AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಯರು ಸ್ನಾನ ಮಾಡುವುದನ್ನು ವಿಡಿಯೋ ಮಾಡುತ್ತಿದ್ದಾಗ ರೆಡ್​ಹ್ಯಾಂಡ್​ ಆಗಿ ತಗ್ಲಾಕೊಂಡ: ಕಾಮುಕನ ಮೊಬೈಲ್​ನಲ್ಲಿದ್ದವು 7 ಬೆಚ್ಚಿಬೀಳಿಸುವ ವಿಡಿಯೋಗಳು

ಪಿಜಿಯಲ್ಲಿ ಯುವತಿಯರು ಸ್ನಾನ ಮಾಡುತ್ತಿರುವನ್ನು ವಿಡಿಯೋ ಮಾಡುತ್ತಿದ್ದ ವಿಕೃತ ಕಾಮುಕ ರೆಡ್​ಹ್ಯಾಂಡ್​ ಆಗಿ ತಗ್ಲಾಕೊಂಡಿದ್ದು, ವಿಚಾರಣೆ ಆರೋಪಿಯ ಮೊಬೈಲ್​ನಲ್ಲಿ 7 ವಿಡಿಯೋಗಳು ಪತ್ತೆಯಾಗಿವೆ.

ಯುವತಿಯರು ಸ್ನಾನ ಮಾಡುವುದನ್ನು ವಿಡಿಯೋ ಮಾಡುತ್ತಿದ್ದಾಗ ರೆಡ್​ಹ್ಯಾಂಡ್​ ಆಗಿ ತಗ್ಲಾಕೊಂಡ: ಕಾಮುಕನ ಮೊಬೈಲ್​ನಲ್ಲಿದ್ದವು 7 ಬೆಚ್ಚಿಬೀಳಿಸುವ ವಿಡಿಯೋಗಳು
ಅಶೋಕ್, ಸಿಕ್ಕಿಬಿದ್ದ ಆರೋಪಿ
ರಮೇಶ್ ಬಿ. ಜವಳಗೇರಾ
|

Updated on:Jun 25, 2023 | 11:55 AM

Share

ಬೆಂಗಳೂರು: ಖಾಸಗಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಶೋಕ್ ಎನ್ನುವಾತ ಬೆಂಗಳೂರಿನ (Bengaluru) ಮಹದೇವಪುರ ಹೂಡಿಯಲ್ಲಿರುವ ಪಿಜಿನಲ್ಲಿ ವಾಸವಾಗಿದ್ದ. ಈತ ಸುತ್ತಮುತ್ತಲಿನ ಲೇಡಿಸ್ ಪಿಗಳನ್ನೇ ಹುಡುಕಿ ಯುವತಿಯರು ಸ್ನಾನ ಮಾಡುವುದನ್ನು ವಿಡಿಯೋ ಮಾಡುತ್ತಿದ್ದ. ಹೀಗೆ ಯುವತಿಯರ ಸ್ನಾನ ಮಾಡುವುದನ್ನು ವಿಡಿಯೋ ಮಾಡಿಕೊಂಡು ನೋಡುತ್ತ ತನ್ನ ಕಾಮದ ತೀಟೆ ತೀರಿಸಿಕೊಳ್ಳುತ್ತಿದ್ದ ಕಾಮಾಂಧ ಅಶೋಕ್​ ಇದೀಗ ರೆಡ್​ಹ್ಯಾಂಡ್​ ಆಗಿ ತಗ್ಲಾಕೊಂಡಿದ್ದಾನೆ. ಹೌದು… ಪಿಜಿಯಲ್ಲಿ ಯುವತಿಯರು ಸ್ನಾನ ಮಾಡುತ್ತಿರುವನ್ನು ವಿಡಿಯೋ ಮಾಡುತ್ತಿದ್ದ ವಿಕೃತ ಕಾಮುಕ ಚಿಕ್ಕಬಳ್ಳಾಪುರ ಮೂಲದ ಅಶೋಕ್ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಿನ ಮಹದೇವಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:  ಪಕ್ಕದ ಮನೆ ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡುತ್ತಿದ್ದಾಗ ಸಿಕ್ಕಿಬಿದ್ದ ಆಸಾಮಿ

ಖಾಸಗಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ವಿಭಾಗದಲ್ಲಿ ಕೆಲಸ ಮಾಡ್ತಿದ್ದ ಆರೋಪಿ ಅಶೋಕ್, ಮಹದೇವಪುರ ಹೂಡಿಯಲ್ಲಿರುವ ಪಿಜಿಯಲ್ಲಿ ವಾಸವಿದ್ದ. ಮುಂಭಾಗದಲ್ಲೇ ಇದ್ದ ಮಹಿಳಾ ಪಿಜಿಯ ಕಿಟಕಿಗಳ​ ಮೂಲಕ ವಿಡಿಯೋ ರೆಕಾರ್ಡ್​ ಮಾಡುತ್ತಿದ್ದ. ಸದ್ಯ ಕಾಮುಕನನ್ನು ಸ್ಥಳೀಯರು ಜೂನ್ 21ರಂದು ರೆಡ್​ಹ್ಯಾಂಡ್ ಆಗಿ ಹಿಡಿದು ಮಹದೇವಪುರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಅಶೋಕ್ ವಾಸ ಮಾಡುತ್ತಿದ್ದ ಪಿಜಿ ಮುಂಭಾಗದಲ್ಲೇ ಒಂದು ಲೇಡಿಸ್ ಪಿಜಿ ಇದೆ. ಈ ಲೇಡಿಸ್ ಪಿಜಿ ಸ್ನಾನದ ರೂಮ್​ ಅನ್ನೇ ನೋಡುತ್ತಾ ಕುಳಿತಿರುತ್ತಿದ್ದ ಅಶೋಕ್, ಯುವತಿಯತಿಯರು ಸ್ನಾನ ಮಾಡಲು ಬಾತ್​ ರೂಮ್​ಗೆ ಹೋಗುತ್ತಿದ್ದಂತೆಯೇ ಅಲರ್ಟ್ ಆಗುತ್ತಿದ್ದ. ವೆಂಟಿಲೇಷನ್ ಮೂಲಕ ಮೊಬೈಲ್ ನಲ್ಲಿ ಸ್ನಾನ ಮಾಡುತ್ತಿದ್ದ ವಿಡಿಯೋ ಚಿತ್ರೀಕರಣ ಮಾಡಿಕೊಳ್ಳುತ್ತಿದ್ದ. ಹೀಗೆ ತನ್ನ ವಿಕೃತನವನ್ನು ಮುಂದುವರಿಸಿದ್ದ ಆಶೋಕ್ ಜೂನ್​ 21ರಂದು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಆರೋಪಿ ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ಮಾಡಿದಾಗ ಆತನ ಮೊಬೈಲ್ ನಲ್ಲಿ 7 ಯುವತಿಯರ ಸ್ನಾನದ ವಿಡಿಯೋಗಳು ಇರುವುದು ಪತ್ತೆಯಾಗಿವೆ.

ಈ ಹಿಂದೆಯೂ ಇಂಥದ್ದೇ ಒಂದು ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಲೇಡಿಸ್​ ಪಿಜಿಯಲ್ಲಿ ವಾಸಿಸುವವರು ತುಂಬಾ ಎಚ್ಚರಿಕೆಯಿಂದ ಇರಬೇಕು. ಸ್ನಾನಕ್ಕೆ ಹೋಗುವಾಗ ಮುನ್ನ ಒಮ್ಮೆ ಬಾತ್​ರೂಮ್ ಕಿಟಕಿ ಸೇರಿದಂತೆ ಸುತ್ತಮುತ್ತ ಪರಿಶೀಲಿಸಿಕೊಳ್ಳುವುದು ಉತ್ತಮ. ಕೊಂಚ ಮೈಮರೆತರೂ ನಿಮ್ಮ ಖಾಸಗಿ ವಿಡಿಯೋಗಳು ಕಾಮುಕರ ಕೈ ಸೇರುವ ಸಾಧ್ಯತೆಗಳಿರುತ್ತವೆ.

Published On - 11:54 am, Sun, 25 June 23

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ