ಬೆಂಗಳೂರಿನಲ್ಲಿ ವೆಗಾ ಸಿಟಿ ಮಾಲ್​ನಿಂದ ಜಿಗಿದು ಯುವಕ ಆತ್ಮಹತ್ಯೆ

ಆತ್ಮಹತ್ಯೆ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ಬೆಳಕಿಗೆ ಬರುತ್ತಿದ್ದು, ಅದರಂತೆ ಬೆಂಗಳೂರಿನ ಪ್ರತಿಷ್ಠಿತ ಮಾಲ್​ಗಳಲ್ಲಿ ಒಂದಾದ ವೆಗಾ ಸಿಟಿ ಮಾಲ್​(Vega City Mall)ನ 4ನೇ ಮಹಡಿಯಿಂದ ಜಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು(ಮೇ.31) ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ನಡೆದಿದೆ. ಸ್ಥಳಕ್ಕೆ ಮೈಕೋಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ವ್ಯಕ್ತಿಯ ಗುರುತನ್ನು ಪತ್ತೆ ಹಚ್ಚುತ್ತಿದ್ದಾರೆ.

ಬೆಂಗಳೂರಿನಲ್ಲಿ ವೆಗಾ ಸಿಟಿ ಮಾಲ್​ನಿಂದ ಜಿಗಿದು ಯುವಕ ಆತ್ಮಹತ್ಯೆ
ವೆಗಾ ಮಾಲ್​ನಿಂದ ಜಿಗಿದು ಯುವಕ ಆತ್ಮಹತ್ಯೆ
Edited By:

Updated on: May 31, 2024 | 4:00 PM

ಬೆಂಗಳೂರು, ಮೇ.31: ವೆಗಾ ಸಿಟಿ ಮಾಲ್​ನಿಂದ ಜಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಪ್ರತಿಷ್ಠಿತ ಮಾಲ್​ಗಳಲ್ಲಿ ಒಂದಾದ ವೆಗಾ ಸಿಟಿ ಮಾಲ್​(Vega City Mall)ನಲ್ಲಿ ಇಂದು(ಮೇ.31) ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ನಡೆದಿದೆ. ಮಾಲ್​ನ 4ನೇ ಮಹಡಿಯಿಂದ ಜಿಗಿದು ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲು ಪ್ರಯತ್ನಿಸಲಾದರೂ, ಅಷ್ಟರಲ್ಲಾಗಲೇ ಆತ ಕೊನೆಯುಸಿರೆಳೆದಿದ್ದ. ಇದೀಗ ಘಟನಾ ಸ್ಥಳಕ್ಕೆ ಮೈಕೋಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ವ್ಯಕ್ತಿಯ ಗುರುತನ್ನು ಪತ್ತೆ ಹಚ್ಚುತ್ತಿದ್ದಾರೆ.

ಸಾಲಭಾದೆ ತಾಳಲಾರದೇ ನೇಣು ಬಿಗಿದುಕೊಂಡು ಯುವ ರೈತ ಆತ್ಮಹತ್ಯೆ

ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಚಪ್ಪರದಹಳ್ಳಿಯಲ್ಲಿ ಸಾಲಬಾಧೆ ತಾಳದೇ ಜಮೀನಿನಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಯುವ ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸುಂದರೇಶ್(28) ಮೃತ ವ್ಯಕ್ತಿ. ತನ್ನ ತಾಯಿ ಸುಶೀಲಮ್ಮನ ಹೆಸರಿನ ಬ್ಯಾಂಕ್, ವಿವಿಧ ಖಾಸಗಿ ಹಣಕಾಸು ಸಂಸ್ಥೆ, ಸಂಘಗಳಲ್ಲಿ ಹಾಗೂ ಚಿನ್ನ ಅಡವಿಟ್ಟು ಸಾಲ ಪಡೆದಿದ್ದ. 15 ದಿನಗಳಿಂದ ಸುರಿದ ಭಾರಿ ಮಳೆಯಿಂದ ಬೆಳೆದಿದ್ದ ಶುಂಠಿ ಹಾಗೂ ತಂಬಾಕು ಬೆಳೆ ಹಾಳಾಗಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಆತ್ಮಹತ್ಯೆ ಕೇಸ್​: ಸಿಬಿಐ ತನಿಖೆಗೆ ಯತ್ನಾಳ್​ ಆಗ್ರಹ, ಸರ್ಕಾರಕ್ಕೆ ಪತ್ರ

ಅಪರಿಚಿತ ವ್ಯಕ್ತಿಯ ಶವ ಪತ್ತೆ

ವಿಜಯಪುರ: ನಗರದ ಎಲ್​​ಬಿಎಸ್ ಮಾರುಕಟ್ಟೆ ಆವರಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಕಳೆದ‌ ಎರಡು ದಿನಗಳಲ್ಲಿ ಇಲ್ಲೇ ಮಲಗಿಕೊಂಡಿದ್ದ ವ್ಯಕ್ತಿ, ಅನಾರೋಗ್ಯದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಗಾಂಧಿಚೌಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೀಗ ಮೃತ ವ್ಯಕ್ತಿಯ ಹೆಸರು, ವಿಳಾಸ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:55 pm, Fri, 31 May 24