AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಪಕ್ಷಕ್ಕೆ ಬೆಂಬಲ ಘೋಷಿಸಿದ ಮಾಜಿ ಸಂಸದ ಎಲ್​ಆರ್ ಶಿವರಾಮೇಗೌಡ, ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ

ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿದ್ದ ಮಾಜಿ ಸಂಸದ ಎಲ್​ಆರ್ ಶಿವರಾಮೇಗೌಡ ಅವರು ಬಿಜೆಪಿ ಪಕ್ಷಕ್ಕೆ ಬೆಂಬಲ ಘೋಷಿಸಿದ್ದಾರೆ. ಹಾಗೂ ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ.

ಬಿಜೆಪಿ ಪಕ್ಷಕ್ಕೆ ಬೆಂಬಲ ಘೋಷಿಸಿದ ಮಾಜಿ ಸಂಸದ ಎಲ್​ಆರ್ ಶಿವರಾಮೇಗೌಡ, ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ
ಎಲ್.ಆರ್.ಶಿವರಾಮೇಗೌಡ
TV9 Web
| Updated By: ಆಯೇಷಾ ಬಾನು|

Updated on: Mar 19, 2023 | 3:03 PM

Share

ಬೆಂಗಳೂರು: ಸಂಸದೆ ಸುಮಲತಾ(Sumlatha Ambareesh) ಬಿಜೆಪಿಗೆ ಬೆಂಬಲ ಘೋಷಣೆ ಬೆನ್ನಲ್ಲೇ ಮಾಜಿ ಸಂಸದ ಎಲ್​ಆರ್ ಶಿವರಾಮೇಗೌಡ(LR Shivarame Gowda) ಅವರು ಬಿಜೆಪಿ ಪಕ್ಷಕ್ಕೆ(BJP Karnataka)  ಬೆಂಬಲ ಘೋಷಿಸಿದ್ದಾರೆ. ಬೆಂಗಳೂರಿನ ನಾಗಮಂಗಲ ನಿವಾಸಿಗಳ ಸಮಾವೇಶದಲ್ಲಿ ಸಚಿವ ಮುನಿರತ್ನ(Munirathna) ಸಮ್ಮುಖದಲ್ಲಿ ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಶೀಘ್ರದಲ್ಲೇ ಅಧಿಕೃತವಾಗಿ ಶಿವರಾಮೇಗೌಡ ಬಿಜೆಪಿ ಸೇರ್ಪಡೆ ಆಗಲಿದ್ದಾರೆ.

ಇನ್ನು ಇದೇ ವೇಳೆ ಮಾತನಾಡಿದ ಮಾಜಿ ಸಂಸದ ಶಿವರಾಮೇಗೌಡ, ನಾಗಮಂಗಲ ಬಿಜೆಪಿಯಿಂದ ದೂರ ಉಳಿದಿತ್ತು. ನಾಗಮಂಗಲಕ್ಕೆ ಬಿಜೆಪಿ ಅತ್ಯಗತ್ಯವಾಗಿ ಬೇಕು. ಬಿಜೆಪಿ ಪಕ್ಷ ಈ ರಾಜ್ಯಕ್ಕೆ, ರಾಷ್ಟ್ರಕ್ಕೆ ಬೇಕು. ಬಿಎಸ್​ ಯಡಿಯೂರಪ್ಪ ಸಿಎಂ ಇದ್ದಾಗ ನನಗೆ ಲೋಕಸಭೆಗೆ ಬಿ ಫಾರಂ ಕೊಟ್ಟಿದ್ದರು. 1.67 ಮತ ಪಡೆದು ಆಗ ನಾನು ಸೋತೆ. ಬಳಿಕ ‌ನಾನು ಜೆಡಿಎಸ್​ಗೆ ಬಂದೆ ಜೆಡಿಎಸ್ ನಲ್ಲಿ ನನ್ನನ್ನು ಬಳಸಿಕೊಂಡರು. ಹೆಚ್​ಡಿ ದೇವೇಗೌಡರು, ಹೆಚ್​ಡಿ ಕುಮಾರಸ್ವಾಮಿ ಅವರು ನನ್ನನ್ನು ಬಳಸಿಕೊಂಡರು ಎಂದು ಶಿವರಾಮೇಗೌಡ ಅಸಮಾಧಾನ ಹೊರ ಹಾಕಿದ್ದಾರೆ.

ಇದನ್ನೂ ಓದಿ: ನೆಲಮಂಗಲ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಕ್ಕೆ ಮನೆಯ ಕಾಂಪೌಂಡ್ ಧ್ವಂಸ ಮಾಡಿಸಿದ ಬಿಜೆಪಿ ಮುಖಂಡ

ಈ ದೇಶವನ್ನು ಕಳಂಕರಹಿತವಾಗಿ ಮೋದಿಯವರು ಆಳ್ತಿದಾರೆ. ಮಂಡ್ಯದಲ್ಲಿ ಬಿಜೆಪಿ ಬೇರೂರಬೇಕು. ಮಂಡ್ಯದಲ್ಲಿ ಕಮಲ ಅರಳಿಸಬೇಕು. ನನ್ನನ್ನೂ ಬಿಜೆಪಿಯಿಂದ ಆಹ್ವಾನಿಸಲಾಗಿದೆ. ಸುಮಲತಾ ಅವರೂ ಬಿಜೆಪಿಗೆ ಬೆಂಬಲ ಕೊಟ್ಟಿದ್ದಾರೆ. ಮಂಡ್ಯದಲ್ಲಿ ನಾಗಮಂಗಲ ಸೇರಿ ಏಳೂ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸ್ತೇವೆ. ಮುನಿರತ್ನ ಸೋಲಿಲ್ಲದ ಸರದಾರ. ಮುಂದಿನ 20 ವರ್ಷ ಮುನಿರತ್ನರನ್ನು ಸೋಲಿಸೋ ಗಂಡು ಹುಟ್ಟಲ್ಲ. ನಾನು ಸಿದ್ದರಾಮಯ್ಯ, ಕುಮಾರಸ್ವಾಮಿ ಆಳ್ವಿಕೆ ನೋಡಿದವನು. ನಾಗಮಂಗಲದ ಜನರ ಮತ ಕೇಳುವ ಹಕ್ಕು ಚೆಲುವರಾಯಸ್ವಾಮಿ, ಸುರೇಶ್ ಗೌಡರಿಗೆ ಇಲ್ಲ. ನಾನು ಬಿಜೆಪಿ ಸೇರುತ್ತೇನೆ ಎಂದು ಶಿವರಾಮೇಗೌಡ ಘೋಷಿಸಿದರು.

ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ಮಾಜಿ ಸಂಸದ ಜಿ.ಮಾದೇಗೌಡ ಅವರ ಬಗ್ಗೆ ಲಘುವಾಗಿ ಮಾತನಾಡಿ ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿದ್ದರು. ಉಚ್ಚಾಟನೆಗೊಂಡ ಒಂದು ವರ್ಷದ ಬಳಿಕ ಬಿಜೆಪಿ ಪಕ್ಷಕ್ಕೆ ಬೆಂಬಲ ಘೋಷಿಸಿ ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್