AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು, ಮಂಡ್ಯ ಸೇರಿದಂತೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು, ಮಂಡ್ಯ, ಹಾವೇರಿ ಸೇರಿದಂತೆ ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಏಕಕಾಲಕ್ಕೆ 11 ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ, CAO ಪುಟ್ಟಸ್ವಾಮಿ, ಇಂಜಿನಿಯರ್ ಪ್ರೇಮ್ ಸಿಂಗ್ ಸೇರಿದಂತೆ ಹಲವರನ್ನು ಪರಿಶೀಲನೆಗೆ ಒಳಪಡಿಸಲಾಗಿದೆ.

ಬೆಂಗಳೂರು, ಮಂಡ್ಯ ಸೇರಿದಂತೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ
ಬೆಂಗಳೂರು, ಮಂಡ್ಯ ಸೇರಿದಂತೆ ರಾಜ್ಯದ 10 ಕಡೆ ಲೋಕಾ ರೇಡ್
ಭಾವನಾ ಹೆಗಡೆ
|

Updated on: Nov 25, 2025 | 10:28 AM

Share

ಬೆಂಗಳೂರು, ನವೆಂಬರ್ 25: ಬೆಂಗಳೂರು, ಮಂಡ್ಯ, ಹಾವೇರಿ ಸೇರಿದಂತೆ ರಾಜ್ಯದ ಹತ್ತು ಕಡೆ ಲೋಕಾಯುಕ್ತ ರೈಡ್ (Lokayukta raid) ಮಾಡಿದ್ದು, ಬೆಳ್ಳಂಬೆಳಿಗ್ಗೆ ಅಧಿಕಾರಿಗೆ ಶಾಕ್ ನೀಡಿದ್ದಾರೆ. ಬೆಂಗಳೂರಿನಲ್ಲಿ RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ, ಮಂಡ್ಯ ನಗರ ಪಾಲಿಕೆ CAO ಪುಟ್ಟಸ್ವಾಮಿ, ಬೀದರ್ನ ಕೃಷ್ಣಾ ಮೇಲ್ದಂಡೆ ಯೋಜನೆಯ ಇಂಜಿನಿಯರ್ ಪ್ರೇಮ್ ಸಿಂಗ್ ಸೇರಿ 11 ಅಧಿಕಾರಿಗಳ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ , ಪರಿಶೀಲನೆ ನಡೆಸುತ್ತಿದೆ.

ಎಲ್ಲೆಲ್ಲಿ ಲೋಕಾಯುಕ್ತಾ ದಾಳಿ?

ಬೀದರ್‌ನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್  ಪ್ರೇಮ್‌ಸಿಂಗ್ ರಾಥೋಡ್ ಮನೆ ಮೇಲೆ ಲೋಕಾಯುಕ್ತ ಡಿವೈಎಸ್‌ಪಿ ಹನುಮಂತರಾಯ್ ನೇತೃತ್ವದಲ್ಲಿ ದಾಳಿ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ.ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಭೀಮರಾಯನ ಗುಡಿಯ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಶಿವಮೊಗ್ಗ ಮೆಡಿಕಲ್ ಕಾಲೇಜು ಡಿನ್​ನ ಸ್ಟೇನೋ ಮನೆ ಮೇಲೆ ಲೋಕಾಯುಕ್ತ ಎಸ್​ಪಿ ಮಂಜುನಾಥ್ ಚೌಧರಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಕೊಡಗಿನಲ್ಲಿ PWD, ಎಂಜಿನಿಯರ್ ಗಿರೀಶ್ ಕಚೇರಿ, ಮನೆಗಳ‌ ಮೇಲೆ ಲೋಕಾಯುಕ್ತ DYSP ದಿನಕರ್ ಶೆಟ್ಟಿ ನೇತೃತ್ವದಲ್ಲಿ ಮೈಸೂರಿನಲ್ಲಿ ದಾಳಿ ನಡೆಸಿದ್ದು, ಮಡಿಕೇರಿಯಲ್ಲಿ ಲೋಕಾಯುಕ್ತ ಸಬ್ ಇನ್ಸ್‌ಪೆಕ್ಟರ್ ವೀಣಾ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆದಿದೆ.

ದಾವಣಗೆರೆ ಎಪಿಎಂಸಿ ಸಹಾಯಕ‌ ನಿರ್ದೇಶಕ ಪ್ರಭು ನಿವಾಸ, ಕಚೇರಿ, ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ SP ಎಂ.ಎಸ್.ಕೌಲಾಪೂರೆ ನೇತೃತ್ವದಲ್ಲಿ ದಾಳಿ ನಡೆಸದಿದೆ.ಹಾವೇರಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಇಂಜನಿಯರ್ ಶೇಖಪ್ಪ ಸಣ್ಣಪ್ಪ ಮತ್ತಿಕಟ್ಟಿ ನಿವಾಸದ ಮೇಲೆ ಲೋಕಾ ದಾಳಿ ನಡೆದಿದೆ. ಧಾರವಾಡದಲ್ಲಿ ಪ್ರೊ.ಸುಭಾಶ್ಚಂದ್ರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಮೈಸೂರಿನಲ್ಲಿ ರೆವಿನ್ಯೂ ಇನ್ಸ್​ಪೆಕ್ಟರ್​ ರಾಮಸ್ವಾಮಿ ಮನೆಯಲ್ಲಿ ಲೋಕಾಯುಕ್ತ ಪೊಲೀಸರಿಂದ ಪರಿಶೀಲನೆ ನಡೆಯುತ್ತಿದೆ. ಮಂಡ್ಯದಲ್ಲೂ ಏಕಕಾಲಕ್ಕೆ 5 ಕಡೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ಪುಟ್ಟಸ್ವಾಮಿ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ ಜಿಬಿಎನ ಟಿವಿಸಿಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಾರಣ ಏನು?

ಕುಲ ಸಚಿವರಾಗಿ ಅಧಿಕಾರ ವಹಿಸಿಕೊಳ್ಳಬೇಕಿದ್ದ ನಾಟೇಕರ್​ಗೆ ಶಾಕ್

ಧಾರವಾಡದ ಕವಿವಿ ಅಂಬೇಡ್ಕರ್ ಸ್ಟಡೀಸ್ ಸಂಯೋಜಕ ನಾಟೀಕರ್ ಅವರ ಯಾಲಕ್ಕಿ ಶೆಟ್ಟರ್ ಕಾಲನಿಯಲ್ಲಿನ ಮನೆ, ಕವಿವಿ ಸಮಾಜಶಾಸ್ತ್ರ ವಿಭಾಗ, ಅಂಬೇಡ್ಕರ್ ಸ್ಟಡೀಸ್, ಕೊಪ್ಪಳದಲ್ಲಿಯ ಮನೆ, ವಿಜಯಪುರ ಜಿಲ್ಲೆಯ ತಾಳಿಕೋಟೆಯ ಸ್ವಂತ ಮನೆಯ ಮೇಲೆ ದಾಳಿ ನಡೆದಿದೆ. ನಾಟೀಕರ್‌ಗೆ ಲೋಕಾಯುಕ್ತ ಶಾಕ್‌ ನೀಡಿದೆ. ನಾಟೀಕರ್ ಇಂದು ಮೌಲ್ಯಮಾಪನ ಕುಲಸಚಿವರಾಗಿ ಅಧಿಕಾರ ವಹಿಸಿಕೊಳ್ಳಬೇಕಿತ್ತು. ಆದರೆ ಅಕ್ರಮ ಆಸ್ತಿ ಗಳಿಕೆ‌ ಹಿನ್ನೆಲೆ ಇಂದು ಬೆಳಿಗ್ಗೆ ನಾಟೀಕರ್ ಮನೆ ಮತ್ತು‌ ಕಚೇರಿ‌ ಮೇಲೆ‌ ಲೋಕಾಯುಕ್ತ ದಾಳಿ ನಡೆಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.