Lumpy Skin Disease: ಕರ್ನಾಟಕದಲ್ಲಿಯೂ ಚರ್ಮಗಂಟು ರೋಗ ಉಲ್ಬಣ, ಹಾವೇರಿಯಲ್ಲಿ ಒಂದೇ ದಿನ ನೂರಾರು ರಾಸುಗಳ ಸಾವು

Karnataka Legislative Assembly: ಕರ್ನಾಟಕದಲ್ಲಿ ಚರ್ಮಗಂಟು ರೋಗವು ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿದ್ದು ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ ಎಂದು ವಿಧಾನಸಭೆಯಲ್ಲಿ ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ರುದ್ರಪ್ಪ ಬಳ್ಳಾರಿ ಆಗ್ರಹಿಸಿದರು.

Lumpy Skin Disease: ಕರ್ನಾಟಕದಲ್ಲಿಯೂ ಚರ್ಮಗಂಟು ರೋಗ ಉಲ್ಬಣ, ಹಾವೇರಿಯಲ್ಲಿ ಒಂದೇ ದಿನ ನೂರಾರು ರಾಸುಗಳ ಸಾವು
ಚರ್ಮಗಂಟು ರೋಗ (ಸಾಂದರ್ಭಿಕ ಚಿತ್ರ)Image Credit source: PTI
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 22, 2022 | 2:00 PM

ಬೆಂಗಳೂರು: ಪಶ್ಚಿಮ ಭಾರತದ ರಾಜಸ್ಥಾನ, ಗುಜರಾತ್, ಪಂಜಾಬ್, ಹರಿಯಾಣ ರಾಜ್ಯಗಳ ಪಶುಪಾಲಕರನ್ನು ಇನ್ನಿಲ್ಲದಂತೆ ಕಾಡುತ್ತಿರುವ ಮಾರಣಾಂತಿಕ ಚರ್ಮಗಂಟು ರೋಗ (Lumpy Skin Disease) ಇದೀಗ ಕರ್ನಾಟಕಕ್ಕೂ ಕಾಲಿಟ್ಟಿದೆ. ವಿಧಾನಸಭೆಯಲ್ಲಿ ಈ ಗಂಭೀರ ವಿಷಯವನ್ನು ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ರುದ್ರಪ್ಪ ಬಳ್ಳಾರಿ ಪ್ರಸ್ತಾಪಿಸಿದರು. ಹಾವೇರಿ, ಶಿಗ್ಗಾಂವಿ ಮತ್ತು ಬ್ಯಾಡಗಿ ತಾಲ್ಲೂಕಿಗಳಲ್ಲಿ ರೋಗವು ವ್ಯಾಪಿಸಿದೆ. ಈವರೆಗೆ 143 ಜಾನುವಾರುಗಳು ಸತ್ತಿವೆ. ರೋಗವು ಕ್ಷಿಪ್ರಗತಿಯಲ್ಲಿ ವ್ಯಾಪ್ತಿಸುತ್ತಿದ್ದು ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ ಎಂದು ಗಮನ ಸೆಳೆದರು.

ದೇಶದಲ್ಲಿ ಲಕ್ಷಾಂತರ ಜಾನುವಾರುಗಳು ಮೃತಪಟ್ಟಿವೆ. ಮೂರು ವರ್ಷಗಳ ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡು ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಜಾನುವಾರುಗಳು ಪ್ರವಾಹದಲ್ಲಿ ಕೊಚ್ಚಿಹೋದರೆ, ಗೋಡೆ ಕುಸಿದು ಸತ್ತರೆ ಮಾತ್ರ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಲ್ಲಿ ಪರಿಹಾರ ಕೊಡುತ್ತಾರೆ. ಆದರೆ ರೋಗದಿಂದ ಮೃತಪಟ್ಟರೆ ಪರಿಹಾರ ಕೊಡುತ್ತಿಲ್ಲ. ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪುವ ಜಾನುವಾರುಗಳಿಗೂ ಪರಿಹಾರ ಕೊಟ್ಟು ರೈತರನ್ನು ಕಾಪಾಡಬೇಕು ಎಂದು ಅವರು ಆಗ್ರಹಿಸಿದರು.

ಜೋಡೆತ್ತು ಒಂದೂವರೆ ಲಕ್ಷ ಬೆಲೆ ಬಾಳುತ್ತೆ. ಎಮ್ಮೆ-ಆಕಳುಗಳು 50 ಸಾವಿರಕ್ಕೂ ಹೆಚ್ಚು ಬೆಲೆ ಬಾಳುತ್ತವೆ. ರಾಸುಗಳನ್ನು ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ. ಜಾನುವಾರುಗಳನ್ನು ಕಳೆದುಕೊಂಡು ಕಷ್ಟ ಅನುಭವಿಸುವ ರೈತರಿಗೆ ಪರಿಹಾರ ಒದಗಿಸಬೇಕು ಎಂದು ಅವರು ವಿನಂತಿಸಿದರು.

ಶಾಸಕರ ವಿನಂತಿಗೆ ಉತ್ತರಿಸಿದ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಈ ರೋಗ ಕಾಣಿಸಿಕೊಂಡಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ವಿಸ್ತೃತ ಚರ್ಚೆ ನಡೆಸಿದ್ದೇನೆ. ಲಸಿಕೆ ಅಭಿಯಾನ ನಡೆಸುತ್ತೇವೆ. ಎನ್​ಡಿಆರ್​ಎಫ್ ಮಾರ್ಗದರ್ಶಿ ಸೂತ್ರಗಳ ಬಗ್ಗೆಯೂ ಚರ್ಚೆ ನಡೆಸುತ್ತೇವೆ. ಸೂಕ್ತ ಪರಿಹಾರ ಒದಗಿಸಲು ಗಮನ ಕೊಡುತ್ತೇವೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ‘ಕಾಯಿಲೆಯ ಬಗ್ಗೆ ಸಮಸ್ಯೆಯ ವಿವರ ತರಿಸಿಕೊಂಡು ಪರಿಶೀಲಿಸುತ್ತೇನೆ. ರೋಗಪೀಡಿತ ರಾಸುಗಳಿಗೆ ಚಿಕಿತ್ಸೆ ಮತ್ತು ಮೃತ ರಾಸುಗಳಿಗೆ ತಕ್ಕಷ್ಟು ಪರಿಹಾರ ಒದಗಿಸಲು ಕ್ರಮ ಜರುಗಿಸುತ್ತೇನೆ’ ಎಂದು ಭರವಸೆ ನೀಡಿದರು.

ಇದನ್ನೂ ಓದಿ: Lumpy Skin Disease in Cows ಜಾನುವಾರುಗಳ ಕಾಡುವ ಚರ್ಮಗಂಟು ರೋಗ ತಡೆಗಟ್ಟಲು ಈ ಮಾರ್ಗಗಳನ್ನು ಅನುಸರಿಸಿ

ಇದನ್ನೂ ಓದಿ: Lumpy Virus: ಮಹಾರಾಷ್ಟ್ರದಲ್ಲಿ ಹೆಚ್ಚಿದ ಲಂಪಿ ವೈರಸ್ ರೋಗ; 25 ಜಿಲ್ಲೆಗಳಲ್ಲಿ 126 ಹಸುಗಳು ಸಾವು

Published On - 2:00 pm, Thu, 22 September 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್