AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಬೆಲ್​​ ಗ್ರೌಂಡ್ಸ್​​​ನಲ್ಲಿ ಬೆಳಗ್ಗೆ ಜಾಗಿಂಗ್​​ಗೆ ಹೋಗಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

ಬಿಇಎಲ್ ಮೈದಾನದಲ್ಲಿ ಜಾಗಿಂಗ್ ಮಾಡುವಾಗ ಕುಸಿದು ಬಿದ್ದು 35 ವರ್ಷದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳೀಯರು ವ್ಯಕ್ತಿಯನ್ನು ಬಿಇಎಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಆಸ್ಪತ್ರೆಗೆ ಹೋಗುವಷ್ಟರಲ್ಲಿ ವ್ಯಕ್ತಿ ಮೃತಪಟ್ಟಿದ್ದಾರೆ.

ಬೆಂಗಳೂರಿನ ಬೆಲ್​​ ಗ್ರೌಂಡ್ಸ್​​​ನಲ್ಲಿ ಬೆಳಗ್ಗೆ ಜಾಗಿಂಗ್​​ಗೆ ಹೋಗಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 25, 2022 | 1:32 PM

Share

ಬೆಂಗಳೂರು: ಬೆಳಗ್ಗೆ ಜಾಗಿಂಗ್​​ಗೆ ಹೋಗಿದ್ದ ವ್ಯಕ್ತಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಂಗಳೂರಿನ ಜಾಲಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಇಎಲ್ ಮೈದಾನದಲ್ಲಿ ಜಾಗಿಂಗ್ ಮಾಡುವಾಗ ಕುಸಿದು ಬಿದ್ದು 35 ವರ್ಷದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವ್ಯಕ್ತಿ ನೆಲಕ್ಕೆ ಬೀಳುತ್ತಿದ್ದಂತೆ ಸ್ಥಳೀಯರು ವ್ಯಕ್ತಿಯನ್ನು ಬಿಇಎಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಆಸ್ಪತ್ರೆಗೆ ಹೋಗುವಷ್ಟರಲ್ಲಿ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಜಾಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು

ಕೆರೆಗೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ವಿಜಯಪುರದಲ್ಲಿ ನಡೆದಿದೆ. ಗುಂಡ್ಲುಪೇಟೆಯ ನಾಗರತ್ನಮ್ಮ ಬಡಾವಣೆಯ ರಾಜು ಮೃತ ದುರ್ದೈವಿ. ಬಟ್ಟೆ ಒಗೆಯಲು ಕೆರೆ ಬಳಿಗೆ ಹೋಗಿದ್ದ ರಾಜು ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ಈಜು ಬಾರದ ಕಾರಣ ಸಾವನಪ್ಪಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪರಿಸರಕ್ಕೆ ಮಾರಕ ಎಂಬ ಹಣೆಪಟ್ಟಿ ಕಟ್ಟಿಕೊಂಡಿದ್ದ ಈ ಗಿಡದ ನಾಶಕ್ಕೆ ಸ್ವಯಂ ಉದ್ಯೋಗದ ಬೆಸುಗೆ

ಕಳ್ಳನನ್ನು ಅರೆಸ್ಟ್ ಮಾಡಿದ ಪೊಲೀಸರು

ಬೀಗ ಹಾಕಿದ್ದ ಮನೆಗಳನ್ನೆ ಟಾರ್ಗೆಟ್​ ಮಾಡಿ ಕಳ್ಳತನ ಮಾಡುತ್ತಿದ್ದ ಆಂಧ್ರ ಮೂಲದ ಅರುಣ್ ಎಂಬ ಕಳ್ಳನನ್ನು ಬೆಂಗಳೂರಿನ ಹೆಚ್​ಎಸ್​ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಕೆಲಸಕ್ಕೆಂದು ಬೆಂಗಳೂರಿಗೆ ಬಂದು ಕಳ್ಳತನಕ್ಕಿಳಿದಿದ್ದ ಆರೋಪಿ ಅರುಣ್​ನಿಮದ 8.50 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಹಳೆ ವೈಷಮ್ಯದಿಂದ ಮಾರಕಾಸ್ತ್ರಗಳಿಂದ ಕೊಚ್ಚಿ ಡಿಚ್ಚಿ ದಿವಾ ಹತ್ಯೆ

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹೊಸಹಳ್ಳಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ ದಿವಾಕರ್ ಅಲಿಯಾಸ್ ಡಿಚ್ಚಿ ದಿವಾ(32) ಹತ್ಯೆ ಮಾಡಲಾಗಿದೆ. ಹಳೆ ವೈಷಮ್ಯದಿಂದ ಕೊಲೆ ನಡೆದಿದೆ ಎನ್ನಲಾಗಿದೆ. ತಿಪಟೂರಿನಿಂದ ಹುಚ್ಚನಹಳ್ಳಿಗೆ ತೆರಳುತ್ತಿದ್ದ ವೇಳೆ ನಾಲ್ಕೈದು ದುಷ್ಕರ್ಮಿಗಳ ತಂಡ ರೌಡಿಶೀಟರ್​ ದಿವಾನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಈ ಸಂಬಂಧ ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ನಾಪತ್ತೆಯಾಗಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಹೊನ್ನವಳ್ಳಿ, ತಿಪಟೂರು ಟೌನ್, ಜಯನಗರ, ದಾಬಸ್​ಪೇಟೆ ಠಾಣೆ ಸೇರಿದಂತೆ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ ದಿವಾಕರ್​ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣ ದಾಖಲಾಗಿದ್ದವು.

Published On - 11:31 am, Tue, 25 October 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್