ಬಿಜೆಪಿ ಶಾಸಕ ಪುತ್ರನ ಕಚೇರಿಯಲ್ಲಿ ಲೋಕಾಯುಕ್ತ ದಾಳಿ ಅಂತ್ಯ, ಐವರ ಬಂಧನ, ಕಾರ್ಯಚರಣೆ ವೇಳೆ ಏನೇನು ಸಿಕ್ತು? ಇಲ್ಲಿದೆ ಮಾಹಿತಿ

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಅಂತ್ಯವಾಗಿದೆ. ಒಟ್ಟು 9 ಗಂಟೆ 30 ನಿಮಿಷಗಳ ಕಾಲ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಇನ್ನು ಕಾರ್ಯಚರಣೆ ವೇಳೆ ಏನೆಲ್ಲ ಸಿಕ್ತು ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ಬಿಜೆಪಿ ಶಾಸಕ ಪುತ್ರನ ಕಚೇರಿಯಲ್ಲಿ ಲೋಕಾಯುಕ್ತ ದಾಳಿ ಅಂತ್ಯ, ಐವರ ಬಂಧನ, ಕಾರ್ಯಚರಣೆ ವೇಳೆ ಏನೇನು ಸಿಕ್ತು? ಇಲ್ಲಿದೆ ಮಾಹಿತಿ
Follow us
ರಮೇಶ್ ಬಿ. ಜವಳಗೇರಾ
|

Updated on:Mar 03, 2023 | 9:34 AM

ಬೆಂಗಳೂರು: ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ, BWSSB ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್‌ ಕಚೇರಿಯಲ್ಲಿ ಮೇಲೆ ನಡೆದಿದ್ದ ಲೋಕಾಯುಕ್ತ ದಾಳಿ ಅಂತ್ಯವಾಗಿದೆ. ಬೆಂಗಳೂರಿನ ಕ್ರೆಸೆಂಟ್​ ರಸ್ತೆಯಲ್ಲಿರುವ ಕಚೇರಿಯಲ್ಲಿ ನಿನ್ನೆ(ಮಾ.02) ಸಂಜೆ 6.30ಕ್ಕೆ ಪ್ರಶಾಂತ್ 40 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ದಾಳಿ ಮಾಡಿತ್ತು. ಬಳಿಕ ಕಚೇರಿಯಲ್ಲಿ ಶೋಧ ಕಾರ್ಯ ಆರಂಭಿಸಿತ್ತು. ಅದು ಇಂದು (ಮಾ.03) ಬೆಳಗ್ಗೆ 4 ಗಂಟೆಗೆ ಅಂತ್ಯವಾಗಿದೆ. ಒಟ್ಟು 9 ಗಂಟೆ 30 ನಿಮಿಷಗಳ ಕಾಲ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದು, ಈ ವೇಳೆ ಕಚೇರಿಯಲ್ಲಿದ್ದ ಹಲವು ದಾಖಲೆ ಹಾಗೂ ಕೋಟಿ ಕೋಟಿ ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ ಪ್ರಶಾಂತ್ ಮಾಡಾಳ್​​​ ಸೇರಿ ಐವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ

ನಿನ್ನೆ ಸಂಜೆ ನಡೆದ ದಾಳಿ ಇಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಅಂತ್ಯವಾಗಿದ್ದು, ಪರಿಶೀಲನೆ ವೇಳೆ ಕಚೇರಿಯಲ್ಲಿ 1.62 ಕೋಟಿ ರೂ. ಹಾಗೂ ಸಂಜಯ್​ ನಗರದಲ್ಲಿರುವ ಪ್ರಶಾಂತ್ ನಿವಾಸದಲ್ಲಿ 6 ಕೋಟಿ ರೂ. ನಗದು ಸೇರಿದಂತೆ ಒಟ್ಟು 7.62 ಕೋಟಿ ರೂ ನಗದು ಹಣ ಪತ್ತೆಯಾಗಿದೆ.

ಪ್ರಶಾಂತ್ ಮಾಡಾಳ್, ಸಂಬಂಧಿ ಸಿದ್ದೇಶ್, ಅಕೌಂಟೆಂಟ್ ಸುರೇಂದ್ರ, ಹಣ ನೀಡಲು ಬಂದಿದ್ದ ನಿಕೋಲಸ್, ಗಂಗಾಧರ್ ಎನ್ನುವವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿ ಕರೆದೊಯ್ದಿದ್ದು, ಇಂದು(ಶುಕ್ರವಾರ) ಲೋಕಾಯುಕ್ತ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಹಾಜರುಪಡಿಸಲಿದ್ದಾರೆ. ಇನ್ನಷ್ಟು ವಿಚಾರಣೆಗಾಗಿ ಐವರನ್ನು ತಮ್ಮ ವಶಕ್ಕೆ ನೀಡುವಂತೆ ಲೋಕಾಯುಕ್ತ ಪೊಲೀಸರು ನ್ಯಾಯಾಲಕ್ಕೆ ಮನವಿ ಮಾಡುವ ಸಾಧ್ಯತೆಗಳಿವೆ.

ಶಾಸಕರ ಮನೆಯಲ್ಲಿ ಮುಂದುವರಿದ ಪರಿಶೀಲನೆ

ಇನ್ನು ಪ್ರಶಾಂತ್ ಅವರ ತಂದೆ, ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ಮುಂದುವರೆದಿದೆ. ಬೆಂಗಳೂರಿನ ಸಂಜಯನಗರ ಬಳಿ ಇರುವ ಶಾಸಕ‌ ಮಾಡಾಳ್ ವಿರೂಪಾಕ್ಷಪ್ಪ ಒಡೆತನದ ಕೆ.ಎಂ.ವಿ ಮಾನ್ಷಿಯನ್ ನಿವಾಸದಲ್ಲಿ ಡಿವೈ ಎಸ್ಪಿ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ.

ಟೆಂಡರ್ ಕೊಡಿಸುವ ವಿಚಾರದಲ್ಲಿ ಗುತ್ತಿಗೆದಾರನಿಂದ 80 ಲಕ್ಷಕ್ಕೂ ಹೆಚ್ಚು ಹಣಕ್ಕೆ ಡಿಮ್ಯಾಂಡ್ ಮಾಡಿದ್ದು, ಮುಂಗಡವಾಗಿ 40 ಲಕ್ಷಕ್ಕೂ ಹೆಚ್ಚು ಹಣ ಪಡೆದುಕೊಳ್ಳುವ ಸಂದರ್ಭದಲ್ಲಿ ಲೋಕಾಯುಕ್ತ ದಾಳಿ ನಡೆಸಿತ್ತು. ಶಾಸಕರ ಪುತ್ರ ಪ್ರಶಾಂತ್‌ BWSSB ಮುಖ್ಯ ಲೆಕ್ಕಾಧಿಕಾರಿಯಾಗಿದ್ದಾರೆ. KSDL ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಯಿಟ್ಟಿದ್ದರು ಎನ್ನಲಾಗುತ್ತಿದೆ. ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ವಿರೂಪಾಕ್ಷಪ್ಪ ಕಚೇರಿಯಲ್ಲಿ 3 ಬ್ಯಾಗ್​ಗಳಲ್ಲಿ 2 ಸಾವಿರ ರೂ. ಮತ್ತು 500 ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆ ಆಗಿವೆ. ಮಾಡಾಳ್ ಪ್ರಶಾಂತ್ ಕಚೇರಿ ಕಲೆಕ್ಷನ್​ ಸೆಂಟರ್​ ಆಗಿರುವ ಶಂಕೆ ವ್ಯಕ್ತವಾಗಿದೆ.

ಹಣದ ಬ್ಯಾಗ್​ಗಳು ಪತ್ತೆ

2008ರಲ್ಲಿ ತಂದೆ ಆದಾಯ ಕೇವಲ 1.2 ಲಕ್ಷ ರೂಪಾಯಿ ತೋರಿಸಿ 3ಬಿ ಮೀಸಲಾತಿ ಗಿಟ್ಟಿಸಿ ಕೆಎಎಸ್‌ನಲ್ಲಿ ತೇರ್ಗಡೆ ಆಗಿದ್ದ  ಮಾಡಾಳ್ ಪ್ರಶಾಂತ್​​ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ. ಮಾಡಾಳ್ ವಿರೂಪಾಕ್ಷಪ್ಪಗೆ ಮೂವರು ಗಂಡು ಮಕ್ಕಳಿದ್ದು, ಮೂವರು ಗಂಡು ಮಕ್ಕಳ ಪೈಕಿ ಪ್ರಶಾಂತ್​ ಎರಡನೇ ಪುತ್ರ. ಈ ಹಿಂದೆ ನಡೆದಿರುವ KSDLನ ಟೆಂಡರನಲ್ಲೂ ಅವ್ಯವಹಾರ ಶಂಕೆ ವ್ಯಕ್ತವಾಗಿದೆ. ಕಚೇರಿಯಲ್ಲಿರುವ ಎಲ್ಲ ಹಣವನ್ನು  ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Published On - 7:20 am, Fri, 3 March 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ