ಬೆಂಗಳೂರು, ಜ.17: ಹಿಟ್ ಆ್ಯಂಡ್ ರನ್ ಕಾನೂನು(Hit and Run Case), ನಯಾ ರೂಲ್ಸ್ ಜಾರಿಗೆ ಮುಂದಾದ ಕೇಂದ್ರ ಸರ್ಕಾರದ (Central Government) ವಿರುದ್ಧ ಸಿಡಿದೆದ್ದಿರೋ ಲಾರಿ ಓನರ್ಸ್ ಅಸೋಸಿಯೇಷನ್(Lorry owners association) ಕಾನೂನು ರದ್ದತಿಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇಂದು ಮಧ್ಯರಾತ್ರಿಯಿಂದಲೇ ಲಾರಿ ಸಂಘಟನೆಗಳು ಮುಷ್ಕರ ಕೈಗೊಳ್ಳಲಿದ್ದಾರೆ. ಮುಷ್ಕರ ಹಿನ್ನೆಲೆ 2 ಲಕ್ಷ ಲಾರಿಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
ಕೇಂದ್ರದ ಹಿಟ್ ಆ್ಯಂಡ್ ರನ್ ಕಾನೂನು ವಿರೋಧಿಸಿ ಮತ್ತು ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಕ್ಷಿಣ ಭಾರತದ ಲಾರಿ ಮಾಲೀಕರ ಸಂಘಗಳು ಮುಷ್ಕರಕ್ಕೆ ಕರೆಕೊಟ್ಟಿವೆ. ಕರ್ನಾಟಕ ಲಾರಿ ಮಾಲೀಕರ ಸಂಘದಿಂದಲೂ ಮಷ್ಕರಕ್ಕೆ ಬೆಂಬಲ ಸಿಕ್ಕಿದೆ. ಇತ್ತ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟ್ ಸಂಘ ಮುಷ್ಕರಕ್ಕೆ ಬೆಂಬಲ ನೀಡಿಲ್ಲ. ಇನ್ನು ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಹಿಟ್ ಅ್ಯಂಡ್ ರನ್ ಪ್ರಕರಣಗಳಿಗೆ ಕಠಿಣ ಕಾನೂನುಗಳ ವಿರುದ್ಧ ಪ್ರತಿಭಟಿಸಲು ಮುಷ್ಕರಕ್ಕೆ ಕರೆ ನೀಡಲಾಗಿದೆ. ಹೊಸ ಕಾನೂನು ಪ್ರಕಾರ, ರಸ್ತೆಯಲ್ಲಿ ಚಲಿಸುವಾಗ ಲಾರಿಗಳಿಗೆ ಯಾರಾದರೂ ಬಂದು ಅಕಸ್ಮಾತಾಗಿ ಡಿಕ್ಕಿ ಹೊಡೆದರೆ, ಹಾಗೂ ನಮ್ಮ ಚಾಲಕರು ವಾಹನದಲ್ಲಿ ಏನಾದರೂ ತೊಂದರೆ ಉಂಟಾಗಿ ಎದುರಿನ ವಾಹನಕ್ಕೆ ಡಿಕ್ಕಿ ಹೊಡೆದು ಅದರಲ್ಲಿದ್ದ ಪ್ರಯಾಣಿಕರು ಮೃತಪಟ್ಟರೆ ಲಾರಿ ಚಾಲಕರಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂ.ವರೆಗೆ ದಂಡ ಪಾವತಿಸಬೇಕಾದ ಹಿನ್ನೆಲೆ, ಕಾನೂನು ಹಿಂಪಡೆಯುವಂತೆ ಆಗ್ರಹಿಸಿ ಮುಷ್ಕರ ಕೈಗೊಳ್ಳಲಾಗುತ್ತಿದೆ. ಅತ್ಯಗತ್ಯ ಸೇವೆಗಳನ್ನ ಹೊರತುಪಡಿಸಿ ಕೆಲ ಸೇವೆಗಳು ವಿಳಂಭವಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಜನವರಿ 16ರ ಮಧ್ಯರಾತ್ರಿಯಿಂದ ಬೆಂಗಳೂರಿನಲ್ಲಿ ಲಾರಿ ಮುಷ್ಕರ; ಏನಿರುತ್ತೆ, ಏನಿರಲ್ಲ?
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ