AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಂತೇಶ್​​ ಬೀಳಗಿ ಪುತ್ರಿಗೆ ಅನುಕಂಪದ ನೌಕರಿ: ಕೆಲಸ ಎಲ್ಲಿ? ಮಾಹಿತಿ ಇಲ್ಲಿದೆ

Mahantesh Bilagi: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಕುಮಾರಿ ಚೈತನ್ಯಾ ಬೀಳಗಿಗೆ ಕರ್ನಾಟಕ ಸರ್ಕಾರ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಿದೆ. ಈ ಬಗ್ಗೆ ಆದೇಶ ಪತ್ರ ನೀಡಲಾಗಿದ್ದು, 15 ದಿನಗಳ ಒಳಗೆ ಕೆಲಸಕ್ಕೆ ಹಾಜರಾಗುವಂತೆಯೂ ಸೂಚಿಸಲಾಗಿದೆ. ಕೆಲಸ ನೀಡಿರೋದು ಯಾವ ಇಲಾಖೆಯಲ್ಲಿ ಎಂಬಿತ್ಯಾದಿ ಮಾಹಿತಿ ಇಲ್ಲಿದೆ.

ಮಹಾಂತೇಶ್​​ ಬೀಳಗಿ ಪುತ್ರಿಗೆ ಅನುಕಂಪದ ನೌಕರಿ: ಕೆಲಸ ಎಲ್ಲಿ? ಮಾಹಿತಿ ಇಲ್ಲಿದೆ
ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿಗೆ ನೌಕರಿ ನೀಡಿ ಆದೇಶ
ಪ್ರಸನ್ನ ಹೆಗಡೆ
|

Updated on: Jan 28, 2026 | 1:45 PM

Share

ಬೆಂಗಳೂರು, ಜನವರಿ 28: ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ, ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯಾ ಬೀಳಗಿಗೆ ಅನುಕಂಪದ ಆಧಾರದಲ್ಲಿ ಕೆಲಸ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಉದ್ಯೋಗ ನೀಡಲಾಗಿದ್ದು, ಜ.2ರಂದು ಸಿಎಂ ನೇತೃತ್ವದಲ್ಲಿ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಅನುಕಂಪದ ಉದ್ಯೋಗ ನೀಡಲು ನಿರ್ಧರಿಸಲಾಗಿತ್ತು.

ಆದೇಶ ಪತ್ರದಲ್ಲಿ ಏನಿದೆ?

ಭಾರತೀಯ ಆಡಳಿತ ಸೇವೆಗೆ ಸೇರಿದ ಅಧಿಕಾರಿಯಾದ ದಿವಂಗತ ಮಹಾಂತೇಶ್ ಬೀಳಗಿ ಅವರು ಸೇವೆಯಲ್ಲಿರುವಾಗಲೇ 2025ರ ನವೆಂಬರ್​​ 25ರಂದು ನಿಧನ ಹೊಂದಿರುವುದರಿಂದ, ಇವರ ಪುತ್ರಿಯಾದ ಚೈತನ್ಯಾ ಎಮ್. ಬೀಳಗಿ, ಇವರನ್ನು ಕರ್ನಾಟಕ ನಾಗರೀಕ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು, 1996ರ ನಿಯಮ 6(1)ರನ್ವಯ ಕರ್ನಾಟಕ ಸರ್ಕಾರ ಸಚಿವಾಲಯದಲ್ಲಿ ಸಹಾಯಕ ಹುದ್ದೆಗೆ ಎರಡು ವರ್ಷಗಳ ಪರೀಕ್ಷಾರ್ಥಾವಧಿಯ ಮೇರೆಗೆ ಹಾಗೂ ಷರತ್ತುಗಳಿಗೆ ಒಳಪಟ್ಟು ಅನುಕಂಪದ ಆಧಾರದ ಮೇಲೆ ನೇಮಕ ಮಾಡಲಾಗಿರೋದಾಗಿ ತಿಳಿಸಲಾಗಿದೆ. 15 ದಿನಗಳ ಒಳಗೆ ಕೆಲಸಕ್ಕೆ ಹಾಜರಾಗುವಂತೆಯೂ ಸೂಚಿಸಲಾಗಿದೆ.

ಇದನ್ನೂ ಓದಿ: ಮೃತ IAS ಅಧಿಕಾರಿ ಮಹಾಂತೇಶ್‌ ಬೀಳಗಿ ಪುತ್ರಿಗೆ ಅನುಕಂಪದ ನೌಕರಿ ನೀಡಲು ಸಂಪುಟ ಒಪ್ಪಿಗೆ, ಯಾವ ಹುದ್ದೆ?

ನವೆಂಬರ್ 25ರಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಕಾರು ಅಪಘಾತ ನಡೆದು ಮಹಾಂತೇಶ ಬೀಳಗಿ ಮೃತಪಟ್ಟಿದ್ದರು. ಏಕಾಏಕಿ ಅಡ್ಡ ಬಂದ ಶ್ವಾನವನ್ನು ಚಾಲಕ ಉಳಿಸಲು ಹೋದ ಪರಿಣಾಮ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಅಪಘಾತಕ್ಕೀಡಾಗಿತ್ತು. ಈ ವೇಳೆ ಮಹಾಂತೇಶ್ ಬಿಳಗಿ ಸೇರಿದಂತೆ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಕೂಡ ಮೃತಪಟ್ಟಿದ್ದರು.

ವರದಿ: ಈರಣ್ಣಾ ಬಸವ, ಟಿವಿ9 ಕನ್ನಡ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.