ಬೆಂಗಳೂರು: ಮ್ಯೂಸಿಕ್ ಸೌಂಡ್ ಕಡಿಮೆ ಮಾಡುವಂತೆ ಹೇಳಿದ್ದ ಸೇನಾಧಿಕಾರಿ ಸೋದರನ ಮೇಲೆ ಹಲ್ಲೆ, ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಮನೆಯಲ್ಲಿ ಜೋರಾಗಿ ಸಾಂಗ್​ ಹಾಕದಂತೆ ಹೇಳಿದ್ದಕ್ಕೆ ಹಲ್ಲೆ ಮಾಡಲಾಗಿದ್ದು ಹಲ್ಲೆಗೊಳಗಾಗಿದ್ದ ಲಾಯಿಡ್ ನೇಮಯ್ಯ ಎಂಬುವವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಬೆಂಗಳೂರು: ಮ್ಯೂಸಿಕ್ ಸೌಂಡ್ ಕಡಿಮೆ ಮಾಡುವಂತೆ ಹೇಳಿದ್ದ ಸೇನಾಧಿಕಾರಿ ಸೋದರನ ಮೇಲೆ ಹಲ್ಲೆ, ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
ಮೃತ ಲಾಯಿಡ್ ನೇಮಯ್ಯ, ಹಲ್ಲೆ ಸಮಯದ ವಿಡಿಯೋ ದೃಶ್ಯ
Follow us
ಆಯೇಷಾ ಬಾನು
|

Updated on:Apr 05, 2023 | 1:26 PM

ಬೆಂಗಳೂರು: ಮನೆಯಲ್ಲಿ ಜೋರಾಗಿ ಸಾಂಗ್​ ಹಾಕದಂತೆ ಹೇಳಿದ್ದಕ್ಕೆ ಹಲ್ಲೆ ಮಾಡಲಾಗಿದ್ದು ಹಲ್ಲೆಗೊಳಗಾಗಿದ್ದ ಲಾಯಿಡ್ ನೇಮಯ್ಯ(54) ಎಂಬುವವರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಂಗಳೂರಿನ ಹೆಚ್​ಎಎಲ್​ ಬಳಿಯ ವಿಜ್ಞಾನ ನಗರದಲ್ಲಿ ನಡೆದಿದೆ. ಏಪ್ರಿಲ್ 2ರಂದು ಲಾಯಿಡ್ ನೇಮಯ್ಯನವರ ಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದ ಟೆಕ್ಕಿಗಳು ಜೋರಾಗಿ ಹಾಡುಗಳನ್ನು ಹಾಕಿ ಪಾರ್ಟಿ ಮಾಡಿದ್ದರು. ಈ ವೇಳೆ ಸೌಂಡ್ ಕಡಿಮೆ ಮಾಡಿ ಮನೆಯಲ್ಲಿ ವಯಸ್ಸಾದವರಿದ್ದಾರೆ ಎಂದು ಲಾಯಿಡ್ ಹೇಳಿದ್ದರು.

ಸ್ವಲ್ಪ ಸಮಯದ ಬಳಿಕ ಲಾಯಿಡ್ ನೇಮಯ್ಯ ಮನೆಗೆ ನುಗ್ಗಿದ ಟೆಕ್ಕಿಗಳು ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾಗಿದ್ದ ಲಾಯಿಡ್ ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಗಲಾಟೆ ಬಳಿಕ ಹಲ್ಲೆ ಕೇಸ್ ದಾಖಲಿಸಿಕೊಂಡಿದ್ದ HAL ಪೊಲೀಸರು ಸದ್ಯ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಒಡಿಶಾ ಮೂಲದ ಟೆಕ್ಕಿಗಳಿಂದ ಲಾಯಿಡ್ ನೇಮಯ್ಯ ಕೊಲೆ ನಡೆದಿದೆ ಎನ್ನಲಾಗುತ್ತಿದೆ.

ಇನ್ನು ಮೃತ ಲಾಯಿಡ್ ನೇಮಯ್ಯ ಅವರು ಸೇವೆಯಲ್ಲಿರುವ ಸೇನಾ ಅಧಿಕಾರಿ ಕರ್ನಲ್ ಡೇವಿಡ್ ನೇಮಯ್ಯ ಅವರ ಸಹೋದರ. ಮೂವರು ಟೆಕ್ಕಿಗಳಿಂದ ಹಲ್ಲೆಗೊಳಗಾಗಿ ಮೃತಪಟ್ಟಿದ್ದಾರೆ. ಲಾಯಿಡ್ ಅವರಿಗೆ ಆಂತರಿಕ ಗಾಯಗಳಿಂದಾಗಿ ಅವರು ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕವೇ ಸಾವಿನ ನಿಖರ ಕಾರಣ ತಿಳಿದುಬರಲಿದೆ.

ಇದನ್ನೂ ಓದಿ: ಕದ್ದ ಚಿನ್ನವನ್ನು ಗುಜರಿಗೆ ಹಾಕಿದ ಮುಗ್ಧ ಕಳ್ಳನ ರೋಚಕ ಕಥೆ ಇಲ್ಲಿದೆ!

10 ವರ್ಷದಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ ಮೂವರ ಸೆರೆ

10 ವರ್ಷದಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಮೊಹ್ಮದ್ ಜಬೀವುದ್ದೀನ್, ಮೊಹ್ಮದ್ ಮೆಹತಾಬ್, ದಿನೇಶ್​ ಅಲಿಯಾಸ್ ದಿನ ಎಂಬಾತನನ್ನು ಬಂಧಿಸಲಾಗಿದೆ. ಹಲವು ಪ್ರಕರಣಗಳಲ್ಲಿ ಈ ಮೂವರು ಆರೋಪಿಗಳು ಭಾಗಿಯಾಗಿದ್ದರು. ವಾರಂಟ್ ಜಾರಿ ಮಾಡಿದ್ದರೂ ಕೋರ್ಟ್​ಗೆ ಹಾಜರಾಗದೆ ನಾಪತ್ತೆಯಾಗಿದ್ದರು. ಸದ್ಯ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮೂವರು ಪಾತಕಿಗಳ ಸೆರೆ ಹಿಡಿಯಲಾಗಿದೆ. ಚುನಾವಣೆ ವೇಳೆ ಸ್ಥಳೀಯ ಮುಖಂಡರ ಜತೆ ಓಡಾಡ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಲಾಗಿದೆ.

ಮೊಹಮ್ಮದ್ ಜಬೀವುದ್ದೀನ್ ಮೇಲೆ ಬರೋಬ್ಬರಿ 17 ಪ್ರಕರಣಗಳು ದಾಖಲಾಗಿವೆ. ಕೆಜಿ ಹಳ್ಳಿ, ವಿವೇಕನಗರ, ಬನಶಂಕರಿ, ಬಸವನಗುಡಿ, ಜೆಪಿ ನಗರ, ಕೆಎಸ್ ಲೇಔಟ್ ಸೇರಿ ಹಲವು ಠಾಣೆಗಳಿಗೆ ಬೇಕಾಗಿದ್ದ ಆರೋಪಿ ಈತ. ಮೊಹಮ್ಮದ್ ಮೆಹತಾಬ್ ವಿರುದ್ಧ 18 ಪ್ರಕರಣ ದಾಖಲಾಗಿದ್ದು ಜಯನಗರ, ಬನಶಂಕರಿ, ಬಸವನಗುಡಿ, ಸಿದ್ದಾಪುರ, ಸುಬ್ರಮಣ್ಯಪುರ ವಿವೇಕನಗರ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಹಾಗೂ ದಿನೇಶ ಅಲಿಯಾಸ್ ದೀನ ಮೇಲೆ ಐದು ಪ್ರಕರಣ ದಾಖಲಾಗಿದೆ. ಈ ಮೂವರು ಆರೋಪಿಗಳು ಚುನಾವಣೆ ಹಿನ್ನೆಲೆ ಸ್ಥಳೀಯ ಮುಖಂಡರ ಜೊತೆ ಗುರುತಿಸಿಕೊಂಡು ಓಡಾಡಿಕೊಂಡಿದ್ದರು. ಕಾನೂನು ಸುವ್ಯವಸ್ಥೆ ಸಲುವಾಗಿ ಒಬ್ಬೊಬ್ಬರನ್ನೆ ಪತ್ತೆ ಮಾಡಿ ಜೈಲಿಗೆ ಕಳಿಸಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:26 pm, Wed, 5 April 23

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ