗಿದ್ದ  ಮಾಡಾಳ್ ಪ್ರಶಾಂತ್​​ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ. ಮಾಡಾಳ್ ವಿರೂಪಾಕ್ಷಪ್ಪಗೆ ಮೂವರು ಗಂಡು ಮಕ್ಕಳಿದ್ದು, ಮೂವರು ಗಂಡು ಮಕ್ಕಳ ಪೈಕಿ ಪ್ರಶಾಂತ್​ ಎರಡನೇ ಪುತ್ರ. ಈ ಹಿಂದೆ ನಡೆದಿರುವ KSDLನ ಟೆಂಡರನಲ್ಲೂ ಅವ್ಯವಹಾರ ಶಂಕೆ ವ್ಯಕ್ತವಾಗಿದೆ. ಕಚೇರಿಯಲ್ಲಿರುವ ಎಲ್ಲ ಹಣವನ್ನು  ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:21 am, Fri, 3 March 23