ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: ಪ್ರತ್ಯೇಕ ಪ್ರಕರಣಗಳಲ್ಲಿ 5.48 ಕೆಜಿ ಎಂಡಿಎಂಎ ವಶ; 6 ಮಂದಿ ಬಂಧನ

ಬೆಂಗಳೂರಿನ ಗಿರಿನಗರ, ಹೆಬ್ಬಾಳ ಹಾಗೂ ವಿದ್ಯಾರಣ್ಯಪುರ ಪೊಲೀಸರು ನಡೆಸಿದ ಪ್ರತ್ಯೇಕ ದಾಳಿಗಳಲ್ಲಿ ₹5.48 ಕೋಟಿ ಮೌಲ್ಯದ 5.48 ಕೆಜಿ ಎಂಡಿಎಂಎ ವಶಪಡಿಸಿಕೊಳ್ಳಲಾಗಿದ್ದು, ವಿದೇಶಿ ಪ್ರಜೆ ಸೇರಿದಂತೆ ಆರು ಮಂದಿ ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ಬೆಂಗಳೂರು ನಗರ ಪೊಲೀಸರು 79.5 ಕೆಜಿ ಎಂಡಿಎಂಎ ಹಾಗೂ 1,000 ಎಕ್ಸ್‌ಟಸಿ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ 161 ಕೋಟಿ ರೂಪಾಯಿ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: ಪ್ರತ್ಯೇಕ ಪ್ರಕರಣಗಳಲ್ಲಿ 5.48 ಕೆಜಿ ಎಂಡಿಎಂಎ ವಶ; 6 ಮಂದಿ ಬಂಧನ
ಸಾಂದರ್ಭಿಕ ಚಿತ್ರ
Image Credit source: Getty Images

Updated on: Sep 29, 2026 | 5:33 PM

ಬೆಂಗಳೂರು, ಸೆಪ್ಟೆಂಬರ್​​ 29: ಮಾದಕವಸ್ತು ಜಾಲಕ್ಕೆ ಬೆಂಗಳೂರು ಪೊಲೀಸರು ಭರ್ಜರಿ ಶಾಕ್​​ ಕೊಟ್ಟಿದ್ದಾರೆ. ಗಿರಿನಗರ, ಹೆಬ್ಬಾಳ ಮತ್ತು ವಿದ್ಯಾರಣ್ಯಪುರ ಪೊಲೀಸರು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ 5.48 ಕೆಜಿ ಎಂಡಿಎಂಎ ವಶಪಡಿಸಿಕೊಂಡಿದ್ದು, ಇದರ ಮೌಲ್ಯ ಸುಮಾರು 5.48 ಕೋಟಿ ರೂಪಾಯಿ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಿ ಪ್ರಜೆ ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಮೂವರು ಇತರ ರಾಜ್ಯಗಳಿಗೆ ಸೇರಿದವರಾಗಿದ್ದಾರೆ. ಗಿರಿನಗರ ಪೊಲೀಸರು 4.320 ಕೆಜಿ ಎಂಡಿಎಂಎ, ಹೆಬ್ಬಾಳ ಪೊಲೀಸರು 1.054 ಕೆಜಿ ಮತ್ತು ವಿದ್ಯಾರಣ್ಯಪುರ ಪೊಲೀಸರು 106 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

ಮೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಮಾಹಿತಿ ಆಧರಿಸಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು, ಮಾಹಿತಿ ನೀಡಿದವರ ಸುಳಿವಿನ ಮೇರೆಗೆ ಗುರುತಿಸಲಾದ ಸ್ಥಳಗಳಲ್ಲಿ ಪೊಲೀಸ್ ತಂಡಗಳು ದಾಳಿ ನಡೆಸಿದ್ದವು. ಬಂಧಿತ ಆರು ಆರೋಪಿಗಳು ವಿದೇಶ, ಇತರ ರಾಜ್ಯಗಳು ಹಾಗೂ ಕರ್ನಾಟಕದ ವಿವಿಧ ಭಾಗಗಳಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಖರೀದಿಸಿ, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ

4 ತಿಂಗಳಲ್ಲಿ 79.5 ಕೆಜಿ ಎಂಡಿಎಂಎ ವಶ

ಮಾಧ್ಯಮಗಳೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಕಳೆದ ನಾಲ್ಕು ತಿಂಗಳಲ್ಲಿ ಬೆಂಗಳೂರು ನಗರ ಪೊಲೀಸರು 79.5 ಕೆಜಿ ಎಂಡಿಎಂಎ ಹಾಗೂ 1,000 ಎಕ್ಸ್‌ಟಸಿ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ 161 ಕೋಟಿ ರೂಪಾಯಿ ಎಂದು ತಿಳಿಸಿದ್ದಾರೆ. ಏಪ್ರಿಲ್‌ನಲ್ಲಿ ಆರಂಭಗೊಂಡು ಸೆಪ್ಟೆಂಬರ್‌ವರೆಗೆ ಮುಂದುವರಿದ ಈ ಕಾರ್ಯಾಚರಣೆಯಲ್ಲಿ 36 ಪೊಲೀಸ್ ತಂಡಗಳು ಹಾಗೂ ಸುಮಾರು 140 ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು. ಕಾರ್ಯಾಚರಣೆಯಲ್ಲಿ 18.6 ಲಕ್ಷ ರೂಪಾಯಿ ನಗದು, 43 ಮೊಬೈಲ್ ಫೋನ್‌ಗಳು, ಎರಡು ಕಾರುಗಳು ಮತ್ತು ಎರಡು ದ್ವಿಚಕ್ರ ವಾಹನಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದವರು ಮಾಹಿತಿ ನೀಡಿದ್ದಾರೆ ಎಂದು ಡೆಕ್ಕನ್​​ ಹೆರಾಲ್ಡ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Loading...
Unable to load recommendations.
Follow Us