AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಟೆಲ್‌ ಗ್ರಾಹಕರಿಗೆ ಮತ್ತೊಂದು ಶಾಕ್: ಇನ್ಮುಂದೆ ಊಟ-ತಿಂಡಿಗೆ ಹೆಚ್ಚು ಹೊತ್ತು ಕಾದು ಕುಳಿತುಕೊಳ್ಳುವುದು ಅನಿವಾರ್ಯ!

ಯುದ್ಧದ ಹಿನ್ನೆಲೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಅಭಾವ ಉಂಟಾಗಿದ್ದು, ಬೆಂಗಳೂರು ಸೇರಿ ಕರ್ನಾಟಕದ ಹೋಟೆಲ್‌ಗಳಲ್ಲಿ ಅಡುಗೆ ತಯಾರಿಕೆಗೆ ಸೌದೆ ಒಲೆ ಬಳಸಲಾಗುತ್ತಿದೆ. ಇದರಿಂದಾಗಿ ಸರ್ವೀಸ್ ಸಮಯದಲ್ಲಿ ವಿಳಂಬವಾಗುತ್ತಿದ್ದು, ಗ್ರಾಹಕರು ಊಟ-ತಿಂಡಿಗಾಗಿ ಕನಿಷ್ಠ 15 ರಿಂದ 20 ನಿಮಿಷ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಇದರೊಂದಿಗೆ, ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾದಂತಾಗಿದೆ.

ಹೋಟೆಲ್‌ ಗ್ರಾಹಕರಿಗೆ ಮತ್ತೊಂದು ಶಾಕ್: ಇನ್ಮುಂದೆ ಊಟ-ತಿಂಡಿಗೆ ಹೆಚ್ಚು ಹೊತ್ತು ಕಾದು ಕುಳಿತುಕೊಳ್ಳುವುದು ಅನಿವಾರ್ಯ!
ಸಾಂದರ್ಭಿಕ ಚಿತ್ರImage Credit source: tv9
ವಿನಯ್​ ಕಾಶಪ್ಪನವರ್​
| Edited By: |

Updated on:Apr 13, 2026 | 7:29 AM

Share

ಬೆಂಗಳೂರು, ಏಪ್ರಿಲ್ 13: ಹೋಟೆಲ್‌ಗೆ (Hotels) ಹೋದ ತಕ್ಷಣ ಬಿಸಿ ಬಿಸಿ ತಿಂಡಿ ಅಥವಾ ಊಟ ಸಿಗುತ್ತದೆ ಎಂಬ ಕಾಲ ಈಗ ಬದಲಾಗುತ್ತಿದೆ! ಇರಾನ್, ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮದಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಅಭಾವ ಎದುರಾಗಿದ್ದು, ಬೆಂಗಳೂರಿನ (Bengaluru) ಹೋಟೆಲ್‌ಗಳಲ್ಲಿ ಸರ್ವೀಸ್ ಸಮಯವನ್ನು ಹೆಚ್ಚಿಸಲಾಗಿದೆ. ಇನ್ಮುಂದೆ ನೀವು ಆರ್ಡರ್ ಮಾಡಿದ ತಿಂಡಿ ನಿಮ್ಮ ಕೈ ಸೇರಲು ಕನಿಷ್ಠ 15 ರಿಂದ 20 ನಿಮಿಷ ಕಾಯುವುದು ಅನಿವಾರ್ಯವಾಗಲಿದೆ.

ಸಿಲಿಂಡರ್ ಅಭಾವಕ್ಕೆ ಸೌದೆ ಒಲೆ ಪರ್ಯಾಯ

ಕೆಲ ದಿನಗಳ ಹಿಂದಷ್ಟೇ ಸಿಲಿಂಡರ್ ಬೆಲೆ ಏರಿಕೆಯಿಂದ ಹೋಟೆಲ್ ಊಟದ ದರ ಹೆಚ್ಚಳ ಮಾಡಲಾಗಿತ್ತು. ಈಗ ಬೆಲೆ ಹೆಚ್ಚಳದ ಜೊತೆಗೆ ಸಿಲಿಂಡರ್‌ಗಳ ಲಭ್ಯತೆಯೇ ಇಲ್ಲದಂತಾಗಿದೆ. ಈ ಅಭಾವವನ್ನು ನೀಗಿಸಲು ಹೋಟೆಲ್ ಮಾಲೀಕರು ಸೌದೆ ಒಲೆ ಹಾಗೂ ಎಲೆಕ್ಟ್ರಿಕ್ ಸ್ಟೌವ್‌ಗಳ ಮೊರೆ ಹೋಗುತ್ತಿದ್ದಾರೆ. ಎಲ್‌ಪಿಜಿ ಒಲೆಗಳಿಗೆ ಹೋಲಿಸಿದರೆ ಸೌದೆ ಅಥವಾ ಎಲೆಕ್ಟ್ರಿಕ್ ಸ್ಟೌವ್‌ಗಳಲ್ಲಿ ಅಡುಗೆ ತಯಾರಿಸಲು ಹೆಚ್ಚಿನ ಸಮಯ ತಗಲುತ್ತದೆ. ಇದೇ ಕಾರಣಕ್ಕೆ ಗ್ರಾಹಕರಿಗೆ ತಕ್ಷಣಕ್ಕೆ ಊಟ-ತಿಂಡಿ ನೀಡಲು ಹೋಟೆಲ್‌ಗಳು ಹೈರಾಣಾಗುತ್ತಿವೆ.

ಗ್ರಾಹಕರಿಗೆ ತಪ್ಪದ ಸಂಕಷ್ಟ

ತುರ್ತಾಗಿ ಕೆಲಸಕ್ಕೆ ಹೋಗುವವರು ಅಥವಾ ಹಸಿವಿನಿಂದ ಹೋಟೆಲ್‌ಗೆ ಬರುವವರು ಈಗ ಅನಿವಾರ್ಯವಾಗಿ ವೈಟಿಂಗ್ ರೂಮ್‌ನಲ್ಲಿ ಕಾಯಬೇಕಿದೆ. ಗಲ್ಫ್ ರಾಷ್ಟ್ರಗಳ ಯುದ್ಧ ತಂದೊಡ್ಡಿರುವ ಈ ಅನಿಶ್ಚಿತತೆ ಹೋಟೆಲ್ ಉದ್ಯಮವನ್ನೇ ಅಸ್ತವ್ಯಸ್ತಗೊಳಿಸಿದೆ. ‘ಹೆಚ್ಚು ಹಣ ಕೊಟ್ಟರೂ ಊಟಕ್ಕಾಗಿ ಕಾಯಬೇಕಾದ ಪರಿಸ್ಥಿತಿ ಬಂದಿದೆ’ ಎಂದು ಗ್ರಾಹಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಿನಲ್ಲಿ, ಯುದ್ಧದ ಪರಿಣಾಮ ಸಾಮಾನ್ಯ ಜನರ ತಟ್ಟೆಯವರೆಗೂ ತಲುಪಿದೆ.

ಇದನ್ನೂ ಓದಿ: Karnataka LPG Crisis: ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:28 am, Mon, 13 April 26

Follow Us
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್