ಪತ್ನಿಯನ್ನು ಕೊಂದು ಬಳಿಕ ಪ್ರಾಯಶ್ಚಿತ್ತಕ್ಕೆ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಮಾಡಿಕೊಂಡ ಪತಿ

ಕ್ಷುಲಕ ಕಾರಣಕ್ಕೆ ನಡೆದ ಜಗಳದಲ್ಲಿ ಪತ್ನಿಯನ್ನು ಕೊಂದ ಪತಿ ಬಳಿಕ ಪ್ರಾಯಶ್ಚಿತ್ತಕ್ಕೆ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಮಾಡಿಕೊಂಡಿಕೊಂಡಿರುವ ಘಟನೆ ಬೆಂಗಳೂರಿನ ಆನೇಕಲ್​ನಲ್ಲಿ ನಡೆದಿದೆ.

ಪತ್ನಿಯನ್ನು ಕೊಂದು ಬಳಿಕ ಪ್ರಾಯಶ್ಚಿತ್ತಕ್ಕೆ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಮಾಡಿಕೊಂಡ ಪತಿ
ಪೊಲೀಸರಿಂದ ಪರಿಶೀಲನೆ
Updated By: ರಮೇಶ್ ಬಿ. ಜವಳಗೇರಾ

Updated on: Aug 02, 2023 | 12:25 PM

ಆನೇಕಲ್(ಬೆಂಗಳೂರು), (ಆಗಸ್ಟ್ 02): ಪತ್ನಿಯನ್ನ(Wife) ಮಚ್ಚಿನಿಂದ ಕೊಚ್ಚಿ ಕೊಲೆ (Murder) ಮಾಡಿ ಬಳಿಕ ಪತಿ(Husband) ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಬೆಂಗಳೂರು(Bengaluru) ಹೊರವಲಯ ಆನೇಕಲ್ (Anekal)ತಾಲ್ಲೂಕಿನ ಬಿಕ್ಕನಹಳ್ಳಿಯ ಜನತಾಕಾಲೋನಿಯಲ್ಲಿ ನಡೆದಿದೆ. ವೆಂಕಟಸ್ವಾಮಿ(53) ಎನ್ನುವಾತ ತನ್ನ ಪತ್ನಿ ಲಕ್ಷ್ಮಮ್ಮಳನ್ನು (47) ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇಬ್ಬರು ಹೆಣ್ಣು ಮಕ್ಕಳನ್ನ ಮದುವೆ ಮಾಡಿಕೊಟ್ಟಿದ್ದ ದಂಪತಿ, ಇಬ್ಬರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆದ್ರೆ, ನಿನ್ನೆ (ಆಗಸ್ಟ್ 02) ರಾತ್ರಿ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ನಡೆದ ಗಲಾಟೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ: ಆ ಸಭ್ಯಸ್ಥ ಯುವಕನನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ, ಸ್ವಿಫ್ಟ್ ಕಾರಿನಲ್ಲಿ ಹಿಂಬಾಲಿಸಿ ಹತ್ಯೆಗೈದರು: ಕಾರಣವೇನು?

ನಿನ್ನೆ (ಆಗಸ್ಟ್ 02) ರಾತ್ರಿ ಕ್ಷುಲ್ಲಕ ಕಾರಣ ಇಬ್ಬರ ನಡುವೆ ಗಲಾಟೆ ಆಗಿದ್ದು, ಅದು ವಿಕೋಪಕ್ಕೆ ತಿರುಗಿ ವೆಂಕಟಸ್ವಾಮಿ, ಪತ್ನಿ ಲಕ್ಷ್ಮಮ್ಮಳನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಬಳಿಕ ವೆಂಕಟಸ್ವಾಮಿ ಹೆಂಡತಿಯನ್ನು ಕೊಂದುಬಿಟ್ಟೆ ಎಂದು ಪ್ರಾಯಶ್ಚಿತಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗ್ಗೆ ಅಕ್ಕಪಕ್ಕದ ಮನೆಯ ನಿವಾಸಿಗಳು ನೋಡಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಸರ್ಜಾಪುರ ಪೋಲೀಸರು ಭೇಟಿ ಪರಿಶೀಲನೆ ನಡೆಸಿದರು.

ಹೆಬ್ಬಗೋಡಿ ನಗರಸಭೆ ವಾಟರ್​ಮ್ಯಾನ್ ಆತ್ಮಹತ್ಯೆ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹೆಬ್ಬಗೋಡಿ ನಗರಸಭೆ ವಾಟರ್​ಮ್ಯಾನ್ ಮೀಸೆ ಕೃಷ್ಣಪ್ಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಮ್ಮಸಂದ್ರ ಕ್ರಾಸ್ ಬಳಿ ನಡೆದಿದೆ. ಹಲವು ವರ್ಷಗಳಿಂದ ಹೆಬ್ಬಗೋಡಿ ನಗರಸಭೆ ವಾಟರ್​ಮ್ಯಾನ್ ಕಾರ್ಯ ನಿರ್ವಹಿಸುತ್ತಿದ್ದ ಮೀಸೆ ಕೃಷ್ಣಪ್ಪ, ನಿನ್ನೆ(ಆಗಸ್ಟ್ 1) ರಾತ್ರಿ ಮನೆಯಿಂದ ಹೊರಹೋಗಿ ನೇಣಿಗೆ ಶರಣಾಗಿದ್ದಾನೆ, ಕೃಷ್ಣಪ್ಪ ಆತ್ಮಹತ್ಯೆಗೆ ಅಧಿಕಾರಿಗಳು ಹಾಗೂ ಇಬ್ಬರು ಸದಸ್ಯರ ಒತ್ತಡ ಕಾರಣ ಎಂದು ಕುಟುಂಬಸ್ಥರ ಆರೋಪವಾಗಿದ್ದು, ಈ ಬಗ್ಗೆ ಹೆಬ್ಬಗೋಡಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ