ಬೆಂಗಳೂರು: ಜಲಮಂಡಳಿ ಕಾಮಗಾರಿಗೆ ರಸ್ತೆ ಅಗೆದು ಗುಂಡಿ ತೆಗೆದಿದ್ದು, ಕಾಟಾಚಾರಕ್ಕೆ ಗುತ್ತಿಗೆದಾರರು ಬ್ಯಾರಿಕೇಡ್ ಅಳವಡಿಸಿದ್ದಾರೆ. ಪರಿಣಾಮ ರಾತ್ರಿ ಕತ್ತಲಲ್ಲಿ ಗುಂಡಿ ಗೋಚರಿಸದೆ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಗುಂಡಿಗೆ ಬಿದ್ದು ದಾಸರಹಳ್ಳಿಯ ಮಲ್ಲಸಂದ್ರ ನಿವಾಸಿ ಆನಂದಪ್ಪ(47) ಸಾವನ್ನಪ್ಪಿದ್ದಾರೆ. ರಸ್ತೆ ಬದಿ ಅಂಗಡಿಯ ಸಿಸಿ ಕ್ಯಾಮರಾದಲ್ಲಿ ಬೈಕ್ ಸವಾರ ಗುಂಡಿಗೆ ಬೀಳುವ ದೃಶ್ಯ ಸೆರೆಯಾಗಿದೆ.
ಆನಂದಪ್ಪ ಗೌರಿಬಿದನೂರು ಮೂದವರಾಗಿದ್ದು, ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮಲ್ಲಸಂದ್ರ ನಗರದಲ್ಲಿ ವಾಸವಾಗಿದ್ದರು. ಪೀಣ್ಯಾದ ಎಲಿಕಾ ಚಿಮಣಿ ಕಂಪನಿಯಲ್ಲಿ ಮೆಕಾನಿಕ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಶುಕ್ರವಾರ ರಾತ್ರಿ ನೈಟ್ ಶಿಫ್ಟ್ ಮುಗಿಸಿಕೊಂಡು ಮನೆಗೆ ವಾಪಾಸ್ ಆಗುವಾಗ ಬೈಕ್ ಸಮೇತ ಗುಂಡಿಗೆ ಬಿದ್ದಿದ್ದು, ಪರಿಣಾಮ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಹೆಸರಘಟ್ಟ ರಸ್ತೆಯ ಭುವನೇಶ್ವರಿ ನಗರದಲ್ಲಿ ಶುಕ್ರವಾರದ ತಡ ರಾತ್ರಿ 11:30ಕ್ಕೆ ಈ ಘಟನೆ ನಡೆದಿದೆ. ಸ್ಥಳದಲ್ಲಿ ಸುರಕ್ಷಿತ ಕ್ರಮ ಅನುಸರಿಸದೆ ನೆಪ ಮಾತ್ರಕ್ಕೆ ಚಿಕ್ಕ ಬ್ಯಾರಿಕೇಡ್ ಹಾಕಿ ನಿರ್ಲಕ್ಷ್ಯ ವಹಿಸಿದ್ದಾರೆ. ಸದ್ಯ ಗುತ್ತಿಗೆದಾರರ ನಿರ್ಲಕ್ಷ್ಯ ಅರೋಪದಡಿ ಪೀಣ್ಯಾ ಸಂಚಾರಿ ಹಾಗೂ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮಗಾರಿ ನಡೆಯುವ ಸ್ಥಳದಿಂದ ಕನಿಷ್ಠ 50 ಮೀಟರ್ ದೂರಕ್ಕೆ ಸೂಚನಾ ಫಲಕ ಅಳವಡಿಸಬೇಕು. ಅಲ್ಲದೆ ರಿಫ್ಲೆಕ್ಟರ್‌ಗಳೊಂದಿಗೆ ಸೂಚನಾ ಫಲಕಗಳನ್ನು ಅಳವಡಿಸಬೇಕು. ಆದರೆ ಇಲ್ಲಿ ಯಾವುದೇ ರಿಫ್ಲೆಕ್ಟರ್‌ಗಳಿಲ್ಲದಿರುವುದು ಅಪಘಾತಕ್ಕೆ ಆಹ್ವಾನಿಸಿದೆ. ಬ್ಯಾರಿಕೇಡ್‌ಗಳನ್ನು ಅಳವಡಿಸಿರುವುದು ಬಿಟ್ಟರೆ ಬೇರೆ ಯಾವುದೇ ಸೂಕ್ತ ಕ್ರಮ ತೆಗೆದುಕೊಳ್ಳದ ಗುತ್ತಿಗೆದಾರರು ನಿರ್ಲಕ್ಷ್ಯ ವಹಿಸಿದ್ದಾರೆ.
ತುಮಕೂರು: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಾರಿನಲ್ಲಿದ್ದ ದಂಪತಿ ಸಾವು
ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕು ಮಾಯಸಂದ್ರ ಬಳಿಯ ಚಿಕ್ಕಪುರ ಗೇಟ್ ಬಳಿ ನಡೆದಿದೆ. ಕುಟಂಬ ಸಮೇತ ತುರುವೇಕೆರೆಯ ಬೇಟೆರಾಯ ಸ್ವಾಮಿ ದೇವಸ್ಥಾನಕ್ಕೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಬಿ.ಎಸ್.ರವಿ(54), ಪತ್ನಿ ಜ್ಯೋತಿ(48) ಮೃತ ದುರ್ದೈವಿಗಳು.
ಮೃತ ಬಿ.ಎಸ್.ರವಿ ದಂಪತಿ ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ದಂಪತಿಯ ಮಗ ಹಾಗೂ ಮಗಳಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:
ಆನೇಕಲ್ನಲ್ಲಿ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ದುರ್ಮರಣ, ಮೃತರು ಮಹಾರಾಷ್ಟ್ರದವರು
ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಕೂಡಲೇ ಮುಚ್ಚಬೇಕು; ಬಿಬಿಎಂಪಿ ಅಧಿಕಾರಿಗಳಿಗೆ ಗೌರವ್ ಗುಪ್ತಾ ಸೂಚನೆ
Published On - 12:27 pm, Sun, 19 September 21