Makar Sankranti: ಗವಿ ಗಂಗಾಧರೇಶ್ವರ ದೇಗುಲದಲ್ಲಿ ಕೌತುಕಕ್ಕೆ ಕ್ಷಣಗಣನೆ, ಭಕ್ತರ ಪ್ರವಾಹ

ಕ್ಯಾಲೆಂಡರ್ ಹೊಸ ವರ್ಷದ ಮೊದಲ ಮೊದಲ ಹಬ್ಬ ಮಕರ ಸಂಕ್ರಾಂತಿಯನ್ನು ರಾಜ್ಯದಾದ್ಯಂತ ಇಂದು (ಸೋಮವಾರ) ಆಚರಿಸಲಾಗುತ್ತಿದ್ದು, ಬೆಂಗಳೂರಿನ ಗವಿಪುರದಲ್ಲಿರುವ ಗವಿಗಂಗಾಧರ ದೇವಸ್ಥಾನ ವಿಶೇಷ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ. ಸೂರ್ಯರಶ್ಮಿಯು ದೇಗುಲದ ಶಿವ ಲಿಂಗವನ್ನು ಸ್ಪರ್ಶಿಸುವ ವಿಶೇಷ ಕೌತುಕಕ್ಕೆ ಕ್ಷಣಗಣನೆ ಆರಂಭವಾಗಿದೆ.

Makar Sankranti: ಗವಿ ಗಂಗಾಧರೇಶ್ವರ ದೇಗುಲದಲ್ಲಿ ಕೌತುಕಕ್ಕೆ ಕ್ಷಣಗಣನೆ, ಭಕ್ತರ ಪ್ರವಾಹ
ಗವಿ ಗಂಗಾಧರೇಶ್ವರ
Follow us
TV9 Web
| Updated By: Ganapathi Sharma

Updated on:Jan 15, 2024 | 7:10 AM

ಬೆಂಗಳೂರು, ಜನವರಿ 15: ಕ್ಯಾಲೆಂಡರ್ ಹೊಸ ವರ್ಷದ ಮೊದಲ ಮೊದಲ ಹಬ್ಬ ಮಕರ ಸಂಕ್ರಾಂತಿಯನ್ನು (Makar Sankranti) ರಾಜ್ಯದಾದ್ಯಂತ ಇಂದು (ಸೋಮವಾರ) ಆಚರಿಸಲಾಗುತ್ತಿದ್ದು, ಬೆಂಗಳೂರಿನ ಗವಿಪುರದಲ್ಲಿರುವ ಗವಿಗಂಗಾಧರ ದೇವಸ್ಥಾನ (Shri Gavi Gangadhareshwara Swamy Devasthana) ವಿಶೇಷ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ. ಸೂರ್ಯರಶ್ಮಿಯು ದೇಗುಲದ ಶಿವ ಲಿಂಗವನ್ನು ಸ್ಪರ್ಶಿಸುವ ವಿಶೇಷ ಕೌತುಕಕ್ಕೆ ಕ್ಷಣಗಣನೆ ಆರಂಭವಾಗಿದೆ.

ಸೂರ್ಯ ದಕ್ಷಿಣಪಥದಿಂದ ಉತ್ತರಕ್ಕೆ ಪಥ ಸಂಚಲನ ಮಾಡುವ ವೇಳೆ ಸೂರ್ಯ ಕಿರಣವು ಶಿವ ಲಿಂಗವನ್ನು ಸ್ಪರ್ಶಿಸಲಿದೆ. ಹೀಗಾಗಿ ಇಂದು ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತಿದೆ. ಬೆಳ್ಳಗ್ಗೆ 5 ಗಂಟೆಯಿಂದಲೇ ಗಂಗಾಧರನಿಗೆ ವಿಶೇಷ ಪೂಜೆ ಆರಂಭವಾಗಿದೆ. ಗಂಗಾಧರನಿಗೆ ಪಂಚಾಭೀಷೇಕ, ಪುಷ್ಪಾಭಿಷೇಕ, ಮಹಮಂಗಳಾರತಿ‌ ಮಾಡಿದ ನಂತರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.

ವಿಶೇಷ ವಿದ್ಯಮಾನವನ್ನು ಕಣ್ತುಂಬಿಕೊಳ್ಳಲಿರುವ ಭಕ್ತರು ಕಾತರಿದಿಂದ ಇದ್ದು, ಸಾವಿರಾರು ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಬರುವ ನಿರೀಕ್ಷೆ ಇದೆ. ಹಬ್ಬದ ಹಿನ್ನೆಲೆ ಮುಂಜಾನೆಯಿಂದಲೇ ದೇಗುಲಕ್ಕೆ ಭಕ್ತಸಾಗರ ಹರಿದುಬರುತ್ತಿದೆ.

ಇದನ್ನೂ ಓದಿ: Makar Sankranti 2024: ಮಕರ ಸಂಕ್ರಾಂತಿ ಹಬ್ಬದ ಆಚರಣೆ ಹೇಗಿರಬೇಕು ಗೊತ್ತಾ?

ಸೂರ್ಯ ರಶ್ಮಿ ಗಂಗಾಧರೇಶ್ವರನ ಸ್ಪರ್ಶಿಸುವುದು ಎಷ್ಟೊತ್ತಿಗೆ?

ಸಂಜೆ 5.20 ರಿಂದ 5.23 ನಿಮಿಷದ ವರೆಗೆ ಸೂರ್ಯರಶ್ಮಿ ಗವಿ ಗಂಗಾಧರೇಶ್ವರ ಲಿಂಗ ಸ್ಪರ್ಶಿಸಲಿದೆ. ಲಿಂಗಭಾಗದಲ್ಲಿ ಎಷ್ಟು ಸಮಯ ಸೂರ್ಯರಶ್ಮಿ ಇರುತ್ತದೆ ಎಂಬುದನ್ನು ನೋಡಿಕೊಂಡು ಅದರ ಆಧಾರದಲ್ಲಿ ನಂತರ ಭವಿಷ್ಯ ಹೇಳಲಾಗುತ್ತದೆ.

ದೇವರ ದರ್ಶನದ ಸಮಯ ವಿವರ

ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ದೇವಸ್ಥಾನ ಭಕ್ತರಿಗೆ ಮುಕ್ತವಾಗಿರಲಿದೆ. ಬಳಿಕ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿರುದಿಲ್ಲ. ಸಂಜೆ ಸೂರ್ಯರಶ್ಮಿ ಲಿಂಗವನ್ನು ಸ್ಮರ್ಶಿಸಿದ ನಂತರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಭಕ್ತರು ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇವಾಲಯದ ಹೊರಭಾಗದಲ್ಲಿ ಎಲ್ಇಡಿ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿದೆ. 2 ಎಲ್ಇಡಿ ಹಾಗೂ 5 ಟಿವಿಗಳ ವ್ಯವಸ್ಥೆ ಮಾಡಲಾಗಿದೆ. ದೇವರನ್ನು ಸೂರ್ಯರಶ್ಮಿ ಸ್ಪರ್ಶಿಸುವ ವೇಳೆ ಅರ್ಚಕರನ್ನು ಬಿಟ್ಟರೆ ಇನ್ನುಳಿದ ಯಾರಿಗೂ ದೇವಸ್ಥಾನ ಒಳ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ.

ಮುಂಜಾನೆಯಿಂದಲೇ ಭಕ್ತರ ದಂಡು

ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ಆರಂಭವಾಗಿದ್ದು, ಮುಂಜಾನೆಯಿಂದಲೇ ಭಕ್ತರ ದಂಡು ಹರಿದುಬರುತ್ತಿದೆ. ಸರಧಿ ಸಾಲಿನಲ್ಲಿ‌ ನಿಂತು ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ.

ಕೆಆರ್​​ ಮಾರುಕಟ್ಟೆಯಲ್ಲಿ ಜನಜಂಗುಳಿ

ಸಂಕ್ರಾಂತಿ ಹಬ್ಬದ ಹಿನ್ನಲೆಯಲ್ಲಿ ನಗರದ ಕೆ.ಆರ್. ಮಾರ್ಕೆಟ್​​​ನಲ್ಲಿ ಜನಸಂದಣಿ ಹೆಚ್ಚಾಗಿದೆ. ಬೆಂಗಳೂರಿಗರು ಹೆಚ್ಚಿನ ಸಂಖ್ಯೆಯಲ್ಲಿ ಹೂವು, ಹಣ್ಣು ಖರೀದಿಯಲ್ಲಿ ತೊಡಗಿದ್ದಾರೆ. ಫ್ಲೈ ಓವರ್ ಮೇಲೆ ಯಾವುದೇ ವಾಹನಗಳ ಪಾರ್ಕಿಂಗ್​​ಗೆ ಅವಕಾಶ ನೀಡಲಾಗುತ್ತಿಲ್ಲ. ಇಲ್ಲಿ ಪ್ರತಿಬಾರಿ ಹಬ್ಬ-ಹರಿದಿನಗಳಲ್ಲಿ ಅನಧಿಕೃತ ಪಾರ್ಕಿಂಗ್ ಮಾಡ್ತಿದ್ದರು. ಈ ಬಾರಿ ಪಾರ್ಕಿಂಗ್​​ಗೆ ಸಂಚಾರಿ ಪೊಲೀಸರು ಅವಕಾಶ ನೀಡಿಲ್ಲ. ಫ್ಲೈ ಓವರ್ ಮೇಲೆ ಸುಗಮ ಸಂಚಾರಕ್ಕೆ ಅಡಚಣೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:03 am, Mon, 15 January 24

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ