ಕೋರಮಂಗಲದಲ್ಲಿ ಐಷಾರಾಮಿ ಕಾರು ಅಪಘಾತ; ಬೇರೆ ಬೇರೆ ರಾಜ್ಯಗಳಿಂದ ಬಂದು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದ ಸ್ನೇಹಿತರು
ಸದ್ಯ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿರುವ 7 ಜನರ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು ಮರಣೋತ್ತರ ಪರೀಕ್ಷೆ ಬಳಿಕ ಮದ್ಯ ಸೇವನೆ ಮಾಹಿತಿ ಲಭ್ಯವಾಗಲಿದೆ. ಮೃತರಲ್ಲಿ ಕೆಲವರು ಕೋರಮಂಗಲದ ಜೋಲೋ ಸ್ಟೇ ಪಿಜಿಯಲ್ಲಿ ವಾಸವಿದ್ರು. ಈ ಸಂಬಂಧ ಆಡುಗೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಬೆಂಗಳೂರು: ನಗರದ ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಬಳಿ ತಡರಾತ್ರಿ ಭೀಕರ ಅಪಘಾತವೊಂದು ಸಂಭವಿಸಿದೆ. ತಡರಾತ್ರಿ 1.45ರಿಂದ 2 ಗಂಟೆ ಸುಮಾರಿಗೆ ಐಷಾರಾಮಿ ಕಾರು ಅಪಘಾತವಾಗಿ ಮೂವರು ಮಹಿಳೆಯರು ನಾಲ್ಕು ಪುರುಷರು ಸೇರಿ 7 ಜನರ ಮೃತಪಟ್ಟಿದ್ದಾರೆ.
ಅಪಘಾತಕ್ಕೆ ತುತ್ತಾದ ಕಾರಿಗೆ ಫ್ಯಾನ್ಸಿ ನಂಬರ್ ಇತ್ತು ಫುಟ್‌ಪಾತ್ ಹತ್ತಿ ಡಿವೈಡರ್‌ಗೆ ಗುದ್ದಿರುವ ಐಷಾರಾಮಿ ಕಾರು ಬಳಿಕ ಪಕ್ಕದ ಕಟ್ಟಡದ ಗೋಡೆಗೆ ಡಿಕ್ಕಿಯಾಗಿದೆ. ಅಪಘಾತಕ್ಕೆ ತುತ್ತಾದ ಕಾರಿಗೆ ಫ್ಯಾನ್ಸಿ ನಂಬರ್ ಇತ್ತು. ಅದು KA 03 MY 6666. ಈ ನಂಬರಿನ ಐಷಾರಾಮಿ ಕಾರು ಅಪಘಾತದ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನ ಮುಂದಿನ ಸೀಟ್ ತುಂಬಾ ರಕ್ತದ ಕಲೆಗಳಿದ್ದು ಕಾರಿನ ಎಡಭಾಗದ 2 ಟೈರ್ ಸಂಪೂರ್ಣ ಪೀಸ್‌ಪೀಸ್ ಆಗಿದೆ. ಐಷಾರಾಮಿ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರು ಆಸ್ಪತ್ರೆಗೆ ದಾಖಲಿಸಿದ ವೇಳೆ ಮೃತಪಟ್ಟಿದ್ದಾರೆ. ಕಾರಿನ ಮುಂದಿನ ಸೀಟ್‌ನಲ್ಲಿ ಮೂವರು ಕುಳಿತಿದ್ದು ಹಿಂಬದಿ ಸೀಟ್‌ನಲ್ಲಿ ನಾಲ್ವರು ಕುಳಿತಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಮೃತರೆಲ್ಲರೂ ಸ್ನೇಹಿತರಾಗಿದ್ದು, 20ರಿಂದ 30 ವರ್ಷದವರಾಗಿದ್ದಾರೆ. ಹೊಸೂರು ಮೂಲದ ಕರುಣಾಸಾಗರ್, ಪತ್ನಿ ಬಿಂದು(28), ಕೇರಳ ಮೂಲದ ಅಕ್ಷಯ್ ಗೋಯಲ್, ಇಶಿತಾ(21), ಧನುಷಾ(21), ಹುಬ್ಬಳ್ಳಿಯ ರೋಹಿತ್, ಹರಿಯಾಣ ಮೂಲದ ಉತ್ಸವ್ ಮೃತ ದುರ್ದೈವಿಗಳು.
ಸದ್ಯ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿರುವ 7 ಜನರ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು ಮರಣೋತ್ತರ ಪರೀಕ್ಷೆ ಬಳಿಕ ಮದ್ಯ ಸೇವನೆ ಮಾಹಿತಿ ಲಭ್ಯವಾಗಲಿದೆ. ಮೃತರಲ್ಲಿ ಕೆಲವರು ಕೋರಮಂಗಲದ ಜೋಲೋ ಸ್ಟೇ ಪಿಜಿಯಲ್ಲಿ ವಾಸವಿದ್ರು. ಈ ಸಂಬಂಧ ಆಡುಗೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಕಾರಿನಲ್ಲಿದ್ದ ಏರ್‌ಬ್ಯಾಗ್ ಸಹ ಓಪನ್ ಆಗಿಲ್ಲ ಕೋರಮಂಗಲದಲ್ಲಿ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಮಾಹಿತಿ ನೀಡಿದ ಸಂಚಾರ ವಿಭಾಗದ ಜಂಟಿ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ, ಕಾರಿನಲ್ಲಿದ್ದ 7 ಜನರಲ್ಲಿ ಯಾರೂ ಸೀಟ್ ಬೆಲ್ಟ್ ಹಾಕಿರಲಿಲ್ಲ. ಇದರಿಂದ ಕಾರಿನಲ್ಲಿದ್ದ ಏರ್‌ಬ್ಯಾಗ್ ಸಹ ಓಪನ್ ಆಗಿಲ್ಲ. ಮೃತರೆಲ್ಲರೂ 25ರಿಂದ 30 ವರ್ಷ ವಯಸ್ಸಿನವರು. ಓರ್ವ ದಂಪತಿ ಸಹ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ. ಬೆಂಗಳೂರಲ್ಲಿ ಕೆಲಸ ಮಾಡಿಕೊಂಡು ಕೆಲವರು ಪಿಜಿಯಲ್ಲಿದ್ದರು ಎಂದು ತಿಳಿಸಿದ್ದಾರೆ.
ಮೃತ ರೋಹಿತ್ ಲದ್ವಾ BYJU’S ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕೋರಮಂಗಲದಲ್ಲಿ ಭೀಕರ ಅಪಘಾತದಲ್ಲಿ ಮೃತಪಟ್ಟ ರೋಹಿತ್ ಲದ್ವಾ BYJU’S ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಅಪಘಾತದ ಬಗ್ಗೆ ರಾತ್ರಿ ಪೊಲೀಸರಿಂದ ಮಾಹಿತಿ ತಿಳಿಯಿತು ಎಂದು ಟಿವಿ9ಗೆ ಮೃತ ರೋಹಿತ್ ಲದ್ವಾ ಸಂಬಂಧಿ ತಿಳಿಸಿದ್ದಾರೆ. ರೋಹಿತ್ ಲದ್ವಾ ತಂದೆ, ತಾಯಿ ಮೃತಪಟ್ಟಿದ್ದಾರೆ. ರೋಹಿತ್ ಬೆಂಗಳೂರಿನ ಪಿಜಿಯಲ್ಲಿದ್ದು ಕೆಲಸಕ್ಕೆ ಹೋಗುತ್ತಿದ್ದ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಐಷಾರಾಮಿ ಆಡಿ ಕ್ಯೂ ಕಾರು ಭೀಕರ ಅಪಘಾತ; ಕಾರಿನಲ್ಲಿದ್ದ 7 ಮಂದಿ ದುರ್ಮರಣ
Published On - 7:19 am, Tue, 31 August 21