ಬೆಂಗಳೂರಿನಲ್ಲಿ ವಿದ್ಯುತ್ ವೈರ್ ಸ್ಪರ್ಶಿಸಿ 20 ವರ್ಷದ ಯುವಕ ಧಾರುಣ ಸಾವು

ಬೆಂಗಳೂರಿ(Bengaluru)ನ ಲಗ್ಗೆರೆಯ ಪಾರ್ವತಿಪುರದಲ್ಲಿ ಇಂದು(ಡಿ.17) ಮಧ್ಯಾಹ್ನ ವಿದ್ಯುತ್ ವೈರ್ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಕ್ರೇನ್ ಆಪರೇಟರ್ ಮಾಡುತ್ತಿದ್ದ ಜೈನ್ ಕುಮಾರ್(20) ಮೃತ ವ್ಯಕ್ತಿ. ಡಿ.8 ರಂದು ಹಳೇ ಕಟ್ಟಡ ತೆರವು ವೇಳೆ ಗೋಡೆ ಸಮೇತ ಮೊಬೈಲ್ ಟವರ್ ಕಂಬ ನೆರಕ್ಕುರುಳಿತ್ತು. ಇದನ್ನು ತೆರವು ಕಾರ್ಯಚರಣೆ ವೇಳೆ ದುರ್ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ವಿದ್ಯುತ್ ವೈರ್ ಸ್ಪರ್ಶಿಸಿ 20 ವರ್ಷದ ಯುವಕ ಧಾರುಣ ಸಾವು
ಬೆಂಗಳೂರಿನಲ್ಲಿ ವಿದ್ಯುತ್ ವೈರ್ ಸ್ಪರ್ಶಿಸಿ ವ್ಯಕ್ತಿ ಸಾವು
Follow us
Prajwal Kumar NY
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 17, 2023 | 5:58 PM

ಬೆಂಗಳೂರು, ಡಿ.17: ಬೆಂಗಳೂರಿ(Bengaluru)ನ ಲಗ್ಗೆರೆಯ ಪಾರ್ವತಿಪುರದಲ್ಲಿ ಇಂದು(ಡಿ.17) ಮಧ್ಯಾಹ್ನ ವಿದ್ಯುತ್ ವೈರ್ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಕ್ರೇನ್ ಆಪರೇಟರ್​ಗೆ ಗೈಡ್ ಮಾಡುತ್ತಿದ್ದ ಜೈನ್ ಕುಮಾರ್(20) ಮೃತ ವ್ಯಕ್ತಿ. ಡಿ.8 ರಂದು ಹಳೇ ಕಟ್ಟಡ ತೆರವು ವೇಳೆ ಗೋಡೆ ಸಮೇತ ಮೊಬೈಲ್ ಟವರ್ ಕಂಬ ನೆರಕ್ಕುರುಳಿತ್ತು. ಇಂದು ಮುರಿದುಬಿದ್ದಿದ್ದ ಟವರ್ ಕಂಬ ತೆರವುಗೊಳಿಸುವಾಗ ವಿದ್ಯುತ್ ಸ್ಪರ್ಶವಾಗಿ ಗಂಭೀರ ಗಾಯಗೊಂಡಿದ್ದರು. ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಜೈನ್ ಕುಮಾರ್ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ಡಿ.8 ರಂದು ಕಟ್ಟಡವೊಂದರ ಮೇಲೆ ಇದ್ದ ಮೊಬೈಲ್ ಟವರ್ ಏಕಾಏಕಿಯಾಗಿ ಧರೆಗುರುಳಿತ್ತು. ಟವರ್​ ಇದ್ದ ಕಟ್ಟಡದ ಪಕ್ಕದಲ್ಲಿ ಹೊಸ ಮನೆ ನಿರ್ಮಾಣ ಮಾಡುವ ಸಲುವಾಗಿ, ಇದ್ದ ಹಳೆ ಮನೆಯನ್ನು ಜೆಸಿಬಿ ಮೂಲಕ ಕೆಡವಲಾಗುತ್ತಿತ್ತು. ಈ ವೇಳೆ ಮೊಬೈಲ್ ಟವರ್ ಧರೆಗುರುಳಿತ್ತು. ಅದೃಷ್ಟವಶಾತ್​ ಮೊಬೈಲ್​ ಟವರ್​ ಪಕ್ಕದ ಬಿಲ್ಡಿಂಗ್​ನಲ್ಲಿದ್ದ 11 ಜನರು ಪ್ರಾಣಾಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ಭೀತಿಗೊಳಿಸುವ ವಿಡಿಯೋ ಇಲ್ಲಿದೆ

ಟವರ್ ಬೀಳುವ ಮುನ್ಸೂಚನೆ ಪಡೆದ ಜನರು, ಕೂಡಲೇ ಎಚ್ಚೆತ್ತು ಕಟ್ಟಡದಲ್ಲಿ ವಾಸಿಸುತ್ತಿದ್ದ ಎಲ್ಲರನ್ನೂ ಹೊರ ಕರೆದಿದ್ದಾರೆ. ನಂತರದ ಕೆಲವೇ ಕ್ಷಣಗಳಲ್ಲಿ ಟವರ್ ಕುಸಿದು ಬಿದಿದ್ದು, ಒಂದು ಹಣ್ಣಿನ ಅಂಗಡಿ ಮತ್ತು ಬಂಬು ಅಂಗಡಿಗೆ ಹಾನಿಯಾಗಿತ್ತು. ಇದೀಗ ಕಂಬವನ್ನು ತೆರೆವು ಕಾರ್ಯಾಚರಣೆ ವೇಳೆ ದುರ್ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:21 pm, Sun, 17 December 23

ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು