ಬೆಂಗಳೂರು; ವಿಶೇಷ ಚೇತನಳನ್ನ ಮದುವೆ ಆಗುವುದಾಗಿ ನಂಬಿಸಿ ಹಣ ಪಡೆದು ವಂಚನೆ, ದೂರು ದಾಖಲು

ವಿಶೇಷ ಚೇತನ ಯುವತಿಯನ್ನು ಪ್ರೀತಿಸಿ ಆಕೆ ಜೊತೆ ಸಲುಗೆ ಬೆಳೆಸಿ ಬಳಿಕ ಬ್ಯುಸಿನೆಸ್ ಮಾಡಲು ಹಣಬೇಕೆಂದು ಹಣ ಪಡೆದು ವಂಚನೆ ಮಾಡಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತನ್ನ ಪ್ರಿಯತಮನಿಗಾಗಿ ಯುವತಿ ಸಾಲ ಮಾಡಿ, ತನ್ನ ಬಳಿಯಿದ್ದ ಚಿನ್ನ ಅಡವಿಟ್ಟು ಹಣ ನೀಡಿದ್ದರು. ಆದರೆ ಹಣವೆಲ್ಲ ಪಡೆದ ಬಳಿಕ ಮದುವೆಯಾಗದೆ ವಂಚನೆ ಮಾಡಿದ್ದಾನೆ.

ಬೆಂಗಳೂರು; ವಿಶೇಷ ಚೇತನಳನ್ನ ಮದುವೆ ಆಗುವುದಾಗಿ ನಂಬಿಸಿ ಹಣ ಪಡೆದು ವಂಚನೆ, ದೂರು ದಾಖಲು
ವಿಶೇಷ ಚೇತನಳನ್ನ ಮದುವೆ ಆಗುವುದಾಗಿ ನಂಬಿಸಿ ಹಣ ಪಡೆದು ವಂಚನೆ
Follow us
Jagadisha B
| Updated By: ಆಯೇಷಾ ಬಾನು

Updated on: Mar 27, 2024 | 10:07 AM

ಬೆಂಗಳೂರು, ಮಾರ್ಚ್​.27: ಸಿಲಿಕಾನ್ ಸಿಟಿಯಲ್ಲೊಂದು ಮೈನಾ (Myna)  ಮೂವಿಯಂತಹ ಘಟನೆ ನಡೆದಿದೆ. ಆದರೆ ಇಲ್ಲಿ ಹೀರೋನೇ ಹಣ ಪಡೆದು ವಿಲನ್ ಆಗಿದ್ದಾನೆ. ಕನ್ನಡದ ಸೂಪರ್ ಹಿಟ್ ಚಲನಚಿತ್ರ ಮೈನಾದಲ್ಲಿ ಹೀರೋ, ಅಂಗವಿಕಲ ಹಿರೋಯಿನ್​ ಪ್ರೀತಿಗಾಗಿ ಎಲ್ಲವನ್ನೂ ಮಾಡಲು ಸಿದ್ಧನಿರುತ್ತಾನೆ. ಅಂಗವಿಕಲ ಯುವತಿಗಾಗಿ ಎಲ್ಲವನ್ನೂ ಬಿಟ್ಟುಬಂದ ಯುವಕನ ಪ್ರೀತಿಯನ್ನು ತೆರೆ ಮೇಲೆ ನೋಡೋದೆ ಚಂದ. ಆದರೆ ಇಲ್ಲಿ ವಿಶೇಷ ಚೇತನಳನ್ನ ಮದುವೆ ಆಗುವುದಾಗಿ ಹಣ ಪಡೆದು ವಂಚನೆ (Cheating) ಮಾಡಿರುವ ಆರೋಪ ಕೇಳಿಬಂದಿದೆ. ಸುರೇಂದ್ರ ಮೂರ್ತಿ ಎಂಬುವವರು ವಿಶೇಷ ಚೇತನ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ್ದಾರೆ.

ಸುರೇಂದ್ರ ಮೂರ್ತಿ ಹಾಗೂ ವಿಶೇಷ ಚೇತನ ಯುವತಿಗೆ ಮೊದಲು ಪರಿಚಯವಾಗಿ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರಲ್ಲಿ ಸಲುಗೆ, ನಂಬಿಕೆ ಹೆಚ್ಚಾದ ಬಳಿಕ ಸುರೇಂದ್ರ ಮೂರ್ತಿ ತನ್ನೊಂದು ಬ್ಯುಸಿನೆಸ್ ಮಾಡಬೇಕಿದೆ. ಅದಕ್ಕೆ ಹಣ ಬೇಕೆಂದು ಯುವತಿ ಬಳಿ ಕೇಳಿದ್ದ. ತನ್ನ ಪ್ರಿಯತಮನಿಗಾಗಿ ಯುವತಿ ಸಾಲ ಮಾಡಿ, ತನ್ನ ಬಳಿಯಿದ್ದ ಚಿನ್ನ ಅಡವಿಟ್ಟು ಹಣ ನೀಡಿದ್ದರು. ಆದರೆ ಹಣವೆಲ್ಲ ಪಡೆದ ಬಳಿಕ ಮದುವೆಯಾಗದೆ ವಂಚನೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಅಲ್ಲದೆ ಪ್ರೀತಿಯಲ್ಲಿದ್ದ ವೇಳೆ ಲೈಂಗಿಕವಾಗಿಯೂ ಬಳಸಿಕೊಂಡಿರುವುದಾಗಿ ಯುವತಿ ಆರೋಪ ಮಾಡಿದ್ದಾಳೆ. ಸದ್ಯ ವಿಶೇಷ ಚೇತನ ಯುವತಿ ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಘಟನೆ ಸಂಬಂಧ ಫೆಬ್ರವರಿ ತಿಂಗಳಲ್ಲಿ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಕೃತ್ಯ ನಡೆದದ್ದು ಕೊಡಗೆಹಳ್ಳಿ ಹಿನ್ನಲೆ ಇದೀಗ ಪ್ರಕರಣ ಕೊಡಿಗೆಹಳ್ಳಿ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪಾರಿವಾಳಗಳಿಗೆ ಆಹಾರ ಹಾಕಿದ್ರೆ 200 ರೂ. ದಂಡ

ನದಿಯಲ್ಲಿ ಮುಳುಗಿ ನಾಲ್ವರು ಸಾವು

ಕಾವೇರಿ ನದಿಯಲ್ಲಿ ಈಜಲು‌ ಹೋದ ನಾಲ್ವರು ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಘಟನೆ ನಡೆದಿದ್ದು, ಮೈಸೂರು ಮೂಲದ ನಾಗೇಶ್ ಅವರ ಪುತ್ರ ಭರತ್, ಗುರು, ಮಹದೇವ್ ಸಾವನ್ನಪ್ಪಿದ್ದಾರೆ. ನದಿಯಲ್ಲಿ ಈಜಾಡುವ ವೇಳೆ ನೀರಿನಲ್ಲಿ ಓರ್ವ ಮುಳುಗಿದ್ದು, ರಕ್ಷಣೆಗೆ ಹೋದ ಉಳಿದ ಮೂವರು ಕೂಡ ಸಾವನ್ನಪ್ಪಿದ್ದಾರೆ. ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಳೆ ಕ್ಲಿಕ್ ಮಾಡಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್