Mahadevapura Election Results: ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮಂಜುಳಾ ಲಿಂಬಾವಳಿಗೆ ಗೆಲುವು

Mahadevapura Assembly Election Result 2023 Live Counting Updates: ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮಂಜುಳಾ ಲಿಂಬಾವಳಿಗೆ ಗೆಲುವು

Mahadevapura Election Results: ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮಂಜುಳಾ ಲಿಂಬಾವಳಿಗೆ ಗೆಲುವು
ಮಹಾದೇವಪುರ -ಮಂಜುಳಾ ಲಿಂಬಾವಳಿಗೆ ಗೆಲುವು
Follow us
ಸಾಧು ಶ್ರೀನಾಥ್​
|

Updated on:May 13, 2023 | 6:38 PM

Mahadevapura Assembly Election Result 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections 2023) ಫಲಿತಾಂಶ ಪ್ರಕಟಗೊಂಡಿದೆ. ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮಂಜುಳಾ ಲಿಂಬಾವಳಿಗೆ ಗೆಲುವು ಸಾಧಿಸಿದ್ದಾರೆ.

ಮೇ 10 ರಂದು ನಡೆದ ಮತದಾನದಲ್ಲಿ ಮಹಾದೇವಪುರ ಕ್ಷೇತ್ರದಲ್ಲಿ (Mahadevapura Assembly Elections 2023) ಶೇ. 51.25ರಷ್ಟು ಮತದಾನವಾಗಿತ್ತು. ರಾಜಧಾನಿ ಬೆಂಗಳೂರು ನಗರದ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾದ ಮಹಾದೇವಪುರದಲ್ಲಿ ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಮಹದೇವಪುರ ವಿಧಾನಸಭಾ ಕ್ಷೇತ್ರ ಬೆಳ್ಳಂದೂರು, ಮಾರತಹಳ್ಳಿ, ದೊಡ್ಡನೆಕ್ಕುಂದಿ ಮತ್ತು ಗರುಡಾಚಾರ್ ಪಾಳ್ಯ ವ್ಯಾಪ್ತಿ ಒಳಗೊಂಡಿದೆ.

ಬಿಜೆಪಿ ಹಾಗೂ ಕಾಂಗ್ರೆಸ್‌ ಎರಡೂ ಪಕ್ಷಗಳು ಹೊಸಮುಖಗಳನ್ನು ಕಣಕ್ಕೆ ಇಳಿಸಿರುವುದರಿಂದ ಮಹದೇವಪುರ ವಿಧಾನಸಭಾ ಕ್ಷೇತ್ರ ಸಾಕಷ್ಟು ಕುತೂಹಲ ಮೂಡಿಸಿದೆ. 2008ರಿಂದಲೂ ಬಿಜೆಪಿ ಭದ್ರಕೋಟೆ ಆಗಿರುವ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಶತಾಯಗತಾಯ ‍ಪ್ರಯತ್ನಿಸುತ್ತಿರುವ ಕಾಂಗ್ರೆಸ್‌, ಎರಡು ಬಾರಿ ಸೋಲು ಅನುಭವಿಸಿದ್ದ ಎ.ಸಿ. ಶ್ರೀನಿವಾಸ್‌ ಅವರ ಬದಲು ಕಳೆದ ಚುನಾವಣೆಯಲ್ಲಿ ಮುಳಬಾಗಿಲು ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಕಂಡಿದ್ದ ಎಚ್‌.ನಾಗೇಶ್ ಅವರನ್ನು ಮಹದೇವಪುರ ಕ್ಷೇತ್ರದಿಂದ ಕಣಕ್ಕೆ ಇಳಿಸಿದೆ. ಜೆಡಿಎಸ್‌ ಅಭ್ಯರ್ಥಿಯನ್ನು ಹಾಕದೇ ಇರುವುದು ಕಾಂಗ್ರೆಸ್‌ಗೆ ಬಲ ತಂದಿದೆ.

ಮೂರು ಅವಧಿ ಶಾಸಕರಾಗಿ, ಸಚಿವರೂ ಆಗಿದ್ದ ಅರವಿಂದ ಲಿಂಬಾವಳಿ ಬದಲು ಅವರ ಪತ್ನಿ ಮಂಜುಳಾ ಲಿಂಬಾವಳಿ ಅವರಿಗೆ ಟಿಕೆಟ್‌ ನೀಡುವ ಮೂಲಕ ಬಿಜೆಪಿ ಹೊಸ ದಾಳ ಉರುಳಿಸಿದೆ. ಆಮ್‌ ಆದ್ಮಿ ಪಕ್ಷದಿಂದ ಸಿ.ಆರ್.ನಟರಾಜ್‌, ಬಹುಜನ ಸಮಾಜ ಪಕ್ಷದಿಂದ ಕೆ.ಸಿ.ಪ್ರಸಾದ್, ಜೆಡಿಯುನಿಂದ ಎಂ.ವಿ.ಗೋಪಾಲಕೃಷ್ಣ, ಉತ್ತಮ ಪ್ರಜಾಕೀಯ ಪಕ್ಷದಿಂದ ಆರ್.ನಾಗರಾಜ್, ಕರ್ನಾಟಕ ರಾಷ್ಟ್ರ ಸಮಿತಿಯಿಂದ ಶಿವಾಜಿ ಲಮಾಣಿ ಹಾಗೂ ಎಂಟು ಪಕ್ಷೇತರರು ಕಣದಲ್ಲಿ ಇದ್ದರೂ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ನೇರ ಹಣಾಹಣಿ ಕಾಣುತ್ತಿದೆ.

ಇದನ್ನೂ ಓದಿ: PM Modi Roadshow: ಬಿಜೆಪಿಯನ್ನು ಬೆಂಗಳೂರು ಬಯಸುತ್ತಿದೆ, ಸಾಕ್ಷಿ ಇಲ್ಲಿದೆ ನೋಡಿ; ಪ್ರಧಾನಿ ಮೋದಿ

ಶಾಸಕ ಅರವಿಂದ ಲಿಂಬಾವಳಿ ಅವರು ಕ್ಷೇತ್ರದಲ್ಲಿ ರಚಿಸಿರುವ ‘ಜನರ ಕಾರ್ಯಪಡೆ’ ಬಿಜೆಪಿ ಅಭ್ಯರ್ಥಿ ಮಂಜುಳಾ ಅವರ ಪರ ಕೆಲಸ ಮಾಡುತ್ತಿದೆ. ಸಾಮಾನ್ಯ ಗೃಹಿಣಿಯಾಗಿದ್ದ ತಮ್ಮನ್ನು ಶಾಸಕಿ ಮಾಡಬೇಕು ಎನ್ನುವ ಪಕ್ಷದ ಆಶಯ ಈಡೇರಿಸಲು, ಕ್ಷೇತ್ರದ ಜನಸೇವೆ ಮಾಡಲು ಇನ್ನೊಂದು ಅವಕಾಶ ಕೊಡಿ ಎಂದು ಮಹಿಳಾ ಮತಗಳನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಮಂಜುಳಾ ಅವರ ಪತಿ ಅರವಿಂದ ಲಿಂಬಾವಳಿ ಕ್ಷೇತ್ರ ಸುತ್ತಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಹಿಂದುತ್ವದ ವಿಷಯಗಳು ಹಿಂದೆ ಸರಿದು, ಮೋದಿ ಹೆಸರು, ರಾಜ್ಯ, ಕೇಂದ್ರ ಸರ್ಕಾರಗಳ ಸಾಧನೆಗಳು ಮುನ್ನೆಲೆಗೆ ಬಂದಿವೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 3:26 am, Sat, 13 May 23