ಬೆಂಗಳೂರು: ಬೆಳಗ್ಗೆ ಜಾಗಿಂಗ್ಗೆ ಹೋಗಿದ್ದ ವ್ಯಕ್ತಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಂಗಳೂರಿನ ಜಾಲಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಇಎಲ್ ಮೈದಾನದಲ್ಲಿ ಜಾಗಿಂಗ್ ಮಾಡುವಾಗ ಕುಸಿದು ಬಿದ್ದು 35 ವರ್ಷದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವ್ಯಕ್ತಿ ನೆಲಕ್ಕೆ ಬೀಳುತ್ತಿದ್ದಂತೆ ಸ್ಥಳೀಯರು ವ್ಯಕ್ತಿಯನ್ನು ಬಿಇಎಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಆಸ್ಪತ್ರೆಗೆ ಹೋಗುವಷ್ಟರಲ್ಲಿ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಜಾಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು
ಕೆರೆಗೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ವಿಜಯಪುರದಲ್ಲಿ ನಡೆದಿದೆ. ಗುಂಡ್ಲುಪೇಟೆಯ ನಾಗರತ್ನಮ್ಮ ಬಡಾವಣೆಯ ರಾಜು ಮೃತ ದುರ್ದೈವಿ. ಬಟ್ಟೆ ಒಗೆಯಲು ಕೆರೆ ಬಳಿಗೆ ಹೋಗಿದ್ದ ರಾಜು ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ಈಜು ಬಾರದ ಕಾರಣ ಸಾವನಪ್ಪಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪರಿಸರಕ್ಕೆ ಮಾರಕ ಎಂಬ ಹಣೆಪಟ್ಟಿ ಕಟ್ಟಿಕೊಂಡಿದ್ದ ಈ ಗಿಡದ ನಾಶಕ್ಕೆ ಸ್ವಯಂ ಉದ್ಯೋಗದ ಬೆಸುಗೆ
ಕಳ್ಳನನ್ನು ಅರೆಸ್ಟ್ ಮಾಡಿದ ಪೊಲೀಸರು
ಬೀಗ ಹಾಕಿದ್ದ ಮನೆಗಳನ್ನೆ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆಂಧ್ರ ಮೂಲದ ಅರುಣ್ ಎಂಬ ಕಳ್ಳನನ್ನು ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಕೆಲಸಕ್ಕೆಂದು ಬೆಂಗಳೂರಿಗೆ ಬಂದು ಕಳ್ಳತನಕ್ಕಿಳಿದಿದ್ದ ಆರೋಪಿ ಅರುಣ್ನಿಮದ 8.50 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಹಳೆ ವೈಷಮ್ಯದಿಂದ ಮಾರಕಾಸ್ತ್ರಗಳಿಂದ ಕೊಚ್ಚಿ ಡಿಚ್ಚಿ ದಿವಾ ಹತ್ಯೆ
ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹೊಸಹಳ್ಳಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ದಿವಾಕರ್ ಅಲಿಯಾಸ್ ಡಿಚ್ಚಿ ದಿವಾ(32) ಹತ್ಯೆ ಮಾಡಲಾಗಿದೆ. ಹಳೆ ವೈಷಮ್ಯದಿಂದ ಕೊಲೆ ನಡೆದಿದೆ ಎನ್ನಲಾಗಿದೆ. ತಿಪಟೂರಿನಿಂದ ಹುಚ್ಚನಹಳ್ಳಿಗೆ ತೆರಳುತ್ತಿದ್ದ ವೇಳೆ ನಾಲ್ಕೈದು ದುಷ್ಕರ್ಮಿಗಳ ತಂಡ ರೌಡಿಶೀಟರ್ ದಿವಾನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಈ ಸಂಬಂಧ ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ನಾಪತ್ತೆಯಾಗಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಹೊನ್ನವಳ್ಳಿ, ತಿಪಟೂರು ಟೌನ್, ಜಯನಗರ, ದಾಬಸ್ಪೇಟೆ ಠಾಣೆ ಸೇರಿದಂತೆ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ ದಿವಾಕರ್ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣ ದಾಖಲಾಗಿದ್ದವು.
Published On - 11:31 am, Tue, 25 October 22