ಬೆಂಗಳೂರು: ಬಟ್ಟೆ ಕೊಡಿಸುವ ನೆಪದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿ ಅರೆಸ್ಟ್
ವಿಚಾರಣೆ ವೇಳೆ ಈ ಹಿಂದೆ ಎಸಗಿದ ಕೃತ್ಯ ಬಗ್ಗೆ ಬಯಲಿಗೆ ಬಂದಿದೆ. ಹೆಬ್ಬಾಳ, ಹೆಗ್ಗಡೆ ನಗರ, ಯಲಹಂಕ, ಗೋವಿಂದಪುರ ಸೇರಿದಂತೆ ಹಲವು ಕಡೆ ಕೃತ್ಯ ಎಸಗಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಅಪ್ರಾಪ್ತ ಹೆಣ್ಣು ಮಕ್ಕಳನ್ನು ಟಾರ್ಗೆಟ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿರುವುದು ಪತ್ತೆಯಾಗಿದೆ.
ಬೆಂಗಳೂರು: ನಗರದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ (Sexual Harassment) ನೀಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಇಮ್ತಿಯಾಜ್ ಅಹಮದ್ ಅಪ್ರಾಪ್ತರ ಬಳಿ ಬಂದು ಬಟ್ಟೆ ಕೊಡಿಸುವ ನೆಪದಲ್ಲಿ ಕರೆದೊಯ್ಯುತಿದ್ದ. ನಂತರ ಯಾರು ಇಲ್ಲದ ಜಾಗಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ಕೊಡುತಿದ್ದ. ಇದೇ ತಿಂಗಳ 20 ರಂದು ಕೆಜಿ ಹಳ್ಳಿಗೆ ಬಂದಿದ್ದ ಆರೋಪಿ, ಅಪ್ರಾಪ್ತ ಬಾಲಕಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಕೆಜಿ ಹಳ್ಳಿ ಪೊಲೀಸರು (Police) ದೂರು ದಾಖಲಿಸಿ ತನಿಖೆ ಕೈಗೊಂಡಿದ್ದರು.
ವಿಚಾರಣೆ ವೇಳೆ ಈ ಹಿಂದೆ ಎಸಗಿದ ಕೃತ್ಯ ಬಗ್ಗೆ ಬಯಲಿಗೆ ಬಂದಿದೆ. ಹೆಬ್ಬಾಳ, ಹೆಗ್ಗಡೆ ನಗರ, ಯಲಹಂಕ, ಗೋವಿಂದಪುರ ಸೇರಿದಂತೆ ಹಲವು ಕಡೆ ಕೃತ್ಯ ಎಸಗಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಅಪ್ರಾಪ್ತ ಹೆಣ್ಣು ಮಕ್ಕಳನ್ನು ಟಾರ್ಗೆಟ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿರುವುದು ಪತ್ತೆಯಾಗಿದೆ. ಈ ಹಿಂದೆ ಆರೋಪಿ ವಿರುದ್ಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿ ಪ್ರಕರಣ ದಾಖಲಾಗಿತ್ತು.
ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಅರೆಸ್ಟ್: ಬೆಂಗಳೂರು: ಬೈಕ್ ಕದಿಯುತ್ತಿದ್ದ ಮೂವರು ಆರೋಪಿಗಳನ್ನ ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 3 ಲಕ್ಷ ಮೌಲ್ಯದ 6 ಬೈಕ್ಗಳು ಮತ್ತು 6 ಮೊಬೈಲ್ಗಳನ್ನ ಜಪ್ತಿ ಮಾಡಿದ್ದಾರೆ. ಆರೋಪಿಗಳು ಅನ್ನಪೂರ್ಣೇಶ್ವರಿ ನಗರ, ವಿಜಯನಗರ, ತಲಘಟ್ಟಪುರ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದರು. ಸದ್ಯ ಆರೋಪಿಗಳನ್ನ ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ
Union Budget 2022: ಇಂದಿನಿಂದ ಬಜೆಟ್ ಅಧಿವೇಶನ ಪ್ರಾರಂಭ; ಆರ್ಥಿಕ ಸಮೀಕ್ಷೆ ಮಂಡಿಸಲಿರುವ ನಿರ್ಮಲಾ ಸೀತಾರಾಮನ್
ಜಮ್ಮು ಕಾಶ್ಮೀರ ಮತ್ತು ಅರುಣಾಚಲ ಪ್ರದೇಶವನ್ನು ಪಾಕಿಸ್ತಾನ, ಚೀನಾದ ಭೂಪಟದಲ್ಲಿ ತೋರಿಸಿದ ವಿಶ್ವ ಆರೋಗ್ಯ ಸಂಸ್ಥೆ
Published On - 12:43 pm, Mon, 31 January 22