AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಯಕ್ರಮದಲ್ಲಿ ಕುಸಿದುಬಿದ್ದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದಿದ್ದಾರೆ. ಅಸ್ವಸ್ಥರಾಗಿದ್ದ ಕೂಡಲೇ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ಅವರ ಆರೋಗ್ಯ ಹೇಗಿದೆ? ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ಕಾರ್ಯಕ್ರಮದಲ್ಲಿ ಕುಸಿದುಬಿದ್ದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
Santosh Hegde
ರಾಚಪ್ಪಾಜಿ ನಾಯ್ಕ್
| Edited By: |

Updated on:Apr 03, 2026 | 6:17 PM

Share

ಬೆಂಗಳೂರು, (ಏಪ್ರಿಲ್ 03): ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆಯವರು (Lokayukta retired justice santosh hegde ) ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಇಂದು (ಏಪ್ರಿಲ್ 03) ಸ್ಕೌಟ್ಸ್ & ಗೈಡ್ಸ್ ಆಯುಕ್ತ PGR ಸಿಂಧ್ಯಾ ಅವರಿಗೆ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಸಂತೋಷ್ ಹೆಗ್ಡೆ ಭಾಗವಹಿಸಿದ್ದು, ಈ ವೇಳೆ ಭಾಷಣ ಮಾಡುವಾಗ ಅಸ್ವಸ್ಥಗೊಂಡಿದ್ದಾರೆ. ಬಳಿಕ ಭಾಷಣ ಮುಗಿಸಿ ವೇದಿಕೆ ಮೇಲಿನ ಕುರ್ಚಿ ಮೇಲೆ ಕುಳಿತುಕೊಳ್ಳುವಾಗ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸದ್ಯ ಅವರಿಗೆ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಕಿತ್ಸೆ ನೀಡಲಾಗುತ್ತಿದೆ. ಅಸ್ವಸ್ಥರಾಗಿ ವೇದಿಕೆ ಮೇಲೆ ಕುಸಿದುಬೀಳುತ್ತಿದ್ದಂತೆಯೇ ಕೂಡಲೇ ಸಂತೋಷ ಹೆಗ್ಡೆಯವರನ್ನು ಸ್ವತ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಸಂತೋಷ್ ಹೆಗ್ಡೆಗೆ ಚಿಕಿತ್ಸೆ ಮುಂದುವರೆದಿದ್ದ, ಸದ್ಯ ಚೇರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಂತೋಷ್ ಹೆಗ್ದೆ ಅವರಿಗೆ GIDDINESS ಆಗಿತ್ತು ಎಂದು ಎಂದು ತಿಳಿದುಬಂದಿದೆ. ಗಡ್ಡಿನೆಸ್ ನಿಂದಾಗಿ ಸುಸ್ತು, ವಾಕರಿಕೆ,ಮತ್ತು ಕಣ್ಣು ಮಂಜಾದಂತಾಗುತ್ತೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:06 pm, Fri, 3 April 26

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ