ಐಎಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಹಲವು ಇಲಾಖೆಗಳಿಗೆ ಹೊಸ ಅಧಿಕಾರಿಗಳ ನೇಮಕ

ರಾಜ್ಯ ಸರ್ಕಾರವು ಆಡಳಿತಾತ್ಮಕ ಸುಧಾರಣೆಗಾಗಿ ಹಲವು ಹಿರಿಯ ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಬಿಡಿಎ ಆಯುಕ್ತ ಮನಿವಣ್ಣನ್ ಸೇರಿದಂತೆ ಹಲವರಿಗೆ ಪ್ರಮುಖ ಇಲಾಖೆಗಳ ಹೆಚ್ಚುವರಿ ಜವಾಬ್ದಾರಿ ವಹಿಸಿದೆ. ಈ ಬಗ್ಗೆ ಕರ್ನಾಟಕ ಸರ್ಕಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಟಿ. ಮಹಾಂತೇಶ್ ಆದೇಶ ಹೊರಡಿಸಿದ್ದಾರೆ.

ಐಎಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಹಲವು ಇಲಾಖೆಗಳಿಗೆ ಹೊಸ ಅಧಿಕಾರಿಗಳ ನೇಮಕ
Vidhanasoudha
Image Credit source: Getty Images

Updated on: Jun 18, 2026 | 9:47 PM

ಬೆಂಗಳೂರು, ಜೂನ್​​ 18: ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಬದಲಾವಣೆಗಳನ್ನು ಮಾಡಿದ್ದು, ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಆಯುಕ್ತ ಮನಿವಣ್ಣನ್ ಪಿ. ಅವರಿಗೆ, ಬೆಂಗಳೂರು ನಗರ ಭೂ ಸಾರಿಗೆ ನಿರ್ದೇಶನಾಲಯದ (DULT) ಆಯುಕ್ತರ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ನವದೆಹಲಿಯ ಕರ್ನಾಟಕ ಭವನದಲ್ಲಿ ರೆಸಿಡೆಂಟ್ ಕಮಿಷನರ್ ಹುದ್ದೆಯಿಂದ ಇಂಕೊಂಗ್ಲಾ ಜಮೀರ್ ಎಂ. ಅವರನ್ನು ವರ್ಗಾವಣೆ ಮಾಡಲಾಗಿದ್ದು, ಕರ್ನಾಟಕ ಭವನದ ಸಮನ್ವಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಡಾ. ಪ್ರಸಾದ್ ಎನ್.ವಿ. ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಸಮೀರ್ ಶುಕ್ಲಾ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿ, ನವದೆಹಲಿಯ ಕರ್ನಾಟಕ ಭವನದಲ್ಲಿ ರೆಸಿಡೆಂಟ್ ಕಮಿಷನರ್ ಆಗಿ ನೇಮಿಸಲಾಗಿದೆ. ತುಳಸಿ ಮದ್ದಿನೇನಿ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಸರ್ಕಾರಿ ನೌಕರರ 2026-27ನೇ ಸಾಲಿನ ವರ್ಗಾವಣೆ ಮಾರ್ಗಸೂಚಿ ಪ್ರಕಟ

ಮಾಡಲಾಗಿದ್ದು, ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನೂ ನೀಡಲಾಗಿದೆ. ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯಿಂದ ಶಿವಕುಮಾರ್ ಕೆ.ಬಿ. ವರ್ಗಾವಣೆಯಾಗಿದ್ದು, ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಅವರು ನೇಮಕಗೊಂಡಿದ್ದಾರೆ. ಡಾ. ರಾಮ ಪ್ರಸಾತ್ ಮನೋಹರ್ ವಿ. ಅವರಿಗೆ ಪ್ರವಾಸೋದ್ಯಮ ಆಯುಕ್ತರ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

ಡಾ. ಸತೀಶ ಬಿ.ಸಿ. ವರನ್ನು ಕೃಷಿ ಇಲಾಖೆಯ ಆಯುಕ್ತರಾಗಿ ನೇಮಕ ಮಾಡಲಾಗಿದ್ದು, ಅಕ್ರಮ್ ಪಾಶಾ ಅವರನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಹಾಗೂ ಆರೋಗ್ಯ ನಿರ್ದೇಶನಾಲಯದ ಮಿಷನ್ ನಿರ್ದೇಶಕರಾಗಿ ನೇಮಿಸಲಾಗಿದೆ. ರಘುನಂದನ್ ಮೂರ್ತಿ ಅವರನ್ನು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದ್ದು, ಖಜಾನೆ ಇಲಾಖೆಯ ಆಯುಕ್ತ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನೂ ಇವರು ಮುಂದುವರಿಸಲಿದ್ದಾರೆ.

ನಿತೀಶ್ ಕೆ. ಅವರನ್ನು ನಗರಪಾಲಿಕೆ ಆಡಳಿತ ನಿರ್ದೇಶಕರಾಗಿ, ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (MSME) ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಗಜಾನನ ಬಾಳೆ ಅವರನ್ನು ಬಾಗಲಕೋಟೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (CEO) ನೇಮಿಸಲಾಗಿದ್ದು, ಜೊತೆಗೆ ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ಮತ್ತು ಭೂಸ್ವಾಧೀನ ವಿಭಾಗದ ಮಹಾಪ್ರಬಂಧಕರ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನೂ ಇವರಿಗೆ ವಹಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Loading...
Unable to load recommendations.
Follow Us