ಮೃತ ದೇಹ ಹೊರಕ್ಕೆ: ಮಾಗಡಿ ರಸ್ತೆ TO ಚಲ್ಲಘಟ್ಟ ಮೆಟ್ರೋ ಸಂಚಾರ ಪುನಾರಂಭ

Namma Metro : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಬರುವಾಗ ಯುವಕನೊಬ್ಬ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಪರ್ಪಲ್​ ಲೈನ್​ನ  ಮಾಗಡಿ ರಸ್ತೆಯಿಂದ ಚಲ್ಲಘಟ್ಟ ವರೆಗಿನ ಮೆಟ್ರೋ ಸಂಚಾರ ಪುನಾರಂಭವಾಗಿದೆ.

ಮೃತ ದೇಹ ಹೊರಕ್ಕೆ: ಮಾಗಡಿ ರಸ್ತೆ TO ಚಲ್ಲಘಟ್ಟ ಮೆಟ್ರೋ ಸಂಚಾರ ಪುನಾರಂಭ
ನಮ್ಮ ಮೆಟ್ರೋ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Mar 21, 2024 | 4:33 PM

ಬೆಂಗಳೂರು, (ಮಾರ್ಚ್ 21): ನಮ್ಮ ಮೆಟ್ರೋ (Namma Metro) ರೈಲಿನ ಟ್ರ್ಯಾಕ್‌ಗೆ ಜಿಗಿದು ಯುವಕನೋರ್ವ ಆತ್ಮಹತ್ಯೆ (Self harming) ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಂದು (ಮಾರ್ಚ್ .21) ಮಧ್ಯಾಹ್ನ 2:10ರ ಸುಮಾರಿಗೆ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ (Athiguppe Metro) ರೈಲು ಬರುವಾಗ ಯುವಕ ಹಳಿಗೆ ಜಿಗಿದಿದ್ದಾನೆ. ಪರಿಣಾಮ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಿಂದ ಸುಮಾರು ಎಂಟು ಅಡಿ ದೂರದಲ್ಲಿ ಯುವಕನ ದೇಹವನ್ನು ರೈಲು ಎಳೆದೊಯ್ದಿದೆ. ಇದರಿಂದ ಯುವಕನ ದೇಹ ಎರಡು ತುಂಡಾಗಿದೆ. ಮುಂಬೈ ಮೂಲದ ಧ್ರುವ್ ಟಕ್ಕರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಬೆಂಗಳೂರಿನ ನ್ಯಾಷನಲ್ ಲಾ ಕಾಲೇಜಿನ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಇನ್ನು ಪರ್ಪಲ್​ ಲೈನ್​ನ  ಮಾಗಡಿ ರಸ್ತೆ TO ಚಲ್ಲಘಟ್ಟ ಮೆಟ್ರೋ ಸಂಚಾರ ಪುನಾರಂಭವಾಗಿದೆ.

ಸ್ಥಗಿತಗೊಂಡಿದ್ದ ಮೆಟ್ರೋ ಪುನಾರಂಭ

ಪ್ರಕರಣ ಸಂಬಂಧ ಅತ್ತಿಗುಪ್ಪೆ ನಿಲ್ದಾಣದಲ್ಲಿ ರೈಲು ಓಡಾಟ ಸ್ಥಗಿತವಾಗಿತ್ತು. ಮಾಗಡಿ ರೋಡ್‌ನಿಂದ ವೈಟ್ ಫೀಲ್ಡ್‌ವರೆಗೆ ಮಾತ್ರ ಮೆಟ್ರೋ ಸಂಚಾರ ಇತ್ತು. ಮಾಗಡಿ ರಸ್ತೆಯಿಂದ ಚಲ್ಲಘಟ್ಟದವರೆಗೆ ಯಾವುದೇ ಸೇವೆ ಇಲ್ಲ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದರು. ಇನ್ನು ವಿಷಯ ತಿಳಿಯದ ಪ್ರಯಾಣಿಕರು ಅತ್ತಿಗುಪ್ಪೆ  ಮೆಟ್ರೋ ನಿಲ್ದಾಣಕ್ಕೆ ಬರುತ್ತಿದ್ದು, ಅಂತವರನ್ನು ಮೆಟ್ರೋ ಸಿಬ್ಬಂದಿ ಬಸ್​ ಮೂಲಕ ತೆರಳುವಂತೆ ಹೇಳಿ ಕಳುಹಿಸುತ್ತಿದ್ದರು. ಇದೀಗ ಮೃತ ದೇಹವನ್ನು ಹಳಿಯಿಂದ ಹೊರ ತೆಗೆದು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಹೀಗಾಗಿ ಸ್ಥಗಿತಗೊಂಡಿದ್ದ ಮಾಗಡಿ ರಸ್ತೆ TO ಚಲ್ಲಘಟ್ಟ ಮೆಟ್ರೋ ಸಂಚಾರ ಪುನಾರಂಭವಾಗಿದೆ.

ಇದನ್ನೂ ಓದಿ: ಬೆಂಗಳೂರು: ಮೆಟ್ರೋ ಬರುವಾಗ ಹಳಿಗೆ ಹಾರಿ ಯುವಕ ಆತ್ಮಹತ್ಯೆ; ರೈಲು ಸಂಚಾರ ಸ್ಥಗಿತ

ಈ ರೀತಿ ಮೆಟ್ರೋ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವುದು ಇದೇ ಮೊದಲ ಪ್ರಕರಣವಾಗಿದೆ. ಈ ಹಿಂದೆ ಹಳಿ ಮೇಲೆ ಜಿಗಿದ ಪ್ರಕರಣಗಳು ನಡೆದಿದ್ದವು. ಆದ್ರೆ, ಯಾವುದೇ ಸಾವು-ನೋವು ಸಂಭವಿಸಿರಲಿಲ್ಲ,

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ