ನೀರಿಗಾಗಿ ಹಾಹಾಕಾರ; ಜೀವಜಲಕ್ಕಾಗಿ ಮಹದೇವಪುರ, ವರ್ತೂರು ಜನ ಹೈರಾಣ

ಬೇಸಿಗೆ ಆರಂಭಕ್ಕೂ ಮೊದಲೇ ರಾಜಧಾನಿಯಲ್ಲಿ ಜಲದಾಹ ಹೆಚ್ಚಾಗ್ತಿದ್ದು, ನೀರಿನ ಅಭಾವದಿಂದ ಸಿಟಿ ಜನರು ಹೈರಾಣಾಗಿದ್ದಾರೆ. ಸದ್ಯ ಬೇಸಿಗೆಗೂ ಮೊದಲೇ ಇಂತ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುಂದಿನ ಮೂರು ತಿಂಗಳು ಹೀಗೆ ಆದ್ರೆ ಜೀವನ ಮಾಡೋದು ಹೇಗೆ ಅಂತಾ ಜನರು ಚಿಂತಕ್ರಾಂತರಾಗಿದ್ದಾರೆ.

ನೀರಿಗಾಗಿ ಹಾಹಾಕಾರ; ಜೀವಜಲಕ್ಕಾಗಿ ಮಹದೇವಪುರ, ವರ್ತೂರು ಜನ ಹೈರಾಣ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Feb 24, 2024 | 11:45 AM

ಬೆಂಗಳೂರು, ಫೆ.24: ಬೇಸಿಗೆಯ ಬಿಸಿಲತಾಪದ ಜೊತೆಗೆ ಸಿಲಿಕಾನ್ ಸಿಟಿ ಜನರಿಗೆ ಜಲಾಘಾತ ಕೂಡ ಎದುರಾಗಿದೆ. ಸಿಲಿಕಾನ್ ಸಿಟಿಯಲ್ಲಿ ನೀರಿಗೆ ಹಾಹಾಕಾರ ಎದ್ದಿದೆ (Drinking Water Crisis). ಒಂದೆಡೆ ಸುಡುಬಿಸಿಲು ಜನರನ್ನ ಹೈರಾಣಾಗಿಸಿದ್ರೆ, ಮತ್ತೊಂದೆಡೆ ನೀರಿನ ಅಭಾವದಿಂದ ಜನರು ನಲುಗಿಹೋಗಿದ್ದಾರೆ. ದುಪ್ಪಟ್ಟು ಹಣ ಕೊಟ್ಟರೂ ಟ್ಯಾಂಕರ್ ನೀರು ಕೂಡ ಸಿಗದೇ ಜನರು ಕಂಗಾಲಾಗಿದ್ದಾರೆ. ನಮಗೇನು ಬೇಡ ನೀರು ಕೊಡಿ ಅಂತಾ ಅಂಗಲಾಚುತ್ತಿದ್ದಾರೆ.

ಬಿಸಿಲ ತಾಪ ಹೆಚ್ಚಾಗ್ತಿರೋ ಹೊತ್ತಲ್ಲೇ ರಾಜ್ಯ ರಾಜಧಾನಿಯಲ್ಲಿ ನೀರಿಗೆ ಹಾಹಾಕಾರ ಶುರುವಾಗಿದೆ. ಕುಡಿಯೋ ನೀರಿನ ಅಭಾವದಿಂದ ನಲ್ಲಿ ನೀರು ಮರೆಯಾಗ್ತಿದ್ರೆ, ಅತ್ತ ದುಪ್ಪಟ್ಟು ಹಣ ಕೊಟ್ಟರು ಟ್ಯಾಂಕರ್ ನೀರು ಕೂಡ ಸಿಗದೇ ಜನ ಹೈರಾಣಾಗ್ತಿದ್ದಾರೆ. ಅತಿಹೆಚ್ಚು ಕೆರೆಗಳಿರೋ ಮಹದೇವಪುರ ವಲಯದಲ್ಲೇ ಜಲಕ್ಷಾಮ ತಾಂಡವವಾಡ್ತಿದ್ದು, ವರ್ತೂರಿನ ಜನರು ಜೀವಜಲವಿಲ್ಲದೇ ಹೈರಾಣಾಗಿದ್ದಾರೆ.

ವರ್ತೂರಿನ ಪ್ರತಿ ಮನೆ ಮನೆಗೂ ಟ್ಯಾಂಕರ್ ನೀರೆ ಗತಿಯಾಗಿಬಿಟ್ಟಿದೆ. ನಲ್ಲಿ ನೀರಿಲ್ಲದೇ ಪರದಾಡ್ತಿರೋ ಜನರು, ನೀರಿನ ಸಮಸ್ಯೆ ನೀಗಿಸದ ಪಾಲಿಕೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಕುಡಿಯೋ ನೀರಿಲ್ಲದೇ, ದಿನನಿತ್ಯ ಬಳಕೆಗೂ ನೀರಿಲ್ಲದೇ ಇಲ್ಲಿನ ಜನರು ಕಂಗಾಲಾಗಿದ್ದಾರೆ. ಇನ್ನು ಟ್ಯಾಂಕರ್ ನೀರು ಬೇಕು ಅಂದ್ರೆ ಮೂರು ದಿನ ಮೊದಲೇ ಬುಕ್ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದ್ದು, ಹಣ ಕೊಟ್ಟರೂ ಟ್ಯಾಂಕರ್ ನೀರು ಸಿಗದ ಸ್ಥಿತಿ ನಿರ್ಮಾಣವಾಗಿದೆ. ಏರಿಯಾದಲ್ಲಿ ಬೋರ್ ವೆಲ್ ಗಳು ಕೂಡ ಬತ್ತಿ ಹೋಗಿದ್ದು, ಜನರು ಮನೆಗೆ ಬಂದ್ರೆ ಊಟ ಕೊಡ್ತೀವಿ, ಆದ್ರೆ ನೀರು ಕೊಡೋಕೆ ಆಗ್ತಿಲ್ಲ ಅಂತಾ ಅಳಲು ತೋಡಿಕೊಂಡಿದ್ದಾರೆ. ಅಲ್ಲದೇ ನೀರಿಲ್ಲದೇ ಇರೋದರಿಂದ ಬಾಡಿಗೆದಾರರು ಮನೆ ತೊರೆಯುತ್ತಿದ್ದು, ಮನೆ ಮಾಲೀಕರು ಕೂಡ ಕಂಗಾಲಾಗಿದ್ದಾರೆ.

ಇದನ್ನೂ ಓದಿ: ತುಂಗಭದ್ರಾ ನೀರಾವರಿ ಸಲಹಾ ಸಮಿತಿಯ ತುರ್ತು ಸಭೆ; ನಾಲ್ಕು ಜಿಲ್ಲೆಯ ವಿವಿಧ ಕಾಲುವೆಗಳಿಗೆ ನೀರು ಹರಿಸಲು ನಿರ್ಧಾರ

ನೀರಿನ ಸಮಸ್ಯೆ ಕುರಿತು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಭೆ

ಇನ್ನು ನೀರಿನ ಸಮಸ್ಯೆ ಬಗ್ಗೆ ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ, ನಗರಾಭಿವೃದ್ಧಿ ಇಲಾಖೆಯಿಂದ ಹೈವೋಲ್ಟೇಜ್ ಸಭೆ ನಡೆಯುತ್ತಿದೆ. ನೀರಿನ ಸಮಸ್ಯೆ ಕುರಿತು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಎಲ್ಲಾ ವಲಯಗಳ ಆಯುಕ್ತರು, ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಸಭೆ ನಡೆಸುತ್ತಿದ್ದಾರೆ. ನೀರು ಪೂರೈಕೆ, ಟ್ಯಾಂಕರ್ ಮಾಫಿಯಾಗೆ ಕಡಿವಾಣ ಹಾಕಲು ಸಭೆಯಲ್ಲಿ ಚರ್ಚೆ ನಡೆಯುತ್ತಿದೆ. ಬೆಂಗಳೂರಿಗೆ ಜೂನ್‌ವರೆಗೆ 10ರಿಂದ 15 ಟಿಎಂಸಿ ನೀರು ಅವಶ್ಯಕತೆ ಹಿನ್ನೆಲೆ ನೀರು ಸಮರ್ಪಕವಾಗಿ ಬಳಕೆ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಹಾಗೂ ಪ್ರತಿ ವಾರ್ಡ್‌ಗೆ 40 ಟ್ಯಾಂಕರ್‌ ಮೂಲಕ ನೀರು ಸರಬರಾಜು ಬಗ್ಗೆ ಚರ್ಚೆ ನಡೆಯುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ