ಕಿಡ್ನಿ ಆಪರೇಷನ್​ಗೆ ಬಂದವನ ಹೊಟ್ಟೆಯಲ್ಲಿತ್ತು 11 ಕೋಟಿ ರೂ. ಮೌಲ್ಯದ ಮಾದಕ ವಸ್ತು..!

Crime News In Kannada: ಈ ಹಿಂದೆ ಕೂಡ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಗುಪ್ತಾಂಗದಲ್ಲಿ ಸುಮಾರು 8 ಕೋಟಿ ಮೌಲ್ಯದ ಕೊಕೇನ್ ಸಾಗಣೆ ಮಾಡುತ್ತಿದ್ದ ಗ್ವಾಟೆಮಾಲಾ ವಿದೇಶಿ ಮಹಿಳೆಯನ್ನು ಬಂಧಿಸಲಾಗಿತ್ತು.

ಕಿಡ್ನಿ ಆಪರೇಷನ್​ಗೆ ಬಂದವನ ಹೊಟ್ಟೆಯಲ್ಲಿತ್ತು 11 ಕೋಟಿ ರೂ. ಮೌಲ್ಯದ ಮಾದಕ ವಸ್ತು..!
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 21, 2021 | 7:01 PM

ಮಾದಕ ವಸ್ತು ಕಳ್ಳ ಸಾಗಣೆ ಮಾಡುತ್ತಿದ್ದ ವಿದೇಶಿ ವ್ಯಕ್ತಿಯೊಬ್ಬನನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಬಂಧಿತನನ್ನು ಆಫ್ರಿಕಾ ಮೂಲದ ಪ್ರಜೆ ಎಂದು ಗುರುತಿಸಲಾಗಿದ್ದು, ಈತ ಸುಮಾರು 1.3 ಕೆ.ಜಿ ಕೊಕೇನ್ ಮಾತ್ರೆಗಳನ್ನು ಸಾಗಟ ಮಾಡಲು ಯತ್ನಿಸಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಬೆಂಗಳೂರು ಕಂದಾಯ ಗುಪ್ತಚರ ನಿರ್ದೇಶನಾಲಯ ( ಡಿಆರ್‌ಐ ) ತಂಡವು ಮಾದಕ ವಸ್ತು ಕಳ್ಳ ಸಾಗಣೆದಾರನಿಗಾಗಿ ಬಲೆ ಬೀಸಿದ್ದರು. ಅದರಂತೆ ಸುಮಾರು 11 ಕೋಟಿ ರೂ. ಮೌಲ್ಯದ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ವಿದೇಶದಿಂದ ಕೊಕೇನ್ ಸಾಗಾಟ ಮಾಡುತ್ತಿರುವ ಸುಳಿವೊಂದು ಡಿಆರ್​ಐಗೆ ಲಭಿಸಿತ್ತು. ಹೀಗಾಗಿ ಪಶ್ಚಿಮ ಏಷ್ಯಾದಿಂದ ಬಂದ ವಿಮಾನದಲ್ಲಿ ಪ್ರಯಾಣಿಕರ ವಿವರಗಳನ್ನು ಪಡೆದು ಪರಿಶೀಲಿಸಲಾಗಿತ್ತು. ಇದೇ ವೇಳೆ ಮೂತ್ರಪಿಂಡದ ಚಿಕಿತ್ಸೆಗಾಗಿ ಬೆಂಗಳೂರಿಗೆ ಬಂದಿರುವುದಾಗಿ 30 ವರ್ಷದ ವ್ಯಕ್ತಿಯೊಬ್ಬ ವೈದ್ಯಕೀಯ ಉದ್ದೇಶಗಳಿಗಾಗಿ ವೀಸಾ ಪಡೆದಿದ್ದನು. ಆತನನ್ನು ತಡೆದು ವಿಚಾರಣೆ ನಡೆಸಲಾಯಿತು. ಈ ವೇಳೆ ಆತನ ನಡುವಳಿಕೆ ಸಂಶಯಕ್ಕೆ ಕಾರಣವಾಗಿತ್ತು. ಆದರೆ ಯಾವುದೇ ರೀತಿಯಲ್ಲೂ ಪರಿಶೀಲಿಸಿದರೂ ಆತನ ಬಳಿ ಮಾದಕ ವಸ್ತುಗಳು ಕಂಡು ಬಂದಿರಲಿಲ್ಲ. ಇದಾಗ್ಯೂ ಸಂಶಯದ ಆಧಾರದ ಮೇಲೆ ಆತನನ್ನು ವೈದ್ಯಕೀಯ ಸ್ಕ್ಯಾನ್‌ಗಾಗಿ ಕರೆದೊಯ್ದಿದ್ದಾರೆ. ಈ ವೇಳೆ ಆತನ ಹೊಟ್ಟೆಯಲ್ಲಿ ಕೊಕೇನ್ ಮಾತ್ರೆಗಳಿರುವುದು ಕಂಡು ಬಂದಿದೆ ಎಂದು ಡಿಆರ್‌ಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳನ್ನು ಮಾತ್ರೆಗಳ ರೂಪದಲ್ಲಿ ಸಾಗಿಸಲಾಗುತ್ತಿದೆ. ಇದೇ ಮಾದರಿಯಲ್ಲಿ ಈತ ಕೂಡ ಕೊಕೋನ್ ಅನ್ನು ಮಾತ್ರೆಗಳ ರೂಪಕ್ಕೆ ಪರಿವರ್ತಿಸಿ ನುಂಗಿದ್ದಾನೆ. ಇದರಿಂದ ಅನುಮಾನಗೊಂಡರೂ ಈತನನ್ನು ಪರಿಶೀಲಿಸಿದಾಗ ಯಾವುದೇ ಡ್ರಗ್ಸ್ ಪತ್ತೆಯಾಗಿರಲಿಲ್ಲ. ಇದಾಗ್ಯೂ ಸ್ಕ್ಯಾನ್ ಮಾಡಿದಾಗ ಹೊಟ್ಟೆಯಲ್ಲಿ ಕೊಕೇನ್ ಮಾತ್ರೆಗಳು ಇರುವುದು ಕಂಡು ಬಂದಿದೆ. ಇದೀಗ ಆಸ್ಪತ್ರೆಯಲ್ಲೇ ಕೊಕೇನ್ ಮಾತ್ರೆಗಳನ್ನು ಹೊರ ತೆಗೆಯಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಹಿಂದೆ ಕೂಡ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಗುಪ್ತಾಂಗದಲ್ಲಿ ಸುಮಾರು 8 ಕೋಟಿ ಮೌಲ್ಯದ ಕೊಕೇನ್ ಸಾಗಣೆ ಮಾಡುತ್ತಿದ್ದ ಗ್ವಾಟೆಮಾಲಾ ವಿದೇಶಿ ಮಹಿಳೆಯನ್ನು ಬಂಧಿಸಲಾಗಿತ್ತು. ಇದೀಗ ಮತ್ತೋರ್ವ ಆರೋಪಿ ಕೂಡ ಸಿಕ್ಕಿ ಬಿದ್ದಿದ್ದು, ಈ ತಂಡಗಳ ಜಾಲವನ್ನು ಪತ್ತೆ ಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ: 17 ವರ್ಷದ ಹುಡುಗಿಗೆ 35 ವರ್ಷದವನ ಜೊತೆ ಲವ್ವಿ-ಡವ್ವಿ: ಲಾಡ್ಜ್​ನಲ್ಲಿ ಇಬ್ಬರನ್ನು ನೋಡಿ ಬೆಚ್ಚಿಬಿದ್ದ ಸಿಬ್ಬಂದಿ

ಇದನ್ನೂ ಓದಿ:Mohammed Siraj: ಸಿ-ರಾಜ…ಗೆಟೌಟ್ ಅಂದವರೇ ಕಟೌಟ್ ನಿಲ್ಲಿಸಿದ್ರು 

ಇದನ್ನೂ ಓದಿ: Afghanistan Crisis: ತಾಲಿಬಾನ್ ಗ್ಯಾಂಗ್​ ಜೊತೆ ಕಾಣಿಸಿಕೊಂಡ ಅಫ್ಘಾನಿಸ್ತಾನ್ ಕ್ರಿಕೆಟಿಗ

ಇದನ್ನೂ ಓದಿ: ಲಕ್ಷ್ಮಣ್ ಅವರಿಂದ ಆಟೋಗ್ರಾಫ್ ಪಡೆಯುತ್ತಿರುವ ಟೀಮ್ ಇಂಡಿಯಾದ ಈ ಆಟಗಾರ ಯಾರೆಂದು ಗುರುತಿಸಬಲ್ಲಿರಾ?

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ