ಬೆಂಗಳೂರು: ವಾಹನ ಸವಾರರಿಂದ ಹಣ ವಸೂಲಿ ಕುರಿತು ದೂರು ಹಿನ್ನೆಲೆ ರಾಜ್ಯದ ಹಲವೆಡೆ RTO ಚೆಕ್ ಪೋಸ್ಟ್ಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಬೆಂಗಳೂರು ಹೊರವಲಯದಲ್ಲಿನ ಅತ್ತಿಬೆಲೆ, ಬೀದರ್ ಜಿಲ್ಲೆಯ ಹುಮ್ನಾಬಾದ್, ಬಳ್ಳಾರಿಯ ಹಗರಿ RTO ಚೆಕ್ ಪೋಸ್ಟ್ ಮೇಲೂ ದಾಳಿ ಮಾಡಲಾಗಿದೆ. ಬೀದರ್, ಕಲ್ಬುರ್ಗಿ ಎಸ್ಪಿ ಪಿ.ಕರ್ನೂಲ್ ನೇತೃತ್ವದ ತಂಡದಿಂದ ಬೆಳಗ್ಗೆ ನಾಲ್ಕು ಗಂಟೆಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಚೇಕ್ ಪೋಸ್ಟ್ನಲ್ಲಿ ಒಂದೂವರೆ ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ. ಪತ್ತೆಯಾದ ಹಣ ದಂಡ ಹಾಕಿದ್ದೋ ಅಥವಾ ಲಂಚದ ಹಣವೋ ಎಂದು ಅಧಿಕಾರಿಗಳು ಪರೀಲನೆಗೆ ತೊಡಗಿದ್ದಾರೆ. ಆರ್ಟಿಓ ಅಧಿಕಾರಿ ಹೇಮಂತ ಎನ್ನುವವರ ಬಳಿ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ಕಲೆ ಹಾರುತ್ತಿದ್ದಾರೆ.
ಪರ್ಮಿಟ್ ಹಾಗೂ ಟ್ಯಾಕ್ಸ್ ಇಲ್ಲದೇ ಓಡಾಡುತ್ತಿರುವ ಬಸ್ಗಳ ಮೇಲೂ ದಾಳಿ
ತುಮಕೂರು: ದಸರಾ ಹಬ್ಬ ಹಿನ್ನೆಲೆಯಲ್ಲಿ ಖಾಸಗಿ ಬಸ್ ಮೇಲೆ ಆರ್ಟಿಓ ಅಧಿಕಾರಿಗಳ ದಾಳಿ ಮಾಡಿದ್ದು, ಬೆಂಗಳೂರು ಹಾಗೂ ಹೊಸದುರ್ಗಕ್ಕೆ ಓಡಾಡುತ್ತಿದ್ದ Ka41 c8898 ಹಾಗೂ ka41 c 8903 ನಂಬರ್ನ ಎರಡು ಖಾಸಗಿ ಬಸ್ ವಶಕ್ಕೆ ಪಡೆದಿದ್ದಾರೆ. ತುಮಕೂರು ಆರ್ಟಿಓ ಇನ್ಸಪೇಕ್ಟರ್ ಷರೀಪ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ದಸರಾ ಹಬ್ಬಕ್ಕೆ ಹೆಚ್ಚಿನ ಶುಲ್ಕ ಪಡೆಯುತ್ತಾರೆಂಬ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ. ಪರ್ಮಿಟ್ ಹಾಗೂ ಟ್ಯಾಕ್ಸ್ ಇಲ್ಲದೇ ಓಡಾಡುತ್ತಿರುವ ಬಸ್ಗಳ ಮೇಲೂ ದಾಳಿ ಮಾಡಿದ್ದಾರೆ. ಕೇವಲ ಬೆಂಗಳೂರಿನಲ್ಲಿ ಓಡಿಸಲು ಪರ್ಮಿಟ್ ಇರುವ ಬಸ್ಗಳು, ಆದರೆ ಬೆಂಗಳೂರಿನಿಂದ ಹೊಸದುರ್ಗ ನಡುವೆ ಬಸ್ಗಳು ಓಡಾಟ ಮಾಡುತ್ತಿದ್ದವು. ಬೆಂಗಳೂರಿನಲ್ಲಿ ಫ್ಯಾಕ್ಟರಿಗಳಿಗೆ ಓಡಾಡಲು ಬಳಸುವ ಬಸ್ನಲ್ಲಿ ಪ್ರಯಾಣಿಕರಿದ್ದ ಕಾರಣ ದಾಳಿ ಮಾಡಲಾಗಿದೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ನಂಗಲಿ ಆರ್.ಟಿ.ಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದ ತಂಡ ದಾಳಿ ಮಾಡಿದೆ. ಗಡಿ ಭಾಗದಲ್ಲಿ ವಾಹನಗಳಿಂದ ಹಣ ವಸೂಲಿ ಆರೋಪ ಹಿನ್ನೆಲೆ ದಾಳಿ ಮಾಡಿದ್ದು, ಅಧಿಕಾರಿಗಳು ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ.
ವಿಜಯಪುರ ಹೊರವಲಯದ ಚೆಕ್ಪೋಸ್ಟ್ ಮೇಲೆ ದಾಳಿ
ವಿಜಯಪುರ ಜಿಲ್ಲೆಯ ಹೊಸಪೇಟೆಯ ಹೊರವಲಯದ ಶನೇಶ್ವರ ದೇವಾಲಯದ ಬಳಿ ಇರೋ RTO ಚೆಕ್ ಪೋಸ್ಟ್ ಮೇಲೆ ಬೆಳಗಿನ ಜಾವ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. DYSP ಅಯ್ಯನಗೌಡ ನೇತೃತ್ವದಲ್ಲಿ ದಾಳಿ ಮಾಡಿದ್ದು, ದಾಳಿ ವೇಳೆ ಯಾರೂ ಇರಲಿಲ್ಲ ಎಂಬ ಮಾಹಿತಿ ನೀಡಲಾಗಿದೆ. ಭಾರಿ ವಾಹನಗಳು ಸೇರಿದಂತೆ ಇತರೆ ವಾಹನ ಚಾಲಕರ ಬಳಿ ಹಣ ವಸೂಲಿ ಆರೋಪ ಕೇಳಿಬಂದಿದ್ದು, ದೂರಿನ ಆಧಾರದ ಮೇಲೆ ದಾಳಿ ಮಾಡಲಾಗಿದೆ. ಇನ್ನು ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿ 4ರಲ್ಲಿರುವ ಚೆಕ್ ಪೋಸ್ಟ್ ಮೇಲೂ ಅಧಿಕಾರಿಗಳು ದಾಳಿ ಮಾಡಿದ್ದು, ದಾಳಿ ವೇಳೆ ಚೆಕ್ಪೋಸ್ಟ್ನಲ್ಲಿ ನಗದು ಪತ್ತೆಯಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:36 am, Fri, 30 September 22