AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾಯುಕ್ತ ಕೇಸ್ ನಡುವೆಯೂ ಕೋರ್ಟ್‌ ಮೊರೆ ಹೋದ ಮಾಡಾಳ್ ವಿರೂಪಾಕ್ಷಪ್ಪ, ಪುತ್ರ ಪ್ರಶಾಂತ್‌

ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಹಾಗೂ ಪುತ್ರ ಪ್ರಶಾಂತ್ ಲೋಕಾಯುಕ್ತ ಕೇಸ್ ನಡುವೆಯೂ ಸಿವಿಲ್ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಲೋಕಾಯುಕ್ತ ಕೇಸ್ ನಡುವೆಯೂ ಕೋರ್ಟ್‌ ಮೊರೆ ಹೋದ ಮಾಡಾಳ್ ವಿರೂಪಾಕ್ಷಪ್ಪ, ಪುತ್ರ ಪ್ರಶಾಂತ್‌
ಮಾಡಾಳ್ ವಿರೂಪಾಕ್ಷಪ್ಪ, ಪ್ರಶಾಂತ್‌Image Credit source: coastaldigest.com
ಗಂಗಾಧರ​ ಬ. ಸಾಬೋಜಿ
|

Updated on:Mar 04, 2023 | 6:22 PM

Share

ಬೆಂಗಳೂರು: ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ (Madalu Veerupakshappa) ಹಾಗೂ ಪುತ್ರ ಪ್ರಶಾಂತ್ ಮನೆಯಲ್ಲಿ ಕೋಟಿ ಕೋಟಿ ಹಣವನ್ನು ಲೋಕಾಯುಕ್ತ (Lokayukta) ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಸದ್ಯ ಲೋಕಾಯುಕ್ತ ಕೇಸ್ ನಡುವೆಯೂ ಮಾಡಾಳ್‌ ವಿರೂಪಾಕ್ಷಪ್ಪ ಮತ್ತು ಪುತ್ರ ಪ್ರಶಾಂತ್‌ನಿಂದ ಸಿವಿಲ್ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಜೊತೆಗೆ ಮಾಧ್ಯಮಗಳ ವಿರುದ್ಧ ಮಾನಹಾನಿಕರ ಸುದ್ದಿ ಬಿತ್ತರಿಸದಂತೆ ನಿರ್ಬಂಧ ಹೇರುವಂತೆ ಮನವಿ ಮಾಡಿದ್ದಾರೆ. ಬೆಂಗಳೂರಿನ ಸಿವಿಲ್ ಕೋರ್ಟ್ ವಿಚಾರಣೆಯನ್ನು ಮಾ.6ಕ್ಕೆ ಮುಂದೂಡಿದೆ. ಲಂಚ ಸ್ವೀಕಾರ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಶಾಸಕ ಮಾಡಾಳ್ ವಿರೂಪಾಕ್ಷ ಸೇರಿದಂತೆ ಮತ್ತಿತರರ ವಿರುದ್ಧ ಎಫ್​ಐಆರ್ (FIR) ದಾಖಲಿಸಿದ್ದಾರೆ. ಶ್ರೇಯಸ್ ಕಶ್ಯಪ್​ ನೀಡಿದ್ದ ದೂರಿನ ಅನ್ವಯ ದಾಖಲಾದ ಎಫ್​ಐಆರ್​ನಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಎ1 (ಮೊದಲ ಆರೋಪಿ) ಆಗಿದ್ದು, ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಎ2 (2ನೇ ಆರೋಪಿ), ಕೆಎಸ್​ಡಿಎಲ್​ ಅಕೌಂಟೆಂಟ್​ ಸುರೇಂದ್ರ ಎ3, ಮಾಡಾಳ್​ ಪ್ರಶಾಂತ್ ಸಂಬಂಧಿ ಸಿದ್ದೇಶ್ ಎ4, ಅರೋಮಾ ಕಂಪನಿ ಸಿಬ್ಬಂದಿ ಆಲ್ಬರ್ಟ್ ನಿಕೋಲಾ ಎ5, ಅರೋಮಾ ಕಂಪನಿ ಸಿಬ್ಬಂದಿ ಗಂಗಾಧರ ಎ6 ಆಗಿದ್ದಾನೆ. ಆಧಾರಿಸಿ ಈ ಎಫ್​ಐಆರ್ ದಾಖಲಿಸಲಾಗಿದೆ.

ಮಾಡಾಳ್​​ ನಿವಾಸದಲ್ಲಿ ಸಿಕ್ಕಿತು ಕೆಜಿಗಟ್ಟಲೆ ಆಭರಣ, ಲಕ್ಷ ಲಕ್ಷ ನಗದು

ಮಾಡಾಳ್ ನಿವಾಸದಲ್ಲಿ ಲೋಕಾಯುಕ್ತ ಪೊಲೀಸರ ದಾಳಿ ನಿನ್ನೆ (ಮಾ.3) ಮುಕ್ತಾಯವಾಗಿದ್ದು, ಶಾಸಕರ ಮನೆಯಲ್ಲಿ ಬರೋಬ್ಬರಿ 2,800 ಗ್ರಾಂ ಚಿನ್ನಾಭರಣ, 20 ಕೆ.ಜಿ ಬೆಳ್ಳಿ ಆಭರಣಗಳು, 16.5 ಲಕ್ಷ ರೂಪಾಯಿ ನಗದು ಹಾಗೂ ಅಪಾರ ಪ್ರಮಾಣದ ಆಸ್ತಿ ದಾಖಲೆಗಳು ಪತ್ತೆಯಾಗಿವೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ಚನ್ನೇಶಪುರ ಗ್ರಾಮದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದಲ್ಲಿ ಲೋಕಾಯುಕ್ತ ಪೊಲೀಸರು ಸತತ 10 ಗಂಟೆ ಕಾಲ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: KSDL: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ 800 ಕೋಟಿ ಅವ್ಯವಹಾರ ಆರೋಪ

ನಗದು, ಚಿನ್ನ, ಬೆಳ್ಳಿ, ಆಸ್ತಿ ಪತ್ರಗಳ ಪಟ್ಟಿ ಮಾಡಿ ಶಾಸಕ ಮಾಡಾಳ್ ಪತ್ನಿ ಲೀಲಾವತಿಯವರಿಂದ ಅಧಿಕಾರಿಗಳು ಸಹಿ ಪಡೆದಿದ್ದಾರೆ. ಇದಕ್ಕೂ ಮೊದಲು ಚನ್ನಗಿರಿ ತಾಲೂಕಿ‌ನ ಮಾವಿನಹೊಳೆಯಲ್ಲಿನ ಮಾಡಾಳ್ ಕುಟುಂಬದ ಕ್ರಶರ್ ಕಚೇರಿ ಹಾಗೂ ಮಾವಿನಕಟ್ಟಿ ಬಳಿಯ ಮಾಡಾಳ್ ಕುಟುಂಬದ ತೋಟದ ಮತ್ತು ಖೇಣಿ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿದ್ದರು.

ಇದನ್ನೂ ಓದಿ: Lokayukta Raid: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಬಗೆದಷ್ಟು ಹಣದ ಕಂತೆಗಳು!

ಕಚ್ಚಾ ಸಾಮಾಗ್ರಿ ಖರೀದಿಸಿದ ಆರೋಪ

ಕೆಎಸ್​ಡಿಎಲ್ ನಿಯಮ ಗಾಳಿಗೆ ತೂರಿ 800 ಕೋಟಿ ರೂಪಾಯಿಗೂ ಅಧಿಕ ವೆಚ್ಚದ ಕಚ್ಚಾ ಸಾಮಾಗ್ರಿಗಳನ್ನು ಖರೀದಿಸಿದ ಆರೋಪ ಸಂಬಂಧ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ KSDL ನೌಕರರ ಒಕ್ಕೂಟವು ಫೆಬ್ರವರಿ 21ರಂದೇ ಲೋಕಾಯುಕ್ತ ಕಚೇರಿಗೆ ದೂರು ನೀಡಿದೆ. ಟೆಂಡರ್​ದಾರರು ಸಾಮಾಗ್ರಿ ದರ ಶೇಕಡಾ 2ರಿಂದ 3ರಷ್ಟು ಹೆಚ್ಚಳಕ್ಕೆ ಅವಕಾಶವಿದೆ, ಆದರೆ ಕಚ್ಚಾ ಸಾಮಗ್ರಿ ದರ ಶೇ.70, 83, 140ರಷ್ಟು ಹೆಚ್ಚಿಸಿದ್ದರು. ಹೀಗಿದ್ದರೂ ಕಚ್ಚಾ ಸಾಮಗ್ರಿ ದರ ಹೆಚ್ಚಳದ ಬಗ್ಗೆ ನೆಗೋಸಿಯೇಷನ್​ ಕಮಿಟಿ, ಫೈನಾನ್ಸ್ ಕಮಿಟಿ ಕ್ರಮ ವಹಿಸಿಲ್ಲವೆಂದು ಲೋಕಾಯುಕ್ತರಿಗೆ ದೂರು ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:22 pm, Sat, 4 March 23

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!