ಲುಲು ಮಾಲ್​ನಲ್ಲಿ ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿದ್ದ ವ್ಯಕ್ತಿಯ ಗುರುತು ಪತ್ತೆ

ಬೆಂಗಳೂರಿನ ಲುಲು ಮಾಲ್​​ನಲ್ಲಿ ಯುವತಿ ಜೊತೆ ಅಸಭ್ಯವಾಗಿ ವರ್ತನೆ ಮಾಡಿದ ವಿಡಿಯೋ ವೈರಲ್ ಆಗಿದ್ದು, ಇದೀಗ ವಿಡಿಯೋ ಆಧರಿಸಿ ಪೊಲೀಸರು ಆ ವ್ಯಕ್ತಿಯ ಗುರುತು ಪತ್ತೆ ಹಚ್ಚಿದ್ದಾರೆ.

ಲುಲು ಮಾಲ್​ನಲ್ಲಿ ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿದ್ದ ವ್ಯಕ್ತಿಯ ಗುರುತು ಪತ್ತೆ
Updated By: ರಮೇಶ್ ಬಿ. ಜವಳಗೇರಾ

Updated on: Nov 01, 2023 | 10:36 AM

ಬೆಂಗಳೂರು, (ನವೆಂಬರ್ 01): ಬೆಂಗಳೂರಿನ ಲುಲು ಮಾಲ್​​ನಲ್ಲಿ ಯುವತಿ ಜೊತೆ ಅಸಭ್ಯವಾಗಿ ವರ್ತನೆ ಮಾಡಿದ ವಿಡಿಯೋ ವೈರಲ್ ಆಗಿದ್ದು, ಇದೀಗ ವಿಡಿಯೋ ಆಧರಿಸಿ ಪೊಲೀಸರು ಆ ವ್ಯಕ್ತಿಯ ಗುರುತು ಪತ್ತೆ ಹಚ್ಚಿದ್ದಾರೆ. ಹೌದು…ಮೊನ್ನೇ ಲುಲು ಮಾಲ್​ನಲ್ಲಿ ಯುವತಿಗೆ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಅಸಹ್ಯವಾಗಿ ವರ್ತಿಸಿದ್ದ ಬಸವೇಶ್ವರನಗರ ನಿವಾಸಿ ಅಶ್ವಥ್ ನಾರಾಯಣ್ (6೦) ಎಂದು ಗುರುತು ಪತ್ತೆಯಾಗಿದೆ. ಆದ್ರೆ, ಅಶ್ವಥ್ ನಾರಾಯಣ್ ಮನೆಗೆ ಬೀಗ ಹಾಕಿಕೊಂಡು ನಾಪತ್ತೆಯಾಗಿದ್ದಾನೆ.

ಆರೋಪಿ ಪ್ರತಿಷ್ಠಿತ ಮಠಕ್ಕೆ ಸೇರಿದ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿ ನಿವೃತ್ತನಾಗಿದ್ದಾನೆ ಎಂದು ತಿಳಿದುಬಂದಿದೆ. ಕಳೆದ ಎಂಟು ತಿಂಗಳ ಹಿಂದೆ ನಿವೃತ್ತನಾಗಿದ್ದ ಅಶ್ವಥ್ ನಾರಾಯಣ್, ಸದ್ಯ ಮನೆಗೆ ಬೀಗ ಹಾಕಿಕೊಂಡು ನಾಪತ್ತೆಯಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಮಾಗಡಿ ರೋಡ್ ಪೊಲೀಸರು ಆರೋಪಿ ಪತ್ತೆಗೆ ಹುಡುಕಾಟ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಲುಲು ಮಾಲ್‌ನಲ್ಲಿ ಯುವತಿ ಜತೆ ಅಶ್ಲೀಲ ವರ್ತನೆ: ವ್ಯಕ್ತಿ ವಿರುದ್ಧ ದೂರು ದಾಖಲು

ಮೂರು ದಿನಗಳ ಹಿಂದೆ ಲುಲು ಮಾಲ್ ನಲ್ಲಿ ಯವತಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಅಸಹ್ಯವಾಗಿ ಆಕೆಯ ದೇಹವನ್ನು ಮುಟ್ಟಿದ್ದ. ಇದನ್ನು ಯಶವಂತ್‌ ಎನ್ನುವಾತ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ. ಈ ವಿಡಿಯೋ ಆಧಾರದ ಮೇಲೆ ಲುಲು ಮಾಲ್​ ಆಡಳಿತ ಮಂಡಲಿ ಮಾಗಡಿ ರೋಡ್ ಪೊಲೀಸ್ ಠಾಣೆಗೆ ದೂರು ನೀಡಿತ್ತು. ಈ ದೂರಿನ ಆಧಾರದ ಮೇಲೆ ಪೊಲೀಸರು, ಕಾರ್ಯಚರಣೆ ನಡೆಸಿ ಆರೋಪಿಯ ಗುರುತು ಪತ್ತೆ ಮಾಡಿದ್ದಾರೆ. ಆದ್ರೆ, ಆರೋಪಿ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮನಗೆ ಬೀಗ ಹಾಕಿ ಪರಾರಿಯಾಗಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ