ಅ.30 ರಿಂದ ಬೆಂಗಳೂರಿನಿಂದ ಮಾಲ್ಡೀವ್ಸ್​ನ ಮಾಲೆಗೆ ನೇರ ವಿಮಾನ

ಹಿಂದೂ ಮಹಾಸಾಗರದಲ್ಲಿರುವ ದ್ವೀಪ ರಾಷ್ಟ್ರವಾದ ಮಾಲ್ಡೀವ್ಸ್‌ನ ರಾಜಧಾನಿ ಮಾಲೆಯಿಂದ ಬೆಂಗಳೂರಿಗೆ ಹಾಗೂ ಬೆಂಗಳೂರಿನಿಂದ ಮಾಲೆಗೆ ನೇರ ವಿಮಾನ ಸೇವೆ ಅಕ್ಟೋಬರ್ 30 ರಿಂದ ಆರಂಭವಾಗಲಿದೆ. ಬೆಂಗಳೂರಿಗೆ ಮೊದಲ ಮಾಲ್ಡೀವ್ಸ್ ವಿಮಾನ ಬೆಳಿಗ್ಗೆ 9.35 ಕ್ಕೆ ಮಾಲೆಯ ವೇಲಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಅದೇ ದಿನ ಮಧ್ಯಾಹ್ನ 12.15 ರ ಸುಮಾರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪುವ ನಿರೀಕ್ಷೆಯಿದೆ.

ಅ.30 ರಿಂದ ಬೆಂಗಳೂರಿನಿಂದ ಮಾಲ್ಡೀವ್ಸ್​ನ ಮಾಲೆಗೆ ನೇರ ವಿಮಾನ
ಅ.30 ರಿಂದ ಬೆಂಗಳೂರಿನಿಂದ ಮಾಲ್ಡೀವ್ಸ್​ನ ಮಾಲೆಗೆ ನೇರ ವಿಮಾನ
Image Credit source: spooh/iStock
Rakesh Nayak Manchi

Updated on: Oct 13, 2023 | 8:45 AM

ಬೆಂಗಳೂರು, ಅ.13: ಹಿಂದೂ ಮಹಾಸಾಗರದಲ್ಲಿರುವ ದ್ವೀಪ ರಾಷ್ಟ್ರವಾದ ಮಾಲ್ಡೀವ್ಸ್‌ನ (Maldives) ರಾಜಧಾನಿ ಮಾಲೆಯಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾಗೂ ಬೆಂಗಳೂರಿನಿಂದ (Bengaluru) ಮಾಲೆಗೆ ನೇರ ವಿಮಾನ ಸೇವೆ ಅಕ್ಟೋಬರ್ 30 ರಿಂದ ಆರಂಭವಾಗಲಿದೆ. ಪ್ರತಿ ಸೋಮವಾರ ಮತ್ತು ಗುರುವಾರದಂದು ವಿಮಾನ ಸೇವೆ ಇರಲಿದೆ.

ಬೆಂಗಳೂರಿಗೆ ಮೊದಲ ಮಾಲ್ಡೀವ್ಸ್ ವಿಮಾನ ಸೋಮವಾರ (ಅಕ್ಟೋಬರ್ 30) ಬೆಳಿಗ್ಗೆ 9.35 ಕ್ಕೆ ಮಾಲೆಯ ವೇಲಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಅದೇ ದಿನ ಮಧ್ಯಾಹ್ನ 12.15 ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನಿಂದ ಮೊದಲ ವಿಮಾನ ಅದೇ ದಿನ ಮಧ್ಯಾಹ್ನ 1.15 ಕ್ಕೆ ಹೊರಟು ಮಧ್ಯಾಹ್ನ 2.50ರ ಸುಮಾರಿಗೆ ಮಾಲೆ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಅ.19 ರಿಂದ ಮಂಗಳೂರಿನಿಂದ ಹೈದರಾಬಾದ್​ಗೆ ಹೊಸ ಇಂಡಿಗೋ ವಿಮಾನ ಹಾರಾಟ

ಏರ್​ಬಸ್ ಎ 320 ವಿಮಾನವು 138 ಸೀಟುಗಳು (ಎಕಾನಮಿ) ಮತ್ತು 14 ಸೀಟುಗಳೊಂದಿಗೆ (ಪ್ರೀಮಿಯಂ ಎಕಾನಮಿ ಕ್ಲಾಸ್) ಕಾರ್ಯನಿರ್ವಹಿಸಲಿದೆ. ಮಾಲ್ಡೀವ್ಸ್ ವಿಮಾನದ ಬುಕಿಂಗ್ ಅಧಿಕೃತ ವೆಬ್​ಸೈಟ್​ ಮತ್ತು ಇತರ ಬುಕಿಂಗ್ ಪಾಲುದಾರರ ಮೂಲಕ ಮಾಡಬಹುದಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us