AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ‘ಲವ್ ಜಿಹಾದ್’ ಆರೋಪ: ಮದುವೆಗೆ ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಮನಬಂದಂತೆ ಹಲ್ಲೆ ಮಾಡಿದ ಜುಹೇಬ್

ಬೆಂಗಳೂರಿನ ಫ್ರೇಜರ್ ಟೌನ್‌ನಲ್ಲಿ ಲವ್ ಜಿಹಾದ್ ಆರೋಪದಡಿ ಮಾಡೆಲ್ ಒಬ್ಬರ ಮೇಲೆ ಜುಹೇಬ್ ಹಲ್ಲೆ ನಡೆಸಿದ್ದಾನೆ. ಮದುವೆಗೆ ನಿರಾಕರಿಸಿದ ಕಾರಣ ಈ ಕೃತ್ಯ ನಡೆದಿದೆ. ಆರೋಪಿ ಜುಹೇಬ್‌ಗೆ ಪೊಲೀಸರು ದೂರು ನೀಡಿದ ನಂತರ ಆತನನ್ನು ಬಂಧಿಸಲಾಗಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಇಂತಹ ಪ್ರಕರಣಗಳ ಬಗ್ಗೆ ಆತಂಕ ವ್ಯಕ್ತವಾಗಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಂಗಳೂರಿನಲ್ಲಿ 'ಲವ್ ಜಿಹಾದ್' ಆರೋಪ: ಮದುವೆಗೆ ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಮನಬಂದಂತೆ ಹಲ್ಲೆ ಮಾಡಿದ ಜುಹೇಬ್
ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on:Apr 16, 2026 | 9:26 AM

Share

ಬೆಂಗಳೂರು, ಏ,16: ರಾಜ್ಯದಲ್ಲಿ ಲವ್​​ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿದೆ. ಈಗಾಗಲೇ ಹಲವು ಕಡೆ ಲವ್​​​​​ ಜಿಹಾದ್​​​ ಕೃತ್ಯಕ್ಕೆ ಹಿಂದೂ ಹುಡುಗಿಯರು ಬಲಿಯಾಗಿರುವ ಘಟನೆಗಳು ಆಗ್ಗಾಗೆ ಬೆಳಕಿಗೆ ಬರುತ್ತಿದೆ. ಇತ್ತಿಚೆಗೆ ಹುಬ್ಬಳ್ಳಿಯಲ್ಲಿ ಜಿಮ್​​ ಟ್ರೈನರ್​​​​ ಹಿಂದೂ ಹುಡುಗಿಯ ವಿಡಿಯೋ ಮಾಡಿ ಮತಾಂತರ ಆಗುವಂತೆ ಒತ್ತಾಯ ಮಾಡಿದ್ದಾನೆ ಎಂಬೆಲ್ಲ ಆರೋಪಗಳು ಕೇಳಿ ಬಂದಿತ್ತು. ಇದೀಗ ಬೆಂಗಳೂರಿನಲ್ಲೂ ಲವ್​​ ಜಿಹಾದ್​​​ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಡೆಲ್​ ಹಾಗೂ ನಟಿಯೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು @KarnatakaPortfolio ಎಂಬ ಎಕ್ಸ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ರಾಜಧಾನಿಯ ಫ್ರೇಜರ್ ಟೌನ್‌ನಲ್ಲಿ ಈ ಪ್ರಕರಣ ನಡೆದಿದೆ ಎಂದು ಹೇಳಲಾಗಿದೆ.

ಮದುವೆಯಾಗುವಂತೆ ಒತ್ತಾಯಿಸಿ, ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಜುಹೇಬ್ ಎಂಬ ಯುವಕ ಮನಬಂದಂತೆ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಂತ್ರಸ್ತ ಯುವತಿ ವೃತ್ತಿಯಲ್ಲಿ ಮಾಡೆಲ್ ಮತ್ತು ನಟಿಯಾಗಿದ್ದು, ಮಾಡೆಲಿಂಗ್ ಇಂಡಸ್ಟ್ರಿಯಲ್ಲಿರುವ ಜುಹೇಬ್ ಎಂಬಾತನ ಪರಿಚಯವಾಗಿತ್ತು. ಆರಂಭದಲ್ಲಿ ಕೆಲಸದ ನಿಮಿತ್ತ ಭೇಟಿಯಾಗಿದ್ದ ಇವರು ನಂತರ ಸ್ನೇಹಿತರಾಗಿದ್ದರು.

ಇಲ್ಲಿದೆ ನೋಡಿ ವಿಡಿಯೋ:

2024 ರಿಂದ ಜುಹೇಬ್ ಯುವತಿಯ ಹಿಂದೆ ಬಿದ್ದಿದ್ದು, ತನ್ನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ. ಆದರೆ ಯುವತಿ ಆತನನ್ನು ನಿರಾಕರಿಸಿದ್ದರು. ಇದರಿಂದ ಆಕ್ರೋಶಗೊಂಡ ಆರೋಪಿಯು, “ನೀನು ನನ್ನನ್ನು ಮದುವೆಯಾಗದಿದ್ದರೆ ನಿನ್ನನ್ನು ಕೊಲೆ ಮಾಡುತ್ತೇನೆ” ಎಂದು ಬೆದರಿಕೆ ಹಾಕಲು ಪ್ರಾರಂಭಿಸಿದ್ದ. ಯುವತಿಯು ಫ್ರೇಜರ್ ಟೌನ್‌ನಲ್ಲಿದ್ದಾಗ ಆರೋಪಿಯು ಆಕೆಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ಯುವತಿಯ ಮುಖ ಮತ್ತು ತಲೆಯ ಹಿಂಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ವಿಡಿಯೋದಲ್ಲಿ ಯುವತಿ ತನ್ನ ಗಾಯಗಳನ್ನು ತೋರಿಸಿದ್ದಾರೆ.

ಇದನ್ನೂ ಓದಿ: ಅನ್ಯಕೋಮಿನ ಯುವಕನನ್ನ ಪ್ರೀತಿಸುತ್ತಿದ್ದ ಯುವತಿ ಆತ್ಮಹತ್ಯೆ, ಲವ್ ಜಿಹಾದ್ ಆರೋಪ

ಜುಹೇಬ್ ತನ್ನ ವಾಟ್ಸಾಪ್ ಸಂದೇಶಗಳಲ್ಲಿ “ನಾನು ಆಕೆಯನ್ನು ಸಾಯಿಸುತ್ತೇನೆ,” “ಯುವತಿ ಸಾಯಲೇಬೇಕು,” ಎಂದು ಹಸಿಬಿಸಿಯಾಗಿ ಸಂದೇಶ ಕಳುಹಿಸಿದ್ದಾನೆ. ಅಲ್ಲದೆ, “ನನಗೆ ಹುಡುಗಿಯರ ಕೊರತೆಯಿಲ್ಲ, ಹಣದ ಕೊರತೆಯಿಲ್ಲ” ಎಂದು ಅಹಂಕಾರ ಮಾತುಗಳನ್ನು ಆಡಿದ್ದಾನೆ ಎಂದು ಆರೋಪಿಸಲಾಗಿದೆ.ಸಂತ್ರಸ್ತ ಯುವತಿಯು ಧೈರ್ಯವಾಗಿ ಫ್ರೇಜರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಪೊಲೀಸರು ಆರೋಪಿ ಜುಹೇಬ್‌ನನ್ನು ಈಗಾಗಲೇ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:27 am, Thu, 16 April 26

Follow Us
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು
‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು
ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್
ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್
ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ
ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ
ಸಂಪುಟದಲ್ಲಿ ಸ್ತ್ರೀಯರಿಗೆ ಅವಕಾಶ ಕೊಡದ ಬಗ್ಗೆ ಜೆಡಿಎಸ್ ಆಕ್ರೋಶ
ಸಂಪುಟದಲ್ಲಿ ಸ್ತ್ರೀಯರಿಗೆ ಅವಕಾಶ ಕೊಡದ ಬಗ್ಗೆ ಜೆಡಿಎಸ್ ಆಕ್ರೋಶ
ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ
ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ