ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರಷ್ಟು ಮೀಸಲಾತಿಯನ್ನು ‘ಸುಪ್ರೀಂ’ ಕೋರ್ಟ್ ಎತ್ತಿ ಹಿಡಿದಿದ್ದು ಸ್ವಾಗತಾರ್ಹ : ಮಲ್ಲಿಕಾರ್ಜುನ ಖರ್ಗೆ
ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿಯನ್ನು ಸುಪ್ರಿಂ ಕೋರ್ಟ್ ಎತ್ತಿ ಹಿಡಿದಿರುವುದು ಸ್ವಾಗತಾರ್ಹ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ
ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿ ಒದಗಿಸುವ ಕೇಂದ್ರ ಸರ್ಕಾರದ ಕಾನೂನನ್ನು (Economically Weaker Sections EWS) ಸುಪ್ರೀಂಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮಾತನಾಡಿ ಮೀಸಲಾತಿಗೆ ಸಂಸತ್‌ನಲ್ಲಿ ನಾವೆಲ್ಲಾ ಒಮ್ಮತದಿಂದ ಒಪ್ಪಿಗೆ ನೀಡಿದ್ದೆವು. ಮೀಸಲಾತಿಯನ್ನು ‘ಸುಪ್ರೀಂ’ ಕೋರ್ಟ್ (Supreme Court) ಎತ್ತಿ ಹಿಡಿದಿದೆ, ಸ್ವಾಗತಿಸುತ್ತೇವೆ ಎಂದು ಸಂತಸ ವ್ಯಕ್ತಪಡಿಸಿದರು.
ಅರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರ ಮೀಸಲಾತಿ
ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿ ಒದಗಿಸುವ ಕೇಂದ್ರ ಸರ್ಕಾರದ ಕಾನೂನನ್ನು (Economically Weaker Sections EWS) ಸುಪ್ರೀಂಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿ ಒದಗಿಸುವುದಕ್ಕೆ ಸಂಬಂಧಿಸುವ ಕಾನೂನಿನ ಸಿಂಧುತ್ವಕ್ಕೆ ಸಂಬಂಧಿಸಿದ ಹಲವು ವಿಚಾರಗಳನ್ನು ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಪರಿಶೀಲಿಸಿತು.
ಐವರು ನ್ಯಾಯಮೂರ್ತಿಗಳಿದ್ದ ನ್ಯಾಯಪೀಠದಲ್ಲಿ ನಾಲ್ವರು ಮೀಸಲಾತಿ ಪರವಾಗಿ ಹಾಗೂ ಒಬ್ಬರು ಭಿನ್ನಮತದ ತೀರ್ಪು ನೀಡಿದರು. ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ, ತ್ರಿವೇದಿ, ಫಾರ್ದಿವಾಲ, ಯು.ಯು.ಲಲಿತ್ ಮೀಸಲಾತಿ ಪರವಾಗಿ ತೀರ್ಪು ಕೊಟ್ಟರು. ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಭಿನ್ನಮತ ತೀರ್ಪು ನೀಡಿದರು. ಆರ್ಥಿಕ ಮಾನದಂಡಗಳನ್ನು ಆಧರಿಸಿದ ಮೀಸಲಾತಿ ನಿಯಮಗಳನ್ನು ರೂಪಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆಯೇ? ಹೀಗೆ ಮಾಡಿದರೆ ಸಂವಿಧಾನದ 103ನೇ ತಿದ್ದುಪಡಿಯು ಸಂವಿಧಾನದ ಮೂಲ ಆಶಯದ ಉಲ್ಲಂಘನೆಯಾಗುತ್ತದೆಯೇ? ಖಾಸಗಿ ಸಂಸ್ಥೆಗಳಿಗೆ ನೇಮಕಾತಿ ಅಥವಾ ದಾಖಲಾತಿಗೆ ಸಂಬಂಧಿಸಿದ ವಿಚಾರದಲ್ಲಿ ನಿರ್ದೇಶನ ನೀಡಲು ಸರ್ಕಾರಗಳಿಗೆ ವಿಶೇಷ ಅಧಿಕಾರ ನೀಡಲು ಅವಕಾಶವಿದೆಯೇ ಎಂಬ ಅಂಶಗಳನ್ನೂ ನ್ಯಾಯಾಲಯವು ಪರಿಶೀಲನೆಗೆ ಒಳಪಡಿಸಿತು.
ಸಂವಿಧಾನದ 15 (6) ಮತ್ತು 16 (6) 103ನೇ ತಿದ್ದುಪಡಿಯ ಅನ್ವಯ ಉದ್ಯೋಗ ಮತ್ತು ಶಿಕ್ಷಣದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರ ಮೀಸಲಾತಿ ನೀಡಲು ಅನುವು ಮಾಡಿಕೊಳ್ಳಲಾಯಿತು. ಪರಿಶಿಷ್ಟ ಜಾತಿ (ಎಸ್ಸಿ), ಪರಿಶಿಷ್ಟ ವರ್ಗ (ಎಸ್ಟಿ) ಮತ್ತು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರದ ವ್ಯಕ್ತಿಗಳ ಕುಟುಂಬದ ವಾರ್ಷಿಕ ಆದಾಯವು ₹ 8 ಲಕ್ಷಕ್ಕೂ ಕಡಿಮೆಯಿದ್ದರೆ ಈ ಕಾನೂನಿನ ಅನ್ವಯ ಮೀಸಲಾತಿ ನೀಡಲು ಅವಕಾಶ ಸಿಗುತ್ತದೆ.
ಸಂವಿಧಾನದ 103ನೇ ತಿದ್ದುಪಡಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಪರಿಗಣಿಸಿದ ಮತ್ತೊಂದು ಅಂಶ ಶೇ 50ರ ಮೀಸಲಾತಿ ನಿಯಮ. 1992ರ ಇಂದ್ರಾ ಸಾಹ್ನಿ ಪ್ರಕರಣದಲ್ಲಿ (ಮಂಡಲ್ ಆಯೋಗ ಪ್ರಕರಣ) 9 ಸದಸ್ಯರಿದ್ದ ನ್ಯಾಯಪೀಠವು ಮೀಸಲಾತಿಯ ಒಟ್ಟು ಪ್ರಮಾಣ ಶೇ 50 ಮೀರಬಾರದು. ವಿಶೇಷ ಸಂದರ್ಭದಲ್ಲಿ ಈ ನಿರ್ಬಂಧಕ್ಕೆ ವಿನಾಯ್ತಿಯಿದೆ ಎಂದು ಹೇಳಿತ್ತು. ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನಿವೃತ್ತಿಗೆ ಒಂದು ದಿನ ಮೊದಲು ಈ ಮಹತ್ವದ ತೀರ್ಪು ಬಂದಿದೆ. ಲಲಿತ್ ಅವರು ನಾಳೆ (ನ 8) ನಿವೃತ್ತರಾಗಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ