ಬೆಂಗಳೂರಿನಲ್ಲಿ ಲವ್ ಜಿಹಾದ್, ಅತ್ಯಾಚಾರ; ಪರಿಶೀಲಿಸುತ್ತಿರುವ ಬೆಳ್ಳಂದೂರು ಪೊಲೀಸರು

| Updated By: Rakesh Nayak Manchi

Updated on: Sep 07, 2023 | 12:53 PM

ಬೆಂಗಳೂರಿನಲ್ಲಿ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ತಾನು ಲವ್ ಜಿಹಾದ್​ಗೆ ಸಿಲುಕಿದ್ದು, ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ, ತಾನು ಅಪಾಯದಲ್ಲಿದ್ದೇನೆ ಎಂದು ಆರೋಪಿಸಿ ಯುವತಿಯೊಬ್ಬಳು ಟ್ವೀಟ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ ಟ್ಯಾಗ್ ಮಾಡಿ ನೆರವಿಗೆ ದಾವಿಸುವಂತೆ ಮನವಿ ಮಾಡಿದ್ದಾಳೆ.

ಬೆಂಗಳೂರಿನಲ್ಲಿ ಲವ್ ಜಿಹಾದ್, ಅತ್ಯಾಚಾರ; ಪರಿಶೀಲಿಸುತ್ತಿರುವ ಬೆಳ್ಳಂದೂರು ಪೊಲೀಸರು
ಲವ್ ಜಿಹಾದ್, ಅತ್ಯಾಚಾರ ಆರೋಪ ಸಂಬಂಧ ಬೆಂಗಳೂರಿನ ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲು
Follow us on

ಬೆಂಗಳೂರು, ಸೆ.7: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಲವ್ ಜಿಹಾದ್ (Love Jihad) ಆರೋಪ ಕೇಳಿಬಂದಿದೆ. ತಾನು ಲವ್ ಜಿಹಾದ್​ಗೆ ಸಿಲುಕಿದ್ದು, ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ, ತಾನು ಅಪಾಯದಲ್ಲಿದ್ದೇನೆ ಎಂದು ಆರೋಪಿಸಿ ಯುವತಿಯೊಬ್ಬಳು ಟ್ವೀಟ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರು ನಗರ ಪೊಲೀಸ್ ಹಾಗೂ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ ಟ್ಯಾಗ್ ಮಾಡಿ ನೆರವಿಗೆ ದಾವಿಸುವಂತೆ ಮನವಿ ಮಾಡಿದ್ದಾಳೆ.

ನಾನು ಲವ್ ಜಿಹಾದ್​ಗೆ ಒಳಗಾಗಿದ್ದೇನೆ, ನನ್ನ ಮೇಲೆ ಅತ್ಯಾಚಾರ ನಡೆದಿದೆ. ಬಲವಂತವಾಗಿ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ನಡೆದಿದೆ. ನಾನು ಅಪಾಯದಲ್ಲಿದ್ದೇನೆ. ತುರ್ತಾಗಿ ನನಗೆ ಬೆಂಗಳೂರು ಪೊಲೀಸರ ಸಹಾಯ ಬೇಕಿದೆ ಎಂದು ಯುವತಿ ಟ್ವೀಟ್ ಮಾಡಿದ್ದಾಳೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಬೆಂಗಳೂರು ಸಿಟಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: ರಾತ್ರಿ ಯಾವ್ದೋ ಆಟೋ ಸಿಕ್ತು ಎಂದು ಓಡಿ ಬಂದು ಹತ್ತಿದ ಮಹಿಳೆ, ಚಾಲಕ ಹಾಗೂ ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ

ಟ್ವೀಟ್​ನಲ್ಲಿ ಕೆಲ ವಿಚಾರಗಳನ್ನು ಸಹ ಉಲ್ಲೇಖಿಸಿರುವ ಯುವತಿ, ಫೇಸ್ ಬುಕ್ ಮೂಲಕ ಕಾಶ್ಮೀರ ಯುವಕನ ಪರಿಚಯವಾಗಿ ಇಬ್ಬರ ನಡುವೆ ಹಣಕಾಸಿನ ವ್ಯವಹಾರವೂ ನಡೆದಿತ್ತು. ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚನೆ ಎಸಗಿದ್ದಾನೆ. ಸದ್ಯ ಮದುವೆಯಾಗುವುದಿಲ್ಲ ಎಂದು ತನ್ನನ್ನು ನಿರ್ಲಕ್ಷ್ಯಿಸಿದ್ದಾನೆ ಎಂದು ಹೇಳಿದ್ದಾಳೆ.

ಅಷ್ಟೇ ಅಲ್ಲದೆ, ತನಗೆ ಪ್ರಾಣ ಬೆದರಿಕೆ ಹಾಕಿರುವ ಆರೋಪವೂ ಮಾಡಿದ್ದು, ಈ ಬಗ್ಗೆ ಬೆಂಗಳೂರು ಪೊಲೀಸರು ಜೊತೆಗೆ ಕಾಶ್ಮೀರ ಪೊಲೀಸರಿಗೂ ಟ್ವೀಟ್ ಮಾಡಿದ್ದಾಳೆ.

ಪರಿಶೀಲನೆಗೆ ಇಳಿದ ಬೆಳ್ಳಂದೂರು ಪೊಲೀಸರು

ಯುವತಿಯ ಟ್ವೀಟ್ ಗಮನಿಸಿದ ಪೊಲೀಸರು, ಸ್ಥಳೀಯರ ಪೊಲೀಸ್ ಠಾಣೆಗೆ ದೂರು ನೀಡುವಂತೆ ಸೂಚಿಸಿದ್ದಾರೆ. ಅಲ್ಲದೆ, ತಮ್ಮ ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದ ಆರೋಪವಾಗಿದ್ದರಿಂದ ಬೆಳ್ಳಂದೂರು ಠಾಣಾ ಪೊಲೀಸರು ಪರಿಶೀಲನೆಗೆ ಇಳಿದಿದ್ದಾರೆ. ಈ ಬಗ್ಗೆ ಮಾತನಾಡಿದ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರಮನ್ ಗುಪ್ತಾ, ಟ್ವಿಟ್ ಮೂಲಕ ಆರೋಪ ಮಾಡಿದ್ದಾರೆ. ಆದರೆ ಪೊಲೀಸರಿಗೆ ದೂರು ಕೊಟ್ಟಿಲ್ಲ. ಯುವತಿ ಬಂದು ದೂರು ಕೊಟ್ಟರೆ ಕ್ರಮ ತೆಗೆದುಕೊಳ್ಳುತ್ತೇವೆ. ನಮ್ಮ ಪೊಲೀಸ್ ಅಧಿಕಾರಿಗಳು ಯುವತಿಯನ್ನು ಸಂಪರ್ಕಿಸಿದ್ದಾರೆ. ದೂರು ನೀಡುವ ಬಗ್ಗೆ ಯೋಚನೆ ಮಾಡುತ್ತೇವೆ ಎಂದು ಹೇಳಿದ್ದಾಗಿ ತಿಳಿಸಿದ್ದಾರೆ.

ಯುವತಿ ಟೆಕ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ದೂರು ಕೊಟ್ಟರೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ. ಸದ್ಯಕ್ಕೆ ಬೆಂಗಳೂರಿನಲ್ಲಿ ಇದ್ದೇವೆ ಅಂತಾ ಹೇಳಿದ್ದಾರೆ. ಘಟನೆ ಬೆಂಗಳೂರಿನಲ್ಲೇ ನಡೆದಿದೆಯೇ? ಬೇರೆ ಕಡೆ ನಡೆದಿದೆಯೇ ಅಂತ ವಿಚಾರಿಸಬೇಕು. ಯುವತಿ ವಕೀಲರನ್ನು ಸಂಪರ್ಕಿಸಿ ದೂರು ನೀಡುವ ಬಗ್ಗೆ ಚರ್ಚಿಸಿದ್ದಾರೆ. ನಾವು ಎಲ್ಲಾ ರೀತಿ ಸಹಾಯ ಮಾಡಲು ಸಿದ್ದರಿದ್ದೇವೆ ಎಂದಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:22 pm, Thu, 7 September 23