AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PWD ಕಚೇರಿಯಲ್ಲಿ ಮಳೆಗೆ ಮಹತ್ವದ ದಾಖಲೆಗಳು ನೀರುಪಾಲು! ಹಪ್ಪಳದಂತೆ ಫೈಲ್‌ಗಳನ್ನು ಒಣಗಿಸುತ್ತಿರುವ ಸಿಬ್ಬಂದಿ

ಬೆಂಗಳೂರಿನ ಕೆ.ಆರ್ ಸರ್ಕಲ್‌ನಲ್ಲಿರುವ ಪಿಡಬ್ಲ್ಯೂಡಿ ಕಚೇರಿಗೆ ಮಳೆ ನೀರು ನುಗ್ಗಿ, ಭೂಸ್ವಾಧೀನಕ್ಕೆ ಸಂಬಂಧಿಸಿದ ಕೋಟ್ಯಂತರ ರೂಪಾಯಿ ಮೌಲ್ಯದ ಪ್ರಮುಖ ದಾಖಲೆಗಳು ಹಾನಿಗೊಳಗಾಗಿವೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ನೆನೆದಿರುವ ಫೈಲ್‌ಗಳನ್ನು ಹಪ್ಪಳದಂತೆ ಕಚೇರಿ ಮುಂದೆ ಒಣಗಿಸುತ್ತಿರುವ ದೃಶ್ಯ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯ ಕುರಿತು ಸಮಗ್ರ ತನಿಖೆಗೆ ಒತ್ತಾಯ ಕೇಳಿಬಂದಿದೆ.

PWD ಕಚೇರಿಯಲ್ಲಿ ಮಳೆಗೆ ಮಹತ್ವದ ದಾಖಲೆಗಳು ನೀರುಪಾಲು! ಹಪ್ಪಳದಂತೆ ಫೈಲ್‌ಗಳನ್ನು ಒಣಗಿಸುತ್ತಿರುವ ಸಿಬ್ಬಂದಿ
PWD ಕಚೇರಿಯಲ್ಲಿ ಮಳೆಗೆ ಮಹತ್ವದ ದಾಖಲೆಗಳು ನೀರುಪಾಲು!
ಭಾವನಾ ಹೆಗಡೆ
| Edited By: |

Updated on:May 10, 2026 | 3:24 PM

Share

ಬೆಂಗಳೂರು, ಮೇ 10: ಸರ್ಕಾರಿ ಕಚೇರಿಗಳಲ್ಲಿನ ಕಡತಗಳ ಸಂರಕ್ಷಣೆ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದ್ದರೂ, ಬೆಂಗಳೂರಿನ (Bengaluru) ಕೆ.ಆರ್. ಸರ್ಕಲ್‌ನಲ್ಲಿರುವ ಲೋಕೋಪಯೋಗಿ ಇಲಾಖೆ (PWD) ಕಚೇರಿಯಲ್ಲಿ ಅಧಿಕಾರಿಗಳ ಭಾರೀ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ಮಳೆ ನೀರಿನಿಂದಾಗಿ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಯಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ವ್ಯವಹಾರಗಳಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳು ನೀರು ಪಾಲಾಗಿವೆ.

ಮುಖ್ಯಾಂಶಗಳು

  • ಬೆಂಗಳೂರಿನ ಪಿಡಬ್ಲ್ಯೂಡಿ ಕಚೇರಿಗೆ ಮಳೆ ನೀರು ನುಗ್ಗಿ ಮಹತ್ವದ ದಾಖಲೆಗಳು ಹಾನಿ.
  • ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಯಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಭೂಸ್ವಾಧೀನ ಮತ್ತು ಪರಿಹಾರದ ಕಡತಗಳು ನೀರು ಪಾಲು.
  • ಒದ್ದೆಯಾಗಿರುವ ಸರ್ಕಾರಿ ಫೈಲ್‌ಗಳನ್ನು ಹಪ್ಪಳದಂತೆ ಕಚೇರಿ ಮುಂದೆ ಒಣಗಿಸುತ್ತಿರುವ ಅಧಿಕಾರಿಗಳು

ಅಧಿಕಾರಿಗಳ ಎಡವಟ್ಟು

ಕಳೆದ ಕೆಲವು ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ನೆಲಮಹಡಿಯಲ್ಲಿರುವ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಗೆ ನೀರು ನುಗ್ಗಿತ್ತು. ಈ ಸಂದರ್ಭದಲ್ಲಿ ಭೂಸ್ವಾಧೀನ ಮತ್ತು ಪರಿಹಾರಕ್ಕೆ ಸಂಬಂಧಿಸಿದ ಪ್ರಮುಖ ಕಡತಗಳು ಸಂಪೂರ್ಣವಾಗಿ ಒದ್ದೆಯಾಗಿವೆ. ದಾಖಲೆಗಳ ಮಹತ್ವ ಅರಿತೂ ಅವುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸದ ಅಧಿಕಾರಿಗಳ ಬೇಜವಾಬ್ದಾರಿತನವೇ ಈ ಎಡವಟ್ಟಿಗೆ ಕಾರಣ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ D. Sudhakar Passes Away: ಸಚಿವ ಡಿ. ಸುಧಾಕರ್ ನಿಧನ, ಅನಾರೋಗ್ಯದಿಂದ ಬಳಲುತ್ತಿದ್ದ ನಾಯಕ ಇನ್ನಿಲ್ಲ

ಸಾರ್ವಜನಿಕರ ಆಕ್ರೋಶ

ಪ್ರಸ್ತುತ ಹಾನಿಗೊಳಗಾದ ಫೈಲ್‌ಗಳನ್ನು ಕಚೇರಿಯ ಮುಂಭಾಗದಲ್ಲಿ ಹಪ್ಪಳ ಒಣಗಿಸುವ ರೀತಿಯಲ್ಲಿ ಬಿಸಿಲಿಗೆ ಹಾಕಲಾಗಿದೆ. ದಾಖಲೆಗಳಲ್ಲಿನ ಬರಹಗಳು ಮತ್ತು ಟಿಪ್ಪಣಿಗಳು ಅಳಿಸಿ ಹೋಗಿರುವ ಆತಂಕವಿದ್ದು, ಆಡಳಿತ ವ್ಯವಸ್ಥೆಯ ಈ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಟ್ಯಂತರ ರೂಪಾಯಿ ಮೊತ್ತದ ವ್ಯವಹಾರಗಳ ಮಾಹಿತಿಯುಳ್ಳ ಈ ದಾಖಲೆಗಳ ನಾಶದ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.

ವರದಿ: ಲಕ್ಷ್ಮಿ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:22 am, Sun, 10 May 26

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More