ತಮಿಳು ಚಿತ್ರ ಹಂಟರ್​ನಲ್ಲಿ ಚಾನ್ಸ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಯುವತಿಗೆ ವಂಚನೆ, ಕೋಣನಕುಂಟೆ ಠಾಣೆಯಲ್ಲಿ FIR ದಾಖಲು

ಇನ್ಸ್ಟಾಗ್ರಾಮ್​ನಲ್ಲಿ ಮೂವಿ ಆ್ಯಡ್ ಲಿಂಕ್ ಮೂಲಕ ಪರಿಚಯವಾದ ವ್ಯಕ್ತಿ ತಮಿಳು ನಟ ರಾಘವ್ ಲಾರೆನ್ಸ್ ಅವರ ಹಂಟರ್​ ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಯುವತಿಯನ್ನು ವಂಚಿಸಿರುವ ಘಟನೆ ನಡೆದಿದೆ. ಯುವತಿ 1.71 ಲಕ್ಷ ನೀಡಿ ಮೋಸ ಹೋಗಿದ್ದು ಘಟನೆ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ತಮಿಳು ಚಿತ್ರ ಹಂಟರ್​ನಲ್ಲಿ ಚಾನ್ಸ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಯುವತಿಗೆ ವಂಚನೆ, ಕೋಣನಕುಂಟೆ ಠಾಣೆಯಲ್ಲಿ FIR ದಾಖಲು
ಕೋಣನಕುಂಟೆ ಪೊಲೀಸ್ ಠಾಣೆ
Follow us
TV9 Web
| Updated By: ಆಯೇಷಾ ಬಾನು

Updated on: Aug 06, 2024 | 9:21 AM

ಬೆಂಗಳೂರು, ಆಗಸ್ಟ್.06: ಯುವತಿಗೆ ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ತಮಿಳು ನಟ ರಾಘವ್ ಲಾರೆನ್ಸ್ (Raghava Lawrence) ಅವರ 25ನೇ ಸಿನಿಮಾ ಹಂಟರ್​ನಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಯುವತಿಯನ್ನು ವಂಚಿಸಲಾಗಿದೆ. ಈ ಘಟನೆ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಕನ್ನಡದ ನಂದಿತಾ ಕೆ ಶೆಟ್ಟಿ ಎಂಬ ಯುವತಿ ಸಿನಿಮಾದಲ್ಲಿ ನಟಿಸಲು ಅವಕಾಶಕ್ಕಾಗಿ ಕಾಯುತ್ತಿದ್ದರು. ಇದೇ ವೇಳೆ ಇನ್ಸ್ಟಾಗ್ರಾಮ್​ನಲ್ಲಿ ಮೂವಿ ಆ್ಯಡ್ ಲಿಂಕ್ ಮೂಲಕ ಸುರೇಶ್ ಕುಮಾರ್ ಎಂಬಾತನ ಪರಿಚಯವಾಗಿದೆ. ತಾನು ಹಂಟರ್ ಮೂವಿ ಕಾಸ್ಟಿಂಗ್ ಡೈರೆಕ್ಟರ್ ಎಂದು ವಂಚಕ ಸುರೇಶ್ ಪರಿಚಯ ಮಾಡಿಕೊಂಡಿದ್ದಾನೆ. ಬಳಿಕ ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ಹಂತ ಹಂತವಾಗಿ 1.71 ಲಕ್ಷ ಪಡೆದಿದ್ದಾನೆ. ಆರ್ಟಿಸ್ಟ್ ಕಾರ್ಡ್, ಅಗ್ರಿಮೆಂಟ್ ಸ್ಟಾಂಪ್ ಡ್ಯೂಟಿ, ವಿದೇಶದಲ್ಲಿ ಶೂಟಿಂಗ್ ಇರುತ್ತೆ ಪಾಸ್ ಪೋರ್ಟ್, ಟಿಕೆಟ್ ಚಾರ್ಜ್ ಅಂತ ಹಣ ಪಡೆದು ವಂಚಿಸಿದ್ದಾನೆ. ವಂಚಕನ ಮಾತು ನಂಬಿ ಹಂತ ಹಂತವಾಗಿ ಆನ್ ಲೈನ್ ಮೂಲಕ ಹಣ ಪಾವತಿಸಿದ್ದ ನಂದಿತಾ, ಅನುಮಾನ ಬಂದು ಕ್ರಾಸ್ ಚೆಕ್ ಮಾಡಿದಾಗ ಅಸಲಿ ವಿಚಾರ ಬಯಲಾಗಿದೆ. ಸದ್ಯ ಈಗ ಈ ಬಗ್ಗೆ ಕೋಣನಕುಂಟೆ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದು FIR ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ 1 ವಾರ ವಾಹನ ಸಂಚಾರ ಬಂದ್​!

ರಾತ್ರಿ ಪಾಳೆಯದಲ್ಲಿ ಕಳ್ಳತನ ಮಾಡ್ತಿದ್ದ ಕಳ್ಳರ ಬಂಧನ

ಇನ್ನು ಮತ್ತೊಂದೆಡೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ವಿವಿಧ ಕಡೆಗಳಲ್ಲಿ ರಾತ್ರಿ ವೇಳೆ ಕಳ್ಳತನ ಮಾಡ್ತಿದ್ದ ಕದೀಮರನ್ನು ಪೊಲೀಸರು ಬಂಧಿಸಿದ್ದಾರೆ. ತಿಮ್ಮಪ್ಪ (56), ತಿಮ್ಮಣ್ಣ (45) ಬಂಧಿತರು. ಆರೋಪಿಗಳು ಸಾದರಹಳ್ಳಿ ಗ್ರಾಮದ ಮಹಾಲಕ್ಷ್ಮಿ ಓಂಕಾರಮೂರ್ತಿ ಅವರ ಮನೆ ಸೇರಿದಂತೆ ಒಟ್ಟು 5 ಮನೆಗಳಿಗೆ ನುಗ್ಗಿ ಕಳ್ಳತನ ಮಾಡಿದ್ದರು. ಆರೋಪಿಗಳು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಗಂಜಿಗೆರೆ ಗ್ರಾಮದವರು ಎಂದು ತಿಳಿದು ಬಂದಿದೆ.

ಬಂಧಿತರಿಂದ ಒಟ್ಟು 4 ಲಕ್ಷದ 72 ಸಾವಿರದ 500 ರೂ ಬೆಲೆ ಬಾಳುವ ಮಾಲು ವಶಕ್ಕೆ ಪಡೆಯಲಾಗಿದೆ. 70 ಗ್ರಾಮ್ ಚಿನ್ನ ಹಾಗೂ 250 ಗ್ರಾಮ್ ಬೆಳ್ಳಿ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಚಿಕ್ಕನಾಯಕನಹಳ್ಳಿ ಹಾಗೂ ಹುಳಿಯಾರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ
ಅಪಘಾತದ ಸ್ವರೂಪ ನೋಡಿದರೆ ಕಾರು ಚಾಲಕ ಬದುಕುಳಿದಿದ್ದೇ ಪವಾಡ
ಅಪಘಾತದ ಸ್ವರೂಪ ನೋಡಿದರೆ ಕಾರು ಚಾಲಕ ಬದುಕುಳಿದಿದ್ದೇ ಪವಾಡ