ಬಾಳಿಕೆ ಬರುವಂತೆ ರಸ್ತೆ ದುರಸ್ತಿ ಮಾಡಿ, ಇಲ್ಲವಾದರೆ ಮಿಲಿಟರಿಗೆ ಹೊಣೆ ನೀಡುವುದಾಗಿ ಬಿಬಿಎಂಪಿಗೆ ಎಚ್ಚರಿಕೆ ನೀಡಿದ ಹೈಕೋರ್ಟ್

Karnataka High Court: ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳಿರುವುದು ಗೊತ್ತಿದೆಯೇ? ನಿಮ್ಮ ಎಂಜಿನಿಯರ್ ಗಳು ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ರಸ್ತೆ ಗುಂಡಿ ಸಮಸ್ಯೆ ಸರಿಪಡಿಸಲು ಏನು ಕ್ರಮ ಕೈಗೊಂಡಿದ್ದೀರಿ? ಜೈಲಿಗೆ ಕಳುಹಿಸದೇ ನಿಮಗೆ ಕರುಣೆ ತೋರಿದ್ದೇವೆ. ಗುಣಮಟ್ಟದ ಕಾಮಗಾರಿಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಛೀಮಾರಿ ರೀತಿಯಲ್ಲಿ ಬಿಬಿಎಂಪಿ ಪ್ರಧಾನ ಎಂಜಿನಿಯರ್ ಗೆ ಹೈಕೋರ್ಟ್ ಪ್ರಶ್ನೆ ಮಾಡಿತು.

ಬಾಳಿಕೆ ಬರುವಂತೆ ರಸ್ತೆ ದುರಸ್ತಿ ಮಾಡಿ, ಇಲ್ಲವಾದರೆ ಮಿಲಿಟರಿಗೆ ಹೊಣೆ ನೀಡುವುದಾಗಿ ಬಿಬಿಎಂಪಿಗೆ ಎಚ್ಚರಿಕೆ ನೀಡಿದ ಹೈಕೋರ್ಟ್
ಬಾಳಿಕೆ ಬರುವಂತೆ ರಸ್ತೆ ದುರಸ್ತಿ ಮಾಡಿ, ಇಲ್ಲವಾದರೆ ಮಿಲಿಟರಿ ಎಂಜಿನಿಯರುಗಳಿಗೆ ಹೊಣೆ ನೀಡುವುದಾಗಿ ಬಿಬಿಎಂಪಿಗೆ ಎಚ್ಚರಿಕೆ ನೀಡಿದ ಹೈಕೋರ್ಟ್
Updated By: ಸಾಧು ಶ್ರೀನಾಥ್​

Updated on: Feb 17, 2022 | 1:42 PM

ಬೆಂಗಳೂರು: ಕರ್ನಾಟಕದ ರಾಜಧಾನಿ ಮಂದಿಗೆ ರಸ್ತೆಗುಂಡಿಗಳೊಂದಿಗೆ ಹೊಂದಿಕೊಂಡು ಜೀವನ ಸಾಗಿಸುವುದು ಸಾಮಾನ್ಯವಾಗಿದೆ. ಆಗೊಮ್ಮೆ ಈಗೊಮ್ಮೆ ಪರಿಸ್ಥಿತಿ ಹದಗೆಟ್ಟಾಗ ವಿಷಯ ಕೋರ್ಟ್​ ಮೆಟ್ಟಿಲೇರುವುದು ಸಾಮಾನ್ಯವಾಗಿದೆ. ಆದರೂ ಬೆಂಗಳೂರಿನ ರಸ್ತೆಗಳಲ್ಲಿ ಆಳವಾಗಿಯೇ ಕಾಣುವ ರಸ್ತೆಗಳನ್ನು ಮುಚ್ಚುವುದು ದೂರದ ಮಾತಾಗಿದೆ. ಈ ಪಾಟ್​​ಹೋಲ್ ಕಾಟದಿಂದ ರೋಸಿಹೋಗಿ ಕರ್ನಾಟಕ ಹೈಕೋರ್ಟ್​ (Karnataka High Court) ಸಹ ರಸ್ತೆ ನಿರ್ವಹಣೆ ಉಸ್ತುವಾರಿ ನೋಡಿಕೊಳ್ಳುವ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (Bruhat Bengaluru Mahanagara Palike -BBMP) ಯನ್ನು ಈ ಬಾರಿಯೂ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಪರಿಸ್ಥಿತಿ ಯಾವ ಮಟ್ಟ ತಲುಪಿತ್ತೆಂದರೆ ಬೆಂಗಳೂರಿನ ರಸ್ತೆಗುಂಡಿಗಳನ್ನು ಮುಚ್ಚುವ ವಿಚಾರವಾಗಿ ಹೈಕೋರ್ಟ್ ನಿಂದ ಬಿಬಿಎಂಪಿ ಪ್ರಧಾನ ಎಂಜಿನಿಯರ್ ಗೆ ಜಾಮೀನು ಸಹಿತ ವಾರೆಂಟ್ ಜಾರಿಯಾಗಿತ್ತು. ಕೊನೆಗೂ ಇಂದು ಕೋರ್ಟ್​ ಗೆ ಹಾಜರಾದ ಬಿಬಿಎಂಪಿ ಪ್ರಧಾನ ಎಂಜಿನಿಯರ್ ಎಸ್. ಪ್ರಭಾಕರ್ ಗೈರು ಹಾಜರಿಗೆ ಬೇಷರತ್ ಆಗಿ ನ್ಯಾಯಾಲಯದ ಕ್ಷಮೆ ಕೋರಿದರು. ಈ ವೇಳೆ, ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳಿರುವುದು ಗೊತ್ತಿದೆಯೇ? ನಿಮ್ಮ ಎಂಜಿನಿಯರ್ ಗಳು ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ರಸ್ತೆ ಗುಂಡಿ ಸಮಸ್ಯೆ ಸರಿಪಡಿಸಲು ಏನು ಕ್ರಮ ಕೈಗೊಂಡಿದ್ದೀರಿ? ಜೈಲಿಗೆ ಕಳುಹಿಸದೇ ನಿಮಗೆ ಕರುಣೆ ತೋರಿದ್ದೇವೆ. ಗುಣಮಟ್ಟದ ಕಾಮಗಾರಿಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಛೀಮಾರಿ ರೀತಿಯಲ್ಲಿ ಬಿಬಿಎಂಪಿ ಪ್ರಧಾನ ಎಂಜಿನಿಯರ್ ಗೆ ಹೈಕೋರ್ಟ್ ಪ್ರಶ್ನೆ ಮಾಡಿತು.

ರಸ್ತೆಗಳನ್ನು ಸರಿಪಡಿಸಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ಪೈಥಾನ್ ಯಂತ್ರ ಬಳಸಲು ಟೆಂಡರ್ ಕರೆಯಲಾಗಿದೆ. 20 ವರ್ಷ ಬಾಳಿಕೆಯ ರಸ್ತೆಗಳನ್ನು ನಿರ್ಮಿಸಲಾಗುವುದು. ಸ್ಮಾರ್ಟ್ ಸಿಟಿ ಯೋಜನೆಯಡಿಯೂ ಕಾಮಗಾರಿ ನಡೆಯುತ್ತಿದೆ ಎಂದು ಹೈಕೋರ್ಟ್​​ಗೆ ಬಿಬಿಎಂಪಿ ಪರ ವಕೀಲ ವಿ. ಶ್ರೀನಿಧಿ ಹೇಳಿದರು. ಆಗ ಕೋರ್ಟ್​, ನಿಮ್ಮ ಅಧೀನ ಇಂಜಿನಿಯರ್​​ಗಳೇ ಸಮಸ್ಯೆ ಸೃಷ್ಟಿಸಿದ್ದಾರೆ. ಬಾಳಿಕೆ ಬರುವಂತೆ ರಸ್ತೆ ದುರಸ್ತಿ ಮಾಡಬೇಕು. ದುರಸ್ತಿಯಾದ ರಸ್ತೆಗಳ ಪರಿಶೀಲನೆ‌ ನಡೆಸುತ್ತೇವೆ. ರಸ್ತೆ ಗುಂಡಿಗಳಿಂದ ಸಾವು ಸಂಭವಿಸದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ರಸ್ತೆ ನಿರ್ವಹಣೆ ಹೊಣೆಯನ್ನು ಮಿಲಿಟರಿ ಇಂಜಿನಿಯರ್​ಗಳಿಗೆ ನೀಡುವುದಾಗಿ ಬಿಬಿಎಂಪಿ ಪ್ರಧಾನ ಇಂಜಿನಿಯರ್​ಗೆ ಹೈಕೋರ್ಟ್ ಎಚ್ಚರಿಕೆ ನೀಡಿತು.

Also Read:
ಹಿಜಾಬ್ ವಿವಾದ: ಅತ್ತ ದರಿ, ಇತ್ತ ಪುಲಿ ಎಂಬಂತಾಗಿದೆ ಕರ್ನಾಟಕ ಕಾಂಗ್ರೆಸ್​ ಪರಿಸ್ಥಿತಿ! ಮುಂದೆ ಯಾವುದಯ್ಯಾ ದಾರಿ?

Also Read:
ಕೆಎಸ್ ಲೇಔಟ್​ನಲ್ಲಿ ತಂದೆಯ ತಿಥಿ ಕಾರ್ಯಕ್ಕೆಂದು ಅಡುಗೆ ಮಾಡುವಾಗ ಗ್ಯಾಸ್ ಸೋರಿಕೆಯಾಗಿ ಮಗಳ ದಾರುಣ ಸಾವು

Published On - 1:37 pm, Thu, 17 February 22