AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖರ್ಗೆ ಟ್ರಸ್ಟ್‌ಗೆ ಭೂಮಿ ಹಂಚಿಕೆ ಕೇಸ್​: ವಿಚಾರಣೆ ರದ್ದುಪಡಿಸಿ ತನಿಖೆ ಪರಿಶೀಲನೆಗೆ ಹೈಕೋರ್ಟ್ ಆದೇಶ

ಮಲ್ಲಿಕಾರ್ಜುನ ಖರ್ಗೆ ಅವರ ಟ್ರಸ್ಟ್‌ಗೆ ಬಿಡಿಎ ಮತ್ತು ಕೆಐಎಡಿಬಿ ಭೂಮಿ ಹಂಚಿಕೆ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕೆಳ ನ್ಯಾಯಾಲಯದ ವಿಚಾರಣೆಯನ್ನು ರದ್ದುಗೊಳಿಸಿ, ದೂರುದಾರರು ಪ್ರಮಾಣಪತ್ರದಲ್ಲಿನ ದೋಷಗಳನ್ನು ಸರಿಪಡಿಸಲು ಅವಕಾಶ ನೀಡಿದೆ. ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತನಿಖೆ ಕುರಿತು ನಿರ್ಧರಿಸುವಂತೆ ಸೂಚಿಸಿದೆ.

ಖರ್ಗೆ ಟ್ರಸ್ಟ್‌ಗೆ ಭೂಮಿ ಹಂಚಿಕೆ ಕೇಸ್​: ವಿಚಾರಣೆ ರದ್ದುಪಡಿಸಿ ತನಿಖೆ ಪರಿಶೀಲನೆಗೆ ಹೈಕೋರ್ಟ್ ಆದೇಶ
ಖರ್ಗೆ ಟ್ರಸ್ಟ್​ಗೆ ಭೂಮಿ ಹಂಚಿಕೆ ಪ್ರಕರಣImage Credit source: tv9 kannada
ರಮೇಶ್​ ಎಮ್​.
| Edited By: |

Updated on:Sep 08, 2026 | 9:41 PM

Share

ಬೆಂಗಳೂರು, ಸೆಪ್ಟೆಂಬರ್​ 08: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (ಬಿಡಿಎ) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಸಿದ್ಧಾರ್ಥ ವಿಹಾರ ಟ್ರಸ್ಟ್​ಗೆ ಭೂಮಿ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶವೊಂದನ್ನು ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ 223 ರ ಅಡಿಯಲ್ಲಿ ನಡೆಸುತ್ತಿದ್ದ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ.

ಪ್ರಮಾಣಪತ್ರ ದೋಷ ತಿದ್ದಲು ಅವಕಾಶ

ದೂರುದಾರ ವಿಜಯರಾಘವ ಮರಾಠೆ ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ‘ಪ್ರಮಾಣಪತ್ರದಲ್ಲಿನ ದೋಷಗಳನ್ನು ಸರಿಪಡಿಸಲು ದೂರುದಾರರಿಗೆ ಸೂಕ್ತ ಅವಕಾಶ ನೀಡಬೇಕು ಮತ್ತು ಆ ಬಳಿಕ ತನಿಖೆ ಕುರಿತು ನಿಯಮಾನುಸಾರ ತೀರ್ಮಾನ ಕೈಗೊಳ್ಳಬೇಕು’ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಸೂಕ್ತ ಮತ್ತು ಕಾನೂನಾತ್ಮಕ ಕಾರ್ಯವಿಧಾನವನ್ನು ಅನುಸರಿಸುವ ಮೂಲಕ ಪ್ರಕರಣದ ನ್ಯಾಯಿಕ ಪ್ರಕ್ರಿಯೆ ಮುಂದುವರೆಸುವಂತೆ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

ಭ್ರಷ್ಟಾಚಾರ ಸಾಬೀತಿಗೆ ತನಿಖೆ ಅಗತ್ಯ ಎಂದ ಹೈಕೋರ್ಟ್

ಅರ್ಜಿಯ ವಿಚಾರಣೆ ವೇಳೆ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ‘ಭ್ರಷ್ಟಾಚಾರದಂತಹ ಗಂಭೀರ ಆರೋಪಗಳಲ್ಲಿ ಸಾಕ್ಷ್ಯ ಸಂಗ್ರಹಿಸಲು ಸೂಕ್ತ ತನಿಖೆಯಿಂದ ಮಾತ್ರ ಸಾಧ್ಯ’ ಎಂದು ತಿಳಿಸಿದೆ.

LIVE TV

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ​ ‘ಈ ಹಿಂದೆ ಲೋಕಾಯುಕ್ತ ಪೊಲೀಸರಿಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದರೂ ಅವರು ಯಾವುದೇ ಕ್ರಮ ಕೈಗೊಂಡಿರಲಿಲ್ಲ’ ಎಂದು ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲೆ ಲಕ್ಷ್ಮಿ ಐಯ್ಯಂಗಾರ್​​ ವಾದ ಮಂಡಿಸಿದ್ದರು.

ಏನಿದು ಪ್ರಕರಣ?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅವರ ಪತ್ನಿ ರಾಧಾಬಾಯಿ ಖರ್ಗೆ, ಪುತ್ರರಾದ ಪ್ರಿಯಾಂಕ್ ಖರ್ಗೆ, ರಾಹುಲ್ ಖರ್ಗೆ, ಅಳಿಯ ರಾಧಾಕೃಷ್ಣ ಹಾಗೂ ಸಚಿವ ಎಂ.ಬಿ. ಪಾಟೀಲ್ ವಿರುದ್ಧ ದೂರು ದಾಖಲಾಗಿತ್ತು. ಪರಿಶಿಷ್ಟ ಜಾತಿಯ ಟ್ರಸ್ಟ್ ಎಂಬ ಹೆಸರಿನಲ್ಲಿ ಶೇಕಡ 50 ರಷ್ಟು ರಿಯಾಯಿತಿ ಪಡೆದು, ತಮ್ಮದೇ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಅನುಚಿತ ಲಾಭ ಮಾಡಿಕೊಡಲು ಯತ್ನಿಸಲಾಗಿದೆ ಎಂಬುದು ಪ್ರಮುಖ ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ: ಖರ್ಗೆ ಟ್ರಸ್ಟ್‌ಗೆ ಭೂಮಿ ಹಂಚಿಕೆ ಕೇಸ್​: ಕ್ರಮಕೈಗೊಳ್ಳದ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಶಾಕ್

ಏರೋಸ್ಪೇಸ್ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಯಾವುದೇ ಪೂರ್ವಾನುಭವ ಇಲ್ಲದಿದ್ದರೂ ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್‌ನಲ್ಲಿ ಸಿಎ ನಿವೇಶನ ಮಂಜೂರು ಮಾಡಲಾಗಿದೆ ಮತ್ತು ಬೆಂಗಳೂರಿನ ಬಿಟಿಎಂ ಬಡಾವಣೆಯಲ್ಲಿ 2 ಎಕರೆ ಬಿಡಿಎ ಜಮೀನನ್ನು ಶೇ. 50 ರಷ್ಟು ಸಬ್ಸಿಡಿ ನೀಡಿ ಹಂಚಿಕೆ ಮಾಡಲಾಗಿತ್ತು ಎಂದು ದೂರಲಾಗಿತ್ತು. ಈ ವಿವಾದ ಭುಗಿಲೇಳುತ್ತಿದ್ದಂತೆ ಟ್ರಸ್ಟ್ ಜಮೀನನ್ನು ಮರಳಿ ಸರ್ಕಾರಕ್ಕೆ ಹಿಂತಿರುಗಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:39 pm, Tue, 8 September 26

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ