ಸಿನಿಮೀಯ ರೀತಿಯಲ್ಲಿ ಬ್ಯಾಂಕ್‌ಗೆ ನುಗ್ಗಿ ಚಾಕು ತೋರಿಸಿ ನಗದು- ಚಿನ್ನ ದರೋಡೆ
ಸಿನಿಮೀಯ ರೀತಿಯಲ್ಲಿ ಬ್ಯಾಂಕ್‌ಗೆ ನುಗ್ಗಿದ ಖದೀಮ ಅಪಾರ ಪ್ರಮಾಣದ ನಗದು ಹಾಗೂ ಚಿನ್ನವನ್ನ ದೋಚಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಬೆಂಗಳೂರಲ್ಲಿ ಬ್ಯಾಂಕ್ ಮ್ಯಾನೆಜರ್‌ಗೆ ಚಾಕು ತೋರಿಸಿ ನಗದು ಹಾಗೂ ಚಿನ್ನವನ್ನ ದರೋಡೆ ಮಾಡಿದ ಘಟನೆ ಸಂಭವಿಸಿದೆ. ಸಿನಿಮೀಯ ರೀತಿಯಲ್ಲಿ ಬ್ಯಾಂಕ್‌ಗೆ ನುಗ್ಗಿದ ಖದೀಮ ಅಪಾರ ಪ್ರಮಾಣದ ನಗದು ಹಾಗೂ ಚಿನ್ನವನ್ನ ದೋಚಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಮ್ಯಾನೇಜರ್ಗೆ ಚಾಕು ತೋರಿಸಿ ಹಣ, ಚಿನ್ನ ದರೋಡೆ
ಸರಿಸುಮಾರು ಸಂಜೆ 5.30ರ ಸಮಯ.. ಬೆಂಗಳೂರಿನ ಬಿಟಿಎಂ ಲೇಔಟ್ನ 1ನೇ ಹಂತದಲ್ಲಿರುವ ಎಸ್ಬಿಐ ಬ್ಯಾಂಕಿಗೆ ವ್ಯಕ್ತಿಯೊಬ್ಬ ಗ್ರಾಹಕರ ಸೋಗಿನಲ್ಲಿ ಎಂಟ್ರಿ ಕೊಟ್ಟಿದ್ದಾನೆ. ಬ್ಯಾಂಕ್ ಮ್ಯಾನೇಜರ್ ಹಾಗೂ ಮತ್ತೋರ್ವ ಸಿಬ್ಬಂದಿ ಮಾತ್ರ ಕೆಲಸ ಮಾಡುತ್ತಿದ್ದರು. ಆ ವೇಳೆ ಮುಖಕ್ಕೆ ಮುಸುಕು ಧರಿಸಿ, ಕೈಯಲ್ಲಿ ಚೂರಿ ಹಿಡಿದು ಎಂಟ್ರಿ ಕೊಟ್ಟ ದರೋಡೆಕೋರ, ನೇರವಾಗಿ ಮ್ಯಾನೇಜರ್ ರೂಂಗೆ ಹೋಗಿದ್ದಾನೆ. ತನ್ನ ಕೈಯಲ್ಲಿದ್ದ ಚೂರಿ ತೋರಿಸಿದ್ದಾನೆ. ಮ್ಯಾನೇಜರ್ಗೆ ಬೆದರಿಸಿ 3.75 ಲಕ್ಷ ರೂ. ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ.
ಘಟನೆ ಬಳಿಕ ಬ್ಯಾಂಕ್ ಮ್ಯಾನೇಜರ್ ಮಡಿವಾಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಬ್ಯಾಂಕ್ ಒಳಗೆ ಹಾಗೂ ಅಕ್ಕಪಕ್ಕದಲ್ಲಿ ಅಳವಡಿಸಿದ್ದ ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಆರೋಪಿಯು ಬ್ಯಾಂಕ್ ಬಗ್ಗೆ ಮೊದಲೇ ಮಾಹಿತಿ ಸಂಗ್ರಹಿಸಿ ಕೃತ್ಯ ಎಸಗಿರುವುದು ಕಂಡು ಬಂದಿದೆ.
ಸದ್ಯ ಘಟನೆ ಸಂಬಂಧ ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಾಗಿ ಪೊಲೀಸರು ತಲಾಶ್ ನಡೆಸ್ತಿದ್ದಾರೆ. ಮತ್ತೊಂದೆಡೆ ಘಟನೆ ಸಮಯದಲ್ಲಿ ಸೆಕ್ಯುರಿಟಿ ಗಾರ್ಡ್ ಇಲ್ಲದಿದ್ದದ್ದು ಎಷ್ಟು ಸರಿ ಎಂಬ ಪ್ರಶ್ನೆ ಸಹ ಮೂಡಿದೆ.