ಇಂದು ಮಧ್ಯರಾತ್ರಿಯಿಂದ ಲಾರಿ ಮುಷ್ಕರ; 2 ಲಕ್ಷ ಲಾರಿ ಸ್ಥಗಿತ, ಲಾರಿ ಸಂಘಟನೆಗಳ ಬೇಡಿಕೆಗಳೇನು?

ಕೇಂದ್ರದ ಹಿಟ್ ಆ್ಯಂಡ್ ರನ್ ಕಾನೂನು ವಿರೋಧಿಸಿ ಮತ್ತು ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಕ್ಷಿಣ ಭಾರತದ ಲಾರಿ ಮಾಲೀಕರ ಸಂಘಗಳು ಮುಷ್ಕರಕ್ಕೆ ಕರೆಕೊಟ್ಟಿವೆ. ಕರ್ನಾಟಕ ಲಾರಿ ಮಾಲೀಕರ ಸಂಘದಿಂದಲೂ ಮಷ್ಕರಕ್ಕೆ ಬೆಂಬಲ ಸಿಕ್ಕಿದೆ. ಇತ್ತ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟ್ ಸಂಘ ಮುಷ್ಕರಕ್ಕೆ ಬೆಂಬಲ ನೀಡಿಲ್ಲ.

ಇಂದು ಮಧ್ಯರಾತ್ರಿಯಿಂದ ಲಾರಿ ಮುಷ್ಕರ; 2 ಲಕ್ಷ ಲಾರಿ ಸ್ಥಗಿತ, ಲಾರಿ ಸಂಘಟನೆಗಳ ಬೇಡಿಕೆಗಳೇನು?
ಸಾಂದರ್ಭಿಕ ಚಿತ್ರ
Follow us
Kiran Surya
| Updated By: ಆಯೇಷಾ ಬಾನು

Updated on: Jan 17, 2024 | 9:04 AM

ಬೆಂಗಳೂರು, ಜ.17: ಹಿಟ್ ಆ್ಯಂಡ್ ರನ್ ಕಾನೂನು(Hit and Run Case), ನಯಾ ರೂಲ್ಸ್ ಜಾರಿಗೆ ಮುಂದಾದ ಕೇಂದ್ರ ಸರ್ಕಾರದ (Central Government) ವಿರುದ್ಧ ಸಿಡಿದೆದ್ದಿರೋ ಲಾರಿ ಓನರ್ಸ್ ಅಸೋಸಿಯೇಷನ್(Lorry owners association) ಕಾನೂನು ರದ್ದತಿಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇಂದು ಮಧ್ಯರಾತ್ರಿಯಿಂದಲೇ ಲಾರಿ ಸಂಘಟನೆಗಳು ಮುಷ್ಕರ ಕೈಗೊಳ್ಳಲಿದ್ದಾರೆ. ಮುಷ್ಕರ ಹಿನ್ನೆಲೆ 2 ಲಕ್ಷ ಲಾರಿಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ಕೇಂದ್ರದ ಹಿಟ್ ಆ್ಯಂಡ್ ರನ್ ಕಾನೂನು ವಿರೋಧಿಸಿ ಮತ್ತು ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಕ್ಷಿಣ ಭಾರತದ ಲಾರಿ ಮಾಲೀಕರ ಸಂಘಗಳು ಮುಷ್ಕರಕ್ಕೆ ಕರೆಕೊಟ್ಟಿವೆ. ಕರ್ನಾಟಕ ಲಾರಿ ಮಾಲೀಕರ ಸಂಘದಿಂದಲೂ ಮಷ್ಕರಕ್ಕೆ ಬೆಂಬಲ ಸಿಕ್ಕಿದೆ. ಇತ್ತ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟ್ ಸಂಘ ಮುಷ್ಕರಕ್ಕೆ ಬೆಂಬಲ ನೀಡಿಲ್ಲ. ಇನ್ನು ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಹಿಟ್ ಅ್ಯಂಡ್ ರನ್ ಪ್ರಕರಣಗಳಿಗೆ ಕಠಿಣ ಕಾನೂನುಗಳ ವಿರುದ್ಧ ಪ್ರತಿಭಟಿಸಲು ಮುಷ್ಕರಕ್ಕೆ ಕರೆ ನೀಡಲಾಗಿದೆ. ಹೊಸ ಕಾನೂನು ಪ್ರಕಾರ, ರಸ್ತೆಯಲ್ಲಿ ಚಲಿಸುವಾಗ ಲಾರಿಗಳಿಗೆ ಯಾರಾದರೂ ಬಂದು ಅಕಸ್ಮಾತಾಗಿ ಡಿಕ್ಕಿ ಹೊಡೆದರೆ, ಹಾಗೂ ನಮ್ಮ ಚಾಲಕರು ವಾಹನದಲ್ಲಿ ಏನಾದರೂ ತೊಂದರೆ ಉಂಟಾಗಿ ಎದುರಿನ ವಾಹನಕ್ಕೆ ಡಿಕ್ಕಿ ಹೊಡೆದು ಅದರಲ್ಲಿದ್ದ ಪ್ರಯಾಣಿಕರು ಮೃತಪಟ್ಟರೆ ಲಾರಿ ಚಾಲಕರಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂ.ವರೆಗೆ ದಂಡ ಪಾವತಿಸಬೇಕಾದ ಹಿನ್ನೆಲೆ, ಕಾನೂನು ಹಿಂಪಡೆಯುವಂತೆ ಆಗ್ರಹಿಸಿ ಮುಷ್ಕರ ಕೈಗೊಳ್ಳಲಾಗುತ್ತಿದೆ. ಅತ್ಯಗತ್ಯ ಸೇವೆಗಳನ್ನ ಹೊರತುಪಡಿಸಿ ಕೆಲ ಸೇವೆಗಳು ವಿಳಂಭವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಜನವರಿ 16ರ ಮಧ್ಯರಾತ್ರಿಯಿಂದ ಬೆಂಗಳೂರಿನಲ್ಲಿ ಲಾರಿ ಮುಷ್ಕರ; ಏನಿರುತ್ತೆ, ಏನಿರಲ್ಲ?

ಲಾರಿ ಸಂಘಟನೆಗಳ ಬೇಡಿಕೆಗಳೇನು?

  • ಕೇಂದ್ರ ಸರ್ಕಾರದ ಭಾರತೀಯ ನ್ಯಾಯ ಸಂಹಿತೆ ಕಲಂ 106ರ ಉಪವಿಧಿ 1ಮತ್ತು 2 ಅನ್ನು ಕೈ ಬಿಡಬೇಕು

    ಕರ್ನಾಟಕ ಸರ್ಕಾರದ ಮುಂದಿರುವ ಬೇಡಿಕೆಗಳು

  • ರಾಜ್ಯದ ಗಡಿ ಭಾಗಗಳಲ್ಲಿರುವ ಎಲ್ಲಾ ಸಾರಿಗೆ ಇಲಾಖೆ ತಪಾಸಣೆ ಠಾಣೆಗಳನ್ನು ತೆಗೆದುಹಾಕುವುದು
  • EXCESS PROJECTION ವಿಧಿಸುತ್ತಿರುವ 20 ಸಾವಿರ ದಂಡವನ್ನು ಕಡಿಮೆಗೊಳಿಸಬೇಕು
  • ಕಪ್ಪು ಪಟ್ಟಿ ಹೆಸರಿನಲ್ಲಿ ವಾಣಿಜ್ಯ ವಾಹನಗಳಿಗೆ FC ಮತ್ತು ಪರ್ಮಿಟ್ ನವೀಕರಣ ಮಾಡಿಕೊಡಲು ನಿರಾಕರಿಸುವುದನ್ನು ನಿಲ್ಲಿಸಬೇಕು
  • DSA ಕೇಸುಗಳು ಎಲ್ಲೇ ಇದ್ದರು ಸಹ ಅದನ್ನು ವಾಹನ ಮಾಲೀಕರು ತಮ್ಮ ಮೂಲ ಕಚೇರಿಯಲ್ಲಿ ಮುಗಿಸಿಕೊಳ್ಳುವ ಅವಕಾಶ ನೀಡಬೇಕು

    ಪೋಲೀಸ್ ಇಲಾಖೆಯಲ್ಲಿರುವ ಬೇಡಿಕೆಗಳು

  • ನಗರದಲ್ಲಿ ಸರಕು ಸಾಗಾಣಿಕೆ ವಾಹನಗಳ ನಗರ ಪ್ರವೇಶಕ್ಕೆ ದಿನದ ಕೆಲವು ಸಮಯದಲ್ಲಿ ಮಾಡಿರುವ ನಿರ್ಬಂಧವನ್ನು ಕೈಬಿಡಬೇಕು
  • ಅಪಘಾತ ನಡೆದಾಗ ವಾಹನ ಚಾಲಕನ ಚಾಲನಾ ಪತ್ರವನ್ನು ವಶಪಡಿಸಿಕೊಳ್ಳುವುದನ್ನು ಬಿಡಬೇಕು
  • ಅಪಘಾತ ನಡೆದ ನಂತರ ವಶಪಡಿಸಿಕೊಂಡ ವಾಹನ ಮತ್ತು ಚಾಲಕನನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು
  • ಚಾಲಕನ ಚಾಲನಾ ಪರವಾನಿಗೆಯನ್ನು ಅಮಾನತ್ತಿನಲ್ಲಿಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಪತ್ರ ಬರೆಯುವುದನ್ನು ನಿಲ್ಲಿಸಬೇಕು
  • ಹೊರ ರಾಜ್ಯಗಳ ವಾಹನಗಳು ನಮ್ಮ ರಾಜ್ಯದಲ್ಲಿ ಅಪಘಾತಕ್ಕೆ ಈಡಾದಾಗ, ವಾಹನ ಮತ್ತು ಚಾಲಕನ ಬಿಡುಗಡೆಗೆ ಸ್ಥಳೀಯ ಭದ್ರತೆ ಮತ್ತು ಜಾಮೀನು ಕೇಳುವುದನ್ನು ನಿಲ್ಲಿಸಬೇಕು.
  • ಬ್ರೇಕ್ ಡೌನ್ ಆಗಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ರಸ್ತೆ ಬದಿಯಲ್ಲಿ ನಿಂತಿದ್ದರು ವಾಹನಗಳನ್ನು ವಶಪಡಿಸಿಕೊಂಡು ಕಲಂ 283 ರಡಿಯಲ್ಲಿ ಕೇಸು ದಾಖಲಿಸುವುದನ್ನು ನಿಲ್ಲಿಸಬೇಕು.
  • ವಾಹನದ ಡೀಸೆಲ್ ಮತ್ತು ಬಿಡಿ ಭಾಗಗಳು ಕಳ್ಳತನವಾದಾಗ ಮಾಲೀಕರು ಠಾಣೆಗೆ ದೂರು ನೀಡಿದಾಗ FIR ದಾಖಲಿಸಬೇಕು.

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್