ಟ್ರಿಪಲ್‌ ವೆಸೆಲ್‌ ಕೊರೊನರಿ ಕಾಯಿಲೆಗೆ ತುತ್ತಾಗಿದ್ದ ಮಡಗಾಸ್ಕರ್‌ ದ್ವೀಪದ ವ್ಯಕ್ತಿಗೆ ಬೆಂಗಳೂರಿನಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

|

Updated on: Aug 16, 2024 | 2:45 PM

ಮಡಗಾಸ್ಕರ್‌ ದ್ವೀಪ ದೇಶದ 64 ವರ್ಷದ ವ್ಯಕ್ತಿ ಮಧುಮೇಹ, ಮೂತ್ರಪಿಂಡ ವೈಫಲ್ಯ, ಪ್ರಾಸ್ಟೆಟ್‌ ಗ್ರಂಥಿಯ ಸಮಸ್ಯೆ, ಟ್ರಿಪಲ್‌ ವೆಸೆಲ್‌ ಕೊರೊನರಿ ಕಾಯಿಲೆ ಸೇರಿದಂತೆ ಸಾಕಷ್ಟು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಇದೀಗ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿ ಹೈಬ್ರಿಡ್ ಶಸ್ತ್ರಚಿಕಿತ್ಸೆಯನ್ನು ನಡೆಸಿದೆ.

ಟ್ರಿಪಲ್‌ ವೆಸೆಲ್‌ ಕೊರೊನರಿ ಕಾಯಿಲೆಗೆ ತುತ್ತಾಗಿದ್ದ ಮಡಗಾಸ್ಕರ್‌ ದ್ವೀಪದ ವ್ಯಕ್ತಿಗೆ ಬೆಂಗಳೂರಿನಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ
ಮಡಗಾಸ್ಕರ್‌ ದ್ವೀಪದ ವ್ಯಕ್ತಿಗೆ ಫೋರ್ಟಿಸ್‌ ಆಸ್ಪತ್ರೆಲಿ ಯಶಸ್ವಿ ಚಿಕಿತ್ಸೆ
Follow us on

ಬೆಂಗಳೂರು, ಆ.16: ಹೃದಯದ ಟ್ರಿಪಲ್‌ ವೆಸೆಲ್‌ ಕೊರೊನರಿ (ಮೂರು ಪ್ರಮುಖ ಅಪಧಮನಿಗಳ ಬ್ಲಾಕೇಜ್‌) ಕಾಯಿಲೆಗೆ ಒಳಗಾಗಿದ್ದ ಈಸ್ಟ್‌ ಆಫ್ರಿಕಾ ಮಡಗಾಸ್ಕರ್‌ ದ್ವೀಪ ದೇಶದ 64 ವರ್ಷದ ವ್ಯಕ್ತಿಗೆ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿ ಹೈಬ್ರಿಡ್ ಶಸ್ತ್ರಚಿಕಿತ್ಸೆಯನ್ನು ನಡೆಸಿದೆ. ಫೋರ್ಟಿಸ್‌ ಆಸ್ಪತ್ರೆ(Fortis Hospital)ಯ ಕಾರ್ಡಿಯೋ ಥೋರಾಸಿಕ್ ವಾಸ್ಕಲರ್‌ ಸರ್ಜರಿ ಹಿರಿಯ ಸಮಾಲೋಚಕ ಡಾ. ಸುದರ್ಶನ್‌ ಜಿ.ಟಿ, ಇಂಟರ್‌ವೆನ್ಷನಲ್‌ ಕಾರ್ಡಿಯಾಲಜಿಸ್ಟ್‌ ಡಾ. ಶ್ರೀನಿವಾಸ್‌ ಪ್ರಸಾದ್‌, ಯೂರೋ ಆಂಕಾಲಜಿ ಯುರೋ-ಗೈನಕಾಲಜಿ, ಆಂಡ್ರಾಲಜಿ, ಕಸಿ ಮತ್ತು ರೋಬೋಟಿಕ್ ಸರ್ಜರಿಯ ಹಿರಿಯ ನಿರ್ದೇಶಕ ಡಾ. ಮೋಹನ್‌ ಕೇಶವ್‌ಮೂರ್ತಿ ಅವರ ತಂಡ ಈ ಶಸ್ತ್ರಚಿಕಿತ್ಸೆ ನಡೆಸಿದೆ.

ಈ ಕುರಿತು ಮಾತನಾಡಿದ ಡಾ. ಸುದರ್ಶನ್‌ ಜಿ.ಟಿ, ‘ಮಡಗಾಸ್ಕರ್‌ ದ್ವೀಪ ದೇಶದ 64 ವರ್ಷದ ವ್ಯಕ್ತಿಯ ಆರೋಗ್ಯ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿತ್ತು. ಮಧುಮೇಹ, ಮೂತ್ರಪಿಂಡ ವೈಫಲ್ಯ, ಪ್ರಾಸ್ಟೆಟ್‌ ಗ್ರಂಥಿಯ ಸಮಸ್ಯೆ, ಟ್ರಿಪಲ್‌ ವೆಸೆಲ್‌ ಕೊರೊನರಿ ಕಾಯಿಲೆ ಸೇರಿದಂತೆ ಸಾಕಷ್ಟು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇವರ ಮಧುಮೇಹದ ಕಾರಣದಿಂದ ಕೆಲವು ವರ್ಷಗಳ ಹಿಂದೆಯೇ ತನ್ನೆರಡೂ ಕಾಲುಗಳನ್ನು ಸಹ ಕಳೆದುಕೊಂಡು ಅಂಗವೈಕಲ್ಯಕ್ಕೂ ತುತ್ತಾಗಿದ್ದರು. ಇದರ ಮಧ್ಯೆ ಇವರಿಗೆ ಟ್ರಿಪಲ್‌ ವೆಸೆಲ್‌ ಕೊರೊನರಿ ಕಾಯಿಲೆಯಿಂದ ಹೃದಯದ ನೋವು ಕಾಣಿಸಿಕೊಂಡಿದೆ. ಮಡಗಾಸ್ಕರ್‌ ದ್ವೀಪದಲ್ಲಿ ಹೃದಯ ಸಂಬಂಧಿ ಚಿಕಿತ್ಸೆಗೆ ಸುಧಾರಿತ ವೈದ್ಯಕೀಯ ವ್ಯವಸ್ಥೆ ಇಲ್ಲದ ಕಾರಣ ಅವರು ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು.

ಇದನ್ನೂ ಓದಿ:ರಸ್ತೆ ಅಪಘಾತದಲ್ಲಿ ತೀವ್ರವಾಗಿ ತಲೆಗೆ ಪೆಟ್ಟಾಗಿದ್ದ 19 ವರ್ಷದ ಯುವಕನಿಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

ಈಗಾಗಲೇ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಅವರಿಗೆ ತೆರೆದ ಬೈಪಾಸ್‌ ಸರ್ಜರಿ ಅಸಾಧ್ಯವಾಗಿತ್ತು. ಹೀಗಾಗಿ ಅವರಿಗೆ ರೋಬೋಟ್‌ ನೆರವಿನ “ರೋಬೋಟ್ ಅಸಿಸ್ಟೆಡ್ ಮಿನಿಮಲಿ ಇನ್ವೇಸಿವ್ ಡೈರೆಕ್ಟ್ ಕರೋನರಿ ಆರ್ಟರಿ ಬೈಪಾಸ್ (ಎಂಐಡಿಸಿಎಬಿ) ಎಂಬ ಕನಿಷ್ಠ ಆಕ್ರಮಣಕಾರಿ ವಿಧಾನದ ಹೈಬ್ರಿಡ್‌ ಶಸ್ತ್ರಚಿಕಿತ್ಸೆಯನ್ನು ಮಾಡಲಾಯಿತು. ಇದೊಂದು ನೂತನ ಚಿಕಿತ್ಸೆಯಾಗಿದ್ದು, ಇದು ನೇರ ಪರಿಧಮನಿಯ ಬೈಪಾಸ್‌ ಸರ್ಜರಿ ಮಾಡುವ ಮೂಲಕ ಕಿರಿದಾದ ಅಪಧಮಿಗಳ ರಕ್ತದ ಹರಿವನ್ನು ಸುಧಾರಿಸಬಹುದು ಎಂದು ವಿವರಿಸಿದರು.

ಬಳಿಕ ಡಾ. ಮೋಹನ್ ಕೇಶವಮೂರ್ತಿ ಮಾತನಾಡಿ, ‘ಮೂತ್ರಪಿಂಡದ ವೈಫಲ್ಯ ಹಾಗೂ ಪ್ರಾಸ್ಟೇಟ್‌ ಗ್ರಂಥಿಯ ಸಮಸ್ಯೆ ಹೊಂದಿದ್ದ ಅವರಿಗೆ ಯೂರೋಲಿಫ್ಟ್‌ ಮೂಲಕ ಪ್ರಾಸ್ಟೇಟ್‌ ಗ್ರಂಥಿಯ ಸಮಸ್ಯೆಗೆ ಚಿಕಿತ್ಸೆ ನೀಡಿದೆವು. ಪ್ರಸ್ತುತ ರೋಗಿಯು ಚೇತರಿಕೆಯ ಕಾಣುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ